Sunday, April 7, 2024

ಶಿಬಿರ ಜೀವನಕ್ಕೆ ದಾರಿ ದೀಪವಾಗಲಿ: ಡಾ. ಪ್ರಭಾಕರ ಭಟ್

ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.

ಈ ವೇಳೆ ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಅವರು, ಕಲ್ಲಡ್ಕ ಶಿಬಿರದಲ್ಲಿ ಕಲಿತ ಶಿಕ್ಷಣ ವಿದ್ಯಾರ್ಥಿಗಳ ಜೀವನಕ್ಕೆ ದಾರಿ ದೀಪವಾಗಲಿ. 7 ದಿನಗಳ ಕಾಲ ಮನೆ ಬಿಟ್ಟು, ಶ್ರಮದಾನದಿಂದ ಹಿಡಿದು ಊಟ ತಯಾರಿಸುವರೆಗಿನ ಶಿಕ್ಷಣ ಮುಂದಿನ ಬಾಳಿಗೆ ಪೂರಕವಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ  ಅತಿಥಿಗಳಾಗಿ ಆಗಮಿಸಿದ ಹಿರಿಯರಾದ ಕೃಷ್ಣಭಟ್ ಮೀರಾವನ, ಅಶ್ವಥ್ ಪಿ,ಸುಂದರ ಭಟ್ ಮುದ್ರಾಜೆ, ಸುಬ್ರಹಣ್ಯ ಭಟ್ ಬಡೆಕ್ಕಿಲ, ಸೀತಾರಾಮ ಭಟ್ ಬಡೆಕ್ಕಿಲ, ಚಂದ್ರಶೇಖರ ಭಟ್ ಬಡೆಕ್ಕಿಲ, ಈಶ್ವರ ಸಪಲ್ಯ, ಕೇಶವ ಗೌಡ ಕಾಂತುಕೋಡಿ,ಧರ್ಣಪ್ಪ ಗೌಡ , ಕಾಂತಪ್ಪ ಗೌಡ, ಸ ಪ್ರಾಚಾರ್ಯರಾದ ಕೃಷ್ಣಪ್ರಸಾದ್ ಕೆ ಎನ್, ಸಹ ಶಿಬಿರಾಧಿಕಾರಿ ಕು. ದೀಕ್ಷಿತಾ, ಉಪನ್ಯಾಸಕರಾದ ಸುಕನ್ಯಾ ,ಕವಿತಾ , ರಕ್ಷಾ, ಪ್ರಸನ್ನ  ಉಪಸ್ಥಿತರಿದ್ದರು.

ಶಿಬಿರದ ಅನುಭವಗಳನ್ನು ವಿದ್ಯಾರ್ಥಿಗಳಾದ ಮನ್ವಿತಾ, ಸಂಪತ್, ಪುನೀತಾ ಹಂಚಿಕೊಂಡರು. ಹಿರಿಯರಾದ ಶಿವರಾಂ ಭಟ್ ತನ್ನ ಅನುಭವವನ್ನು ಹೇಳಿದರು.

ಶಿಬಿರಾಧಿಕಾರಿ ಯತಿರಾಜ್ ಪಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಬಿರಾರ್ಥಿ ಮನ್ವಿತಾ ಪ್ರಾರ್ಥನೆ ಹಾಡಿ, ಚೈತ್ರಾ ಪಿ ವಂದಿಸಿ, ವಿಸ್ಮಿತ ಕಾರ್ಯಕ್ರಮ ನಿರೂಪಿಸಿದರು

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...