Sunday, April 7, 2024

ಶ್ರೀ ಬಸವೇಶ್ವರ ದೇವಸ್ಥಾನದ ವೈಭವದ ಜಾತ್ರಾ ಮಹೋತ್ಸವ

ಶ್ರೀ ಬಸವೇಶ್ವರ ದೇವಸ್ಥಾನ, ಬಸವನಮೂಲೆ ಕುಲ್ಕುಂದ ಸುಬ್ರಹ್ಮಣ್ಯ ಇದರ ಜಾತ್ರಾ ಮಹೋತ್ಸವವು ವಿವಿಧ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ವೈಭವದಿಂದ ಎ.19 ಮತ್ತು ಎ.20 ರಂದು ನಡೆಯಿತು.

ಎ.19 ರ ಬೆಳಗ್ಗೆ ಹಸಿರು ಕಾಣಿಕೆ ಸಮರ್ಪಣೆ ನಡೆಯಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆದು, ಸಾಯಂಕಾಲ ಸಂಜೆ ದೇವಸ್ಥಾನದಲ್ಲಿ ಪ್ರಾಸಾದ ಶುದ್ಧಿ ವಾಸ್ತು ಹೋಮ, ವಾಸ್ತು ಬಲಿ, ಪುಣ್ಯಾಹವಾಚನ ನಡೆಯಿತು.

ರಾತ್ರಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಏ.20 ರ ಬೆಳಗ್ಗೆ ಗಣಪತಿ ಹವನ, ಕಲಶ ಪೂಜೆ, ಮಹಾಪೂಜೆ ನಡೆದು ಪೂರ್ವಾಹ್ನ ಶತರುದ್ರಾಭಿಷೇಕ ನಡೆಯಿತು. ಪರಿವಾರ ದೇವರುಗಳಿಗೆ ಕಲಶತಂಬಿಲ ಸೇವೆ, ಶ್ರೀ ಬಸವೇಶ್ವರ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆದು ಸಂಜೆ ದೀಪಾರಾಧನೆ, ತಾಯಂಬಕ, ರಂಗಪೂಜೆ ರಾತ್ರಿ ಶ್ರೀ ಭೂತ ಬಲಿ ನಡೆದು ಪಲ್ಲಕ್ಕಿ ಉತ್ಸವ, ಕಟ್ಟೆಪೂಜೆ, ದರ್ಶನಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ ವಿತರಿಸಲಾಯಿತು. ಬಳಿಕ ಮಂತ್ರಾಕ್ಷತೆ ಹಾಗೂ ಅನ್ನ ಸಂತರ್ಪಣೆ ನಡೆಯಿತು. ದೇವಸ್ಥಾನದ ಆಡಳಿತ ಮಂಡಳಿ, ಜೀರ್ಣೋದ್ಧಾರ ಸಮಿತಿ, ಬೈಲುವಾರು ಸಮಿತಿಯವರು ಕಾರ್ಯಕ್ರಮ. ಯಶಸ್ವಿಗೆ ಸಹಕರಿಸಿದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...