Saturday, April 6, 2024

ಪ್ರಪಾತಕ್ಕೆ ಬಿದ್ದ ಬೈಕ್ : ಸಹಸವಾರ ಮೃತ್ಯು

ಬಂಟ್ವಾಳ: ಬೈಕ್ ಪ್ರಪಾತಕ್ಕೆ ಬಿದ್ದು ಬೈಕಿನಲ್ಲಿ ಹಿಂಬದಿ ಸವಾರನಾಗಿ ಪ್ರಯಾಣಿಸುತ್ತಿದ್ದ ಚಿಕ್ಕ ಮಂಗಳೂರು ಮೂಲದ ಯುವಕ ಮೃತಪಟ್ಟ ಘಟನೆ ಮುಂಜಾವಿನ ವೇಳೆ ಬಿಸಿರೋಡಿನ ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ನಡೆದಿದೆ.

ಚಿಕ್ಕಮಗಳೂರು ನಿವಾಸಿ ಮಂಗಳೂರು ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯಶೋಧರ ಮೃತಪಟ್ಟ ದುರ್ದೈವಿ ಯುವಕ.

ಈತನ ಸ್ನೇಹಿತ ಬೈಕ್ ಚಲಾಯಿಸುತ್ತಿದ್ದ ಅವಿನಾಶ್ ಅಲ್ಪಸ್ವಲ್ಪ ಗಾಯಗಳೊಂದಿಗೆ ಯಾವುದೇ ಪ್ರಾಣಾಪಯವಿಲ್ಲದೆ ಪಾರಾಗಿದ್ದಾನೆ.
ಇವರಿಬ್ಬರೂ ಮಂಗಳೂರು ಸಿಟಿ ಸೆಂಟರ್ ನಲ್ಲಿ ಉದ್ಯೋಗಿಗಳಾಗಿದ್ದು, ಬೆಳ್ತಂಗಡಿಯಲ್ಲಿ ಸ್ನೇಹಿತನ ಮನೆಯಲ್ಲಿ ನಡೆಯುವ ಕೋಲಕ್ಕೆ ಹೋಗಿ ಅಲ್ಲಿಂದ ಸುಮಾರು 3.30 ಗಂಟೆ ವೇಳೆಗೆ ಬರುತ್ತಿರುವಾಗ ಬಿಸಿರೋಡಿನ ಕೈಕಂಬ ಸಮೀಪದ ಕೆ.ಎಸ್.ಆರ್.ಟಿ.ಸಿ.ಬಸ್ ಡಿಪೋ ದ ಬಳಿ ತಲಪಾಡಿ ಎಂಬಲ್ಲಿ ಸುಮಾರು ಹತ್ತಕ್ಕೂ ಅಧಿಕ ಅಡಿ ಇರುವ ಆಳಕ್ಕೆ ಬಿದ್ದು ಬೈಕಿನ ಹಿಂಬದಿಯಲ್ಲಿ ಇದ್ದ ಸಹಸವಾರ ಯಶೋಧರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅಪಘಾತಕ್ಕೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಮೆಲ್ಕಾರ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...