Friday, April 12, 2024

ಕಾಂಗ್ರೆಸ್ ಗೆದ್ದರೆ ಪಿ.ಎಫ್.ಐ.ಬೆಳೆಯುತ್ತದೆ: ಅಣ್ಣಾಮಲೈ , ಬಂಟ್ವಾಳ ಬಿಜೆಪಿ ಚುನಾವಣಾ ಕಚೇರಿಗೆ ಬೇಟಿ ನೀಡಿ,ರಾಜೇಶ್ ನಾಯ್ಕ್ ಅವರನ್ನು ಗೆಲ್ಲಿಸಿ ಎಂದ ಅಣ್ಣಾಮಲೈ

ಬಂಟ್ವಾಳ: ನಮ್ಮ ನಾಯಕರು ಹೇಳುವಂತೆ ಕಾಂಗ್ರೆಸ್ ರಿವರ್ಸ್ ಗೇರ್ ಮೂಲಕ ಸಾಗುತ್ತಿದ್ದು, ಅವರು ಗೆದ್ದಾರೆ ರಾಜ್ಯದಲ್ಲಿ ಮತ್ತೆ ಪಿಎಫ್‌ಐ ಬೆಳೆಯುತ್ತದೆ. ಮುಸ್ಲಿಂ ಮಹಿಳೆಯರು ಕೂಡ ಬಿಜೆಪಿಯನ್ನು ಬೆಂಬಲಿಸುವ ತೀರ್ಮಾನ ಕೈಗೊಂಡಿದ್ದು, ಮುಸ್ಲಿಂಮರ ೪ ಶೇ. ಮೀಸಲಾತಿಯ ವಿಚಾರವನ್ನು ಕಾಂಗ್ರೆಸ್ ಟ್ವಿಸ್ಟ್ ಮಾಡುವ ಕಾರ್ಯ ಮಾಡುತ್ತಿದೆ. ಇದನ್ನು ಜನರಿಗೆ ಅರ್ಥ ಮಾಡಿಸುವ ಕಾರ್ಯ ಮಾಡಬೇಕು ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದರು.

ಅವರು ಬಂಟ್ವಾಳ ಬಿಜೆಪಿ ಕಚೇರಿಗೆ ಭೇಟಿ ನೀಡಿ ಮಾತನಾಡಿದರು. ಶಾಸಕ ರಾಜೇಶ್ ನಾಯ್ಕ್ ಅವರ ಮೂಲಕ ಬಂಟ್ವಾಳದಲ್ಲಿ ಕಾನೂನು ಸುವ್ಯವಸ್ಥೆಯ ಜತೆ ನಡೆದಿರುವ ಅಭಿವೃದ್ಧಿಯನ್ನು ಮತವಾಗಿ ಪರಿವರ್ತಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು. ರಾಷ್ಟ್ರ ನಾಯಕರಾದ ಮೋದಿ, ಅಮಿತ್ ಷಾ, ನಡ್ಡಾ ಹೀಗೆ ಎಲ್ಲಾ ನಾಯಕರು ತಮ್ಮ ಸಮಯವನ್ನು ಕರ್ನಾಟಕಕ್ಕೆ ಮೀಸಲಿಟ್ಟಿದ್ದು, ಕಾರ್ಯಕರ್ತರು ಪೂರ್ಣ ಪ್ರಮಾಣದ ಶ್ರಮದೊಂದಿಗೆ ಬಿಜೆಪಿಯನ್ನು ಗೆಲ್ಲಿಸಬೇಕು ಎಂದರು.

ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾತನಾಡಿ, ಯುವಕರ ಕಣ್ಮಣಿ, ದಕ್ಷ ಅಧಿಕಾರಿ ಅಣ್ಣಾಮಲೈ ಅವರು ಬಂಟ್ವಾಳದ ಕುರಿತು ವಿಶೇಷ ಅಭಿಮಾನ ಹೊಂದಿದ್ದು, ಇಲ್ಲಿನ ವಿಷಮ ಪರಿಸ್ಥಿತಿಯಲ್ಲಿ ಅವರು ಚಾರ್ಜ್ ನಲ್ಲಿ ಕೆಲಸ ನಿರ್ವಹಿಸಿರುವುದನ್ನು ಈಗಲೂ ನೆನಪಿಸಿಕೊಳ್ಳುತ್ತಾರೆ ಎಂದರು.

ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾದ ಅಧ್ಯಕ್ಷ ಆರ್.ಸಿ.ನಾರಾಯಣ್, ನಗರ ನೀರು ಸರಬರಾಜು, ಒಳಚರಂಡಿ ಮಂಡಳಿ ನಿರ್ದೇಶಕಿ ಸುಲೋಚನ ಜಿ.ಕೆ.ಭಟ್ ಉಪಸ್ಥಿತರಿದ್ದರು.
ಬೂಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು.

More from the blog

ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್‌ ಗೆ ಆದೇಶ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ...

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಚಿನ್ನದ ದರ ಮತ್ತೆ ಏರಿಕೆ : ಇಂದು ಗೋಲ್ಡ್​ ರೇಟ್​ ಎಷ್ಟಿದೆ ಗೊತ್ತಾ..?

ಚಿನ್ನ ದಿನದಿಂದ ದಿನಕ್ಕೆ ಶಾಕ್​ ನೀಡುತ್ತಾ ಬರುತ್ತಿದೆ. ಕಳೆದ ತಿಂಗಳು ಮಾರ್ಚ್ ನಲ್ಲಿ ಅರವತ್ತು ಸಾವಿರದ ಗಡಿಯಲ್ಲಿದ್ದ ಬಂಗಾರ ಏಪ್ರಿಲ್ ನಲ್ಲಿ ಇದೀಗ ಎಪ್ಪತ್ತು ಸಾವಿರದ ಗಡಿ ದಾಟಿದೆ. ಕೇವಲ ಒಂದು ತಿಂಗಳ...