Thursday, April 11, 2024

ಬಂಟ್ವಾಳ ತಾಲೂಕು ಮಟ್ಟದ ಮಹಾವೀರ ಜಯಂತಿ ಆಚರಣೆ

ಬಂಟ್ವಾಳ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಇಂದು ಮಂಗಳವಾರ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಮಹಾವೀರ ಜಯಂತಿ ಆಚರಣೆಯನ್ನು ಆಚರಿಸಲಾಯಿತು.

ತಹಶೀಲ್ದಾರ್ ಎಸ್.ಬಿ ಕೂಡಲಗಿ ಅವರು ದೀಪ ಪ್ರಜ್ವಲಿಸಿ ಸರ್ವ ಧರ್ಮ ಸಮಭಾವ ಇರುವ ನಮ್ಮ ದೇಶದಲ್ಲಿ ಅಹಿಂಸೆಯ ಮೂಲಕ ಸಮನ್ವತೆಯಿಂದ ಬಾಳ ಬಹುದಾಗಿದೆ ಎಂದು ಹೇಳಿ ಸರ್ಕಾರದ ವತಿಯಿಂದ ಆಚರಿಸಲ್ಪಡುವ ಮಹಾವೀರ ಜಯಂತಿಗೆ ಶುಭ ಕೋರಿದರು.

ಇದೇ ಸಂದರ್ಭದಲ್ಲಿ ಬಂಟ್ವಾಳ ಜೈನ್ ಮಿಲನ್ ಅಧ್ಯಕ್ಷರಾದ ವೀರ್ ದೀಪಕ್ ಕುಮಾರ್ ಅವರು ಮಾತನಾಡಿ ಬದುಕು, ಬದುಕಲು ಬಿಡು ಎಂಬ ಸಂದೇಶವನ್ನು ವಿಶ್ವಕ್ಕೆ ಸಾರಿದ ಭಗವಾನ್ ಮಹಾವೀರರ ಸಂದೇಶಗಳು ಪ್ರಸ್ತುತ. ಆಹಿಂಸೆಯಿಂದ ಸುಖ , ತ್ಯಾಗದಿಂದ ಶಾಂತಿ ಈ ಸಂದೇಶವು ಎಂದಿಗೂ ಸತ್ಯವಾಗಿರುತ್ತದೆ ಇದನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಭಾರತೀಯ ಜೈನ್ ಮಿಲನ್ ಮಂಗಳೂರು ವಲಯ ಕಾರ್ಯದರ್ಶಿ ವೀರ್ ಸುಭಾಷ್ ಚಂದ್ರ ಜೈನ್, ವೀರಾಂಗನೆ ವಿಜಯ ಕುಮಾರಿ ಇಂದ್ರ, ವೀರಾಂಗನೆ ಸನ್ಮತಿ ಇಂದ್ರ, ವೀರಾಂಗನೆ ಗೀತಾ ಜಿನಚಂದ್ರ, ವೀರಾಂಗನೆ ಚಂದನಾ ಬ್ರಿಜೇಶ್ ಬಾಳ್ತಿಲ, ವೀರ್ ಹೇಮಂತ್ ಜೈನ್,ವೀರ್ ಜಿನೇಂದ್ರ ಜೈನ್, ವೀರ್ ಅಜಿತ್ ಕುಮಾರ್, ವೀರ್ ರಾಜೇಂದ್ರ ಜೈನ್, ವೀರ್ ಪ್ರವೀಣ್ ಕುಮಾರ್, ವೀರ್ ಸುರೇಶ್ ಜೈನ್, ವೀರ್ ಬೋಜರಾಜ್ ಜೈನ್ ವಗ್ಗ, ವೀರ್ ರಾಜೇಂದ್ರ ಪೆರ್ಲ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ಉಪಸ್ಥಿತರಿದ್ದರು.

More from the blog

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಎಳನೀರು ಕುಡಿದು ಅಸ್ವಸ್ಥ ಪ್ರಕರಣ : ಫ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ

ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...