Thursday, April 11, 2024

ಮನೆಗೆ ಅಕ್ರಮ ಪ್ರವೇಶಗೈದು ಕಟ್ಟಿಗೆ ಸಂಗ್ರಹಿಸುವ ಕೊಠಡಿಗೆ ಬೆಂಕಿ ಹಚ್ಚಿ ಬೆದರಿಕೆಯೊಡ್ಡಿದ ಪ್ರಕರಣ – ಓರ್ವನ ಬಂಧನ

ವಿಟ್ಲ: ಕರೋಪಾಡಿ ಗ್ರಾಮದ ಕೆದುಮೂಲೆಯಲ್ಲಿ ಮೋರಿ ಕಾಮಗಾರಿಗೆ ಆಕ್ಷೇಪಿಸಿದ ಕಾರಣಕ್ಕಾಗಿ ತಂಡವೊಂದು ನನಗೆ ಹಾಗೂ ನನ್ನ ತಂದೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿ, ಮನೆ ಸಮೀಪವಿದ್ದ ಕಟ್ಟಿಗೆಯಿದ್ದ ಕೊಠಡಿಗೆ ಬೆಂಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒರ್ವ ಆರೋಪಿಯನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ‌.

ಬಂಟ್ವಾಳ ತಾಲೂಕು ಸೇರಾಜೆ ನಿವಾಸಿ ಮಹಮ್ಮದ್ ರ ಪುತ್ರ ರಝಾಕ್ ಬಂಧಿತ ಆರೋಪಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಸೆ ಕಲಿಂ ತಲೆಮರೆಸಿಕೊಂಡಿದ್ದಾರೆ.

ರಝಾಕ್ ಹಾಗೂ ಮೂಸೆ ಕಲಿಂ ಎಂಬವರು ಸ್ಥಳೀಯ ನಿವಾಸಿ ಮಹಮ್ಮದ್ ಎಂಬವರ ಮನೆ ಮುಂದೆ ಮೋರಿ ಕಾಮಗಾರಿ ನಡೆಸುತ್ತಿದ್ದುದನ್ನು ಮಹಮ್ಮದ್‌ ರವರು ಆಕ್ಷೇಪಿಸಿದ್ದರು. ಸಿಟ್ಟಿಗೆದ್ದ ರಝಾಕ್ ಮತ್ತು ಮೂಸೆ ಕಲೀಂ ರವರ ಸೇರಿಕೊಂಡುಮಹಮ್ಮದ್ ಅವರನ್ನು ದೂಡಿ ಹಾಕಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ಕಿಟಕಿಯನ್ನು ಒಡೆದು, ಅವಾಚ್ಯ ಶಬ್ದಗಳಿಂದ ಬೈದು, ಮನೆಗೆ ಹೊಂದಿಕೊಂಡಿರುವ ಕಟ್ಟಿಗೆ ಸಂಗ್ರಹಿಸುವ ಕೊಠಡಿಗೆ ಬೆಂಕಿ ಹಚ್ಚಿ ಕೊಲ್ಲುವ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ ಎಂದು ಆರೋಪಿಸಿ ಮಹಮ್ಮದ್‌ ಅವರ ಪುತ್ರಿ ಝರಾರವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಕಟ್ಟಿಗೆ ಸಂಗ್ರಹಿಸುವ ಕೊಠಡಿ ಸುಟ್ಟು ಹೋಗಿದ್ದಲ್ಲದೆ ಮನೆಯ ಕಿಟಕಿಯ ಗಾಜು ಪುಡಿಯಾಗಿ ಒಟ್ಟು 25,000 ರೂ. ನಷ್ಟವಾಗಿದೆ ಎಂದು ಅವರು ನೀಡಿದ ದೂರಿನಲ್ಲಿ ತಿಳಿಸಿದ್ದರು.

ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡ ವಿಟ್ಲ ಠಾಣಾ ಪೊಲೀಸರು ಆರೋಪಿಗಳ ಪೈಕಿ ಓರ್ವನನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.

More from the blog

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಎಳನೀರು ಕುಡಿದು ಅಸ್ವಸ್ಥ ಪ್ರಕರಣ : ಫ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ

ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...