Monday, April 15, 2024

ವಿಧಾನಪರಿಷತ್ ಸದಸ್ಯತ್ವ ಸ್ಥಾನಕ್ಕೆ ಆಯನೂರು ಮಂಜುನಾಥ್​ ರಾಜೀನಾಮೆ ಘೋಷಣೆ

ಶಿವಮೊಗ್ಗ: ಕರ್ನಾಟಕ ವಿಧಾನಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಪಕ್ಚಾಂತರ ಪರ್ವ ಜೋರಾಗಿದೆ. ಈಗಾಗಲೇ ಬಿಜೆಪಿ ಇಬ್ಬರು ಹಾಲಿ ವಿಧಾನಪರಿಷತ್ ಸದಸ್ಯರು ಹಾಗೂ ಓರ್ವ ಶಾಸಕ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದರ ಬೆನ್ನಲ್ಲೇ  ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್​ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಸಾರ್ವಜನಿಕ ವೇದಿಕೆಯಲ್ಲಿ ಕೂಡ ನಿಲುವು ಪ್ರಕಟಿಸಿದ್ದೇನೆ. ಪಕ್ಷದ ವೇದಿಕೆಯಲ್ಲಿ ಕೂಡ ನನ್ನ ವಿನಂತಿಯನ್ನು ಸಲ್ಲಿಸಿದ್ದೇನೆ. ಆದರೆ, ವಿನಂತಿಗೆ ಪೂರಕವಾಗಿ ನನಗೆ ಪಕ್ಷದಿಂದ ಟಿಕೆಟ್ ಸಿಗುವ ಲಕ್ಷಣ ಕಾಣಿಸುತ್ತಿಲ್ಲ. ಆದರೆ ಕೆಲವರ ಮಕ್ಕಳ ಹೆಸರುಗಳು ಓಡಾಡುತ್ತಿವೆ. ಮೊನ್ನೆ ಈಶ್ವರಪ್ಪ‌ ಹೇಳಿದ ಮಾತನ್ನು ಗಂಭೀರವಾಗಿ ಪರಿಗಣಿಸಿ ಒಂದು ನಿರ್ಧಾರಕ್ಕೆ ಬಂದಿದ್ದೇನೆ. ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ತೀರ್ಮಾನಿಸಿದ್ದೇನೆ ಎಂದರು.

ಈಶ್ವರಪ್ಪ ಪತ್ರಿಕಾಗೋಷ್ಠಿಯಲ್ಲಿ ನನ್ನ ಕೇರ್ ಮಾಡಿಲ್ಲ. ಅವರ ಏಕವಚನ ಅವರ ಶಿಕ್ಷಣದ ಮಟ್ಟ ಅದು. ಅವರು ಬಹುವಚನ ಮಾತನಾಡಿದರೆ ರಾಜ್ಯದ ಜನರಿಗೆ ಆಶ್ಚರ್ಯವಾಗುತ್ತದೆ. ಈಶ್ವರಪ್ಪ ಹೇಳಿದ್ದನ್ನು ಸವಾಲಾಗಿ ಸ್ವೀಕರಿಸಿದ್ದೇನೆ. ಈ ಬಾರಿ ನಾನು ಸ್ಫರ್ಧೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಅವರು ರಾಜ್ಯದ ಪ್ರಭಾವಿ ನಾಯಕರು. ಎಷ್ಟು ಪ್ರಭಾವಿಯೆಂದರೇ ಶಿವಮೊಗ್ಗ ಬಿಟ್ಟು ಬೇರೆ ಎಲ್ಲೂ ಗೆಲ್ಲಲು ಸಾಧ್ಯವಿಲ್ಲದ ನಾಯಕ. ನೀವಾಗಲಿ ಅಥವಾ ನಿಮ್ಮ ಮಗನಾಗಲಿ ಕಣಕ್ಕೇ ಇಳಿಯಲೇ ಬೇಕು. ನಿಮ್ಮ ಪ್ರಭಾವ ಬಳಸಿ, ನೀವು ಟಿಕೆಟ್ ತರಲೇಬೇಕು. ಲಜ್ಜೆ ಬಿಟ್ಟು, ನಿಮ್ಮ ಬದಲಾಗಿ ನಿಮ್ಮ ಮಗನಿಗೆ ಕೇಳಿದ್ದೀರಿ. ಅದರ ಬದಲು ಈ ಹಿಂದೆ ಕಡಿಮೆ ಅಂತರದಲ್ಲಿ ಸೋತ ರುದ್ರೇಗೌಡರ ಪರವಾಗಿ ಕೇಳಲ್ಲ. ಪಕ್ಷಕ್ಕಾಗಿ ದುಡಿದ ಸಿದ್ದರಾಮಣ್ಣ, ಭಾನುಪ್ರಸಾದ್ ಗೂ ಟಿಕೆಟ್ ಕೇಳಲಿಲ್ಲ. ಈಶ್ವರಪ್ಪರನ್ನೇ ಹೊತ್ತು ಮೆರೆಸಿದ ಚೆನ್ನಬಸಪ್ಪ, ದತ್ತಾತ್ರೀ ಪರವಾಗಿಯೂ ಕೇಳಲಿಲ್ಲ. ಇವರು ಶಾಸಕ ಸ್ಥಾನಕ್ಕೆ ಸ್ಫರ್ಧೆ ಮಾಡಲ್ಲ, ಆದರೆ ಮಂತ್ರಿ ಸ್ಥಾನಕ್ಕೆ ಸ್ಥರ್ಧೆ ಮಾಡುತ್ತಾರೆ. ಅದು ಸಿಗದ ಕಾರಣಕ್ಕಾಗಿಯೇ ಅವರು ಬೆಳಗಾವಿಯ ಅಧಿವೇಶನಕ್ಕೆ ಹೋಗಿಲ್ಲ ಎಂದು ಗುಡುಗಿದರು. ನಿಮ್ಮ ಹಣದ ಮದವನ್ನು ಕಡಿಮೆ ಮಾಡುವ ಕೆಲಸ ಮಾಡುತ್ತೇನೆ. ಬಡವರ ಪ್ರತಿನಿಧಿಯಾಗಿಯೇ ನಾನು ಉತ್ತರ ಕೊಡುತ್ತೇನೆ ಎಂದ ಹೇಳಿದರು.

 

More from the blog

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಮಂಗಳೂರು: ರೋಡ್​ಶೋ ಮೂಲಕ ಪ್ರಧಾನಿ ಮೋದಿ ಚುನಾವಣಾ ಪ್ರಚಾರ

ಮಂಗಳೂರು: ರಾಜ್ಯದ ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ, ಮೈಸೂರಿನಿಂದ ತಮ್ಮ ಯಾತ್ರೆ ಆರಂಭಿಸಿದ್ದಾರೆ. ಇದೀಗ ಮಂಗಳೂರಿನಲ್ಲಿ ರೋಡ್​ಶೋ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಮೈಸೂರಿನಲ್ಲಿ ಅದ್ದೂರಿ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ.) 37ನೇ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ : ಈ ಮಣ್ಣಿನ ಸಂಸ್ಕೃತಿ, ಮೌಲ್ಯವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ, ಈ ನಿಟ್ಟಿನಲ್ಲಿ ನವೋದಯ ಮಿತ್ರ ಕಲಾ ವೃಂದವು ಸಮಾಜಕ್ಕೆ ಪೂರಕವಾಗಿ ಸಮಾಜಮುಖಿ ಕಾರ್ಯಗಳನ್ನು...

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...