Wednesday, April 10, 2024

ಆಸ್ತಿ ವಿಚಾರಕ್ಕೆ ನಡೆದ ಹಲ್ಲೆ ಪ್ರಕರಣ : ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು, ನಾಲ್ವರ ವಿರುದ್ಧ ಪ್ರಕರಣ ದಾಖಲು

ವಿಟ್ಲ: ವಿಟ್ಲ ಕಸಬ ಗ್ರಾಮದ ದಾಸರಬೆಟ್ಟು ಎಂಬಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಹಲ್ಲೆ ಪ್ರಕರಣದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.‌

ದಾಸರಬೆಟ್ಟು ನಿವಾಸಿ ಇಬ್ರಾಹಿಂ ಮೃತಪಟ್ಟವರಾಗಿದ್ದು, ಆರೋಪಿಗಳನ್ನು ಸುಲೈಮಾನ್‌, ಅಬೂಬಕ್ಕರ್‌, ಹಸೈನಾರ್‌, ನಾಸೀರ್‌ ಎಂದು ಗುರುತಿಸಲಾಗಿದೆ. ಅವರ ಪೈಕಿ ಸುಲೈಮಾನ್ ಮತ್ತು ನಾಸೀರ್ ಎಂಬವರನ್ನು ಈ ಹಿಂದೆಯೇ ಪೊಲೀಸರು ಬಂಧಿಸಿದ್ದು, ಜೈಲಿ ನಲ್ಲಿದ್ದಾರೆ.

ಘಟನೆಯ ವಿವರ:

ಇಬ್ರಾಹಿಂ ಮತ್ತು ಅವರ ಅಣ್ಣ ದಿ. ಮಮ್ಮದೆ ಬ್ಯಾರಿರವರ ಮಕ್ಕಳಾದ ಸುಲೈಮಾನ್‌, ಅಬೂಬಕ್ಕರ್‌ ಹಾಗೂ ಹಸೈನಾರ್‌ ರವರಿಗೆ ಜಮೀನಿಗೆ ಸಂಬಂದಧಿಸಿದಂತೆ ಗಲಾಟೆ ನಡೆಯುತ್ತಿದ್ದು, ಬಳಿಕ ರಾಜಿ ಸಂಧಾನದಲ್ಲಿ ಮುಕ್ತಾಯಗೊಂಡಿದ್ದು, ಮಮ್ಮದೆ ಬ್ಯಾರಿರವರ ಜಮೀನು ನೋಂದಣಿಗೆ ಬಾಕಿ ಇದ್ದು, ಅವರ ಮಕ್ಕಳು ಈ ಬಗ್ಗೆ ತಕರಾರು ಮಾಡುತ್ತಿದ್ದು ಫೆಬ್ರವರಿ 21ರಂದು ಇಬ್ರಾಹಿಂ ಬೆಳಿಗ್ಗೆ ತೋಟಕ್ಕೆ ಹೋದ ಸಮಯ ಆರೋಪಿಗಳಾದ ಸುಲೈಮಾನ್‌, ಅಬೂಬಕ್ಕರ್‌ ಹಸೈನಾರ್‌ ಹಾಗೂ ನೆರೆಯ ನಾಸೀರ್‌ ಅವರು ಜಮೀನು ವಿಚಾರದಲ್ಲಿ ಗಲಾಟೆ ನಡೆಸಿದ್ದರು. ಈ ಸಂದರ್ಭ ಆರೋಪಿಗಳು ತೋಟದಲ್ಲಿದ್ದ ಕಲ್ಲುಗಳನ್ನು ಹಾಗೂ ಮರದ ತುಂಡೊಂದನ್ನು ಹೆಕ್ಕಿಕೊಂಡು ಇಬ್ರಾಹಿಂ ಅವರ ಕಡೆ ಎಸೆದಾಗ ಮರದ ತುಂಡು ಅವರ ತಲೆಯ ಬಲಭಾಗಕ್ಕೆ ತಾಗಿ ತಲೆಯ ಒಳಭಾಗಕ್ಕೆ ಗಂಭೀರ ಗಾಯವಾಗಿ ಕುಸಿದ ಬಿದ್ದಿದ್ದಾರೆ. ಇದನ್ನು ನೋಡಿದ ಇಬ್ರಾಹಿಂ ಅವರ ಮಗ ಅಬ್ದುಲ್‌ ಲತೀಫ್‌ ಆಸ್ಪತ್ರೆಗೆ ದಾಖಲಿಸಿದ್ದರು. ಈ ಬಗ್ಗೆ ವಿಟ್ಲ‌ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಮತ್ತಿಬ್ಬರು ಆರೋಪಿಗಳು ಪರಾರಿಯಾಗಿದ್ದರು.

ಇನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ರಾಹಿಂ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಇದೀಗ ನಾಲ್ವರು ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.‌

More from the blog

ಮನೆಗೆ‌ ನುಗ್ಗಿ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ...

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...