Thursday, April 11, 2024

ವಿಧಾನ ಸಭಾ ಚುನಾವಣಾ ಹಿನ್ನೆಲೆ ಬಂಟ್ವಾಳದ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಪಥಸಂಚಲನ

ಬಂಟ್ವಾಳ: ಕೆ.ಎಸ್.ಆರ್.ಪಿ. ಸಿ.ಆರ್.ಪಿ.ಎಫ್‌ ಹಾಗೂ ಬಂಟ್ವಾಳ ನಗರ ಪೋಲೀಸ್ ಠಾಣೆಯ ಸಿಬ್ಬಂದಿ ಗಳು ಮತ್ತು ಬಂಟ್ವಾಳ ಗ್ರಾಮಾಂತರ ಪೋಲೀಸ್ ಸಿಬ್ಬಂದಿಗಳಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೋಲೀಸ್ ಪಥಸಂಚಲನ ನಡೆಯಿತು.

ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತಾ ಕ್ರಮವಾಗಿ ಪಥಸಂಚಲನ ನಡೆಯಿತು.

ಬಂಟ್ವಾಳ ತಾಲೂಕಿನಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯಬಾರದು ಮತ್ತು ಚುನಾವಣೆಯನ್ನು ಎದುರಿಸಲು ತಾಲೂಕಿನಲ್ಲಿ ಪೋಲೀಸ್ ಇಲಾಖೆ ಸರ್ವ ಸನ್ನದ್ಧ ವಾಗಿದೆ ಎಂಬುದನ್ನು ತಿಳಿಸಲು ಪಥಸಂಚಲನ ನಡೆಯಿತು.

ಪ್ರತಿ ದಿನ ಸಿ.ಅರ್.ಪಿ.ಎಫ್ ಪೋಲೀಸರಿಂದ ಪಥಸಂಚಲನ ನಡೆಯಲಿದ್ದು, ಮೊದಲ ಹಂತದಲ್ಲಿ ಒಂದು ವಾರಗಳ ಕಾಲ ಆಯಕಟ್ಟಿನ ಸ್ಥಳಗಳಲ್ಲಿ ಪಥಸಂಚಲನ ನಡೆಯಲಿದೆ ಎಂದು ಎಸ್.ಪಿ.ವಿಕ್ರಮ್ ಅಮ್ಟೆ ತಿಳಿಸಿದರು.

ಎಸ್.ಪಿ.ವಿಕ್ರಮ್ ಅಮ್ಟೆ,ಡಿ.ವೈ.ಎಸ್.ಪಿ.ಪ್ರತಾಪ್ ಸಿಂಗ್ ಥೋರಾಟ್, ಬಂಟ್ವಾಳ ನಗರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ, ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಸಂತೋಷ್ ಶೆಟ್ಟಿ, ಬಂಟ್ವಾಳ ನಗರ ಪೊಲೀಸ್ ಠಾಣಾ ಎಸ್.ಐ.ರಾಮಕೃಷ್ಣ, ಗ್ರಾಮಾಂತರ ಪೋಲೀಸ್ ಠಾಣಾ ಎಸ್.ಐ.ಉದಯರವಿ ಹಾಗೂ ಸಿಬ್ಬಂದಿಗಳು ಪಥಸಂಚಲನದಲ್ಲಿ ಭಾಗಿಯಾದರು.

ಕೈಕಂಬದಿಂದ ತಲಪಾಡಿ ರಾಷ್ಟ್ರೀಯ ಬಿಸಿರೋಡು ಜಂಕ್ಷನ್. ಕೆಳಗಿನ ಪೇಟೆ ಬಂಟ್ವಾಳ ಬಡ್ಡಕಟ್ಟೆ. ಕಡಗೋಳಿಯಿಂದ ಫರಂಗಿಪೇಟೆಯಾಗಿ ಕೊಡ್ಮಾನ್ ವರೆಗೆ ಡಿ.ಎ.ಆರ್. ಬ್ಯಾಂಡ್ ಜೊತೆ ವಿವಿಧ ಪೋಲೀಸ್ ತುಕಡಿಗಳು ಪಥಸಂಚಲನ ನಡೆಸಿದರು.

More from the blog

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಎಳನೀರು ಕುಡಿದು ಅಸ್ವಸ್ಥ ಪ್ರಕರಣ : ಫ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ

ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...