Thursday, April 18, 2024

ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ : ಓರ್ವ ಮೃತ್ಯು

ಬಂಟ್ವಾಳ: ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಎ.7 ರಂದು ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಿಸಿರೋಡಿನಲ್ಲಿ ನಡೆದಿದೆ.

ನಂದರಬೆಟ್ಟು ನಿವಾಸಿ ಸದಾಶಿವ ಆಚಾರ್ಯ ಮೃತಪಟ್ಟ ವ್ಯಕ್ತಿ.

ಜೊತೆಗೆ ಸದಾಶಿವ ಅವರ ಮೊಮ್ಮಗ ಚಾಲಕ ಅಕಾಶ್, ಅಳಿಯ ಸುರೇಶ್ ಆಚಾರ್ಯ, ಮಗ ಗಣೇಶ್ ಆಚಾರ್ಯ ಅವರು ಅಲ್ಪಸ್ವಲ್ಪ ಗಾಯಗಳಿಂದ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

ಎರಿಟಿಗ ಕಾರಿನಲ್ಲಿ ಪುತ್ತೂರಿನಿಂದ ದೇವರ ಕಾರ್ಯದಲ್ಲಿ ಭಾಗಿಯಾಗಿ ವಾಪಾಸು ಮನೆಗೆ ಬರುವ ವೇಳೆ ಬಿಸಿರೋಡಿನ ಅಜ್ಜಿಬೆಟ್ಟು ಕ್ರಾಸ್ ಸಮೀಪದಲ್ಲಿ ಈ ಅವಘಡ ಸಂಭವಿಸಿದೆ. ಚಾಲಕನ ಅಜಾಗರೂಕತೆಯಿಂದ ಡಿವೈಡರ್ ಗೆ ಗುದ್ದಿದ ಕಾರು ಅ ಬಳಿಕ ಪಲ್ಟಿಯಾಗಿದೆ.

ಕಾರಿನಲ್ಲಿ ಚಾಲಕ ಸೇರಿ ನಾಲ್ಕು ಜನ ಒಂದೇ ಮನೆಯವರು ಪ್ರಯಾಣಿಸುತ್ತಿದ್ದರು.  ಪುತ್ತೂರು ಸಂಬಂಧಿಕರ ಮನೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಮನೆಗೆ ಇನ್ನೇನು ಕೇವಲ 5 ನಿಮಿಷಗಳ ಕಾಲದಲ್ಲಿ ಮುಟ್ಟುವ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ತಲೆಗೆ ಗಾಯವಾಗಿದ್ದ ಸದಾಶಿವ ಅವರನ್ನು ಕೈಕಂಬ ಪರ್ಲಿಯಾ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಮೃತಪಟ್ಟ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ.

ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಎಸ್.ಐ.ಮೂರ್ತಿ ಅವರು ಬೇಟಿ ನೀಡಿದ್ದಾರೆ

More from the blog

ಬಿಸಿರೋಡಿನ ವಾಣಿಜ್ಯ ಕಟ್ಟಡದ ಜಗುಲಿಯಲ್ಲಿ ಚೆಲ್ಲಿರುವ ರಕ್ತ : ಹಲವು ಅನುಮಾನ

ಬಂಟ್ವಾಳ: ಬಿಸಿರೋಡಿನ ವಾಣಿಜ್ಯ ಮಳಿಗೆಯ ಮುಂಭಾಗವೊಂದರಲ್ಲಿ ರಕ್ತ ಚೆಲ್ಲಿರುವುದು ಕಂಡು ಬಂದಿದ್ದು, ಅಂಗಡಿ ಮಾಲಕರಲ್ಲಿ ಒಂದಷ್ಟು ಗೊಂದಲ ಉಂಟಾದ ಘಟನೆ ನಡೆದಿದೆ. ಎ.18 ರಂದು ಬೆಳಿಗ್ಗೆ ತಾ.ಪಂ. ನ ವಾಣಿಜ್ಯ ಕಟ್ಟಡವೊಂದರ ಜಗುಲಿಯಲ್ಲಿ ರಕ್ತ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಹಿಮ್ಮುಖವಾಗಿ ಚಲಿಸಿದ ಪಿಕಪ್‌… ವ್ಯಕ್ತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಪಿಕಪ್‌ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ರುಕ್ಮ ಮುಗೇರ ಹಾಗೂ ನಾಗೇಶ್‌ ಅವರು ಪಿಕಪ್‌ ವಾಹನದಲ್ಲಿ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...