Wednesday, April 17, 2024

ಬ್ರೇಕಿಂಗ್ ನ್ಯೂಸ್… ಜಕ್ರಿಬೆಟ್ಟುವಿನಲ್ಲಿ ಕೆ.ಎಸ್.ಆರ್.ಟಿ.ಸಿ.ಬಸ್ ಬೈಕ್ ಗೆ ಡಿಕ್ಕಿ: ಅವಿವಾಹಿತ ಯುವಕ ಶ್ರೇಯಸ್ ಡೆತ್

ಬಂಟ್ವಾಳ; ಕೆಎಸ್.ಆರ್.ಟಿ.ಸಿ.ಬಸ್ ಬೈಕ್ ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.

ಸರಪಾಡಿ ನಿವಾಸಿ ಅವಿವಾಹಿತ ಯುವಕ ಸೇಸಪ್ಪ ಯಾನೆ ಶ್ರೇಯಸ್ (30) ಮೃತಪಟ್ಟಿದ್ದಾನೆ.

ಖಾಸಗಿ ಕಂಪೆನಿಯೊಂದರಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಬಡಕುಟುಂಬದ ಯುವಕನಾಗಿದ್ದು, ಸಂಜೆ ವೇಳೆ ವೃತ್ತಿ ಮುಗಿಸಿ ಮನೆಗೆ ವಾಪಾಸು ಬೈಕಿನಲ್ಲಿ ಹೋಗುವ ವೇಳೆ ಅಪಘಾತ ಸಂಭವಿಸಿದೆ.

ಬಿಸಿರೋಡು ಕಡೆಯಿಂದ ಧರ್ಮಸ್ಥಳ ಹೆದ್ದಾರಿಯಲ್ಲಿ ಶ್ರೇಯಸ್ ಸರಪಾಡಿ ಮನೆಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಧರ್ಮಸ್ಥಳ ಕಡೆಯಿಂದ ವೇಗವಾಗಿ ಬರುತ್ತಿದ್ದ ಸರಕಾರಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಎದುರಿನಿಂದ ಬೈಕಿಗೆ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು,ಯುವಕ ಗಂಭೀರವಾಗಿ ಗಾಯಗೊಂಡಿದ್ದ, ಅಪಘಾತಕ್ಕೆ ಒಳಗಾದ ಸ್ಥಳದಲ್ಲಿ ರಕ್ತದೋಕುಳಿ ಹರಿದಿತ್ತು. ಕೂಡಲೇ ಈತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕೊಂಡು ಹೋಗಿದ್ದರು ,ಆದರೆ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು 108 ಅಂಬ್ಯುಲೆನ್ಸ್ ವಾಹನದಲ್ಲಿ ಮಂಗಳೂರಿಗೆ ಸಾಗಿಸಲಾಯಿತು ಆದರೂ ದಾರಿ ಮಧ್ಯೆ ಈತ ಕೊನೆಯುಸಿರೆಳೆದಿದ್ದಾನೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಮೂರ್ತಿ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಪಘಾತ ಸ್ಪಾಟ್ ಅಗುತ್ತಿದೆ ಧರ್ಮಸ್ಥಳ -ಕಡೂರು ಹೆದ್ದಾರಿ : ಆತಂಕದಲ್ಲಿ ಸವಾರರು

ಬಿಸಿರೋಡು -ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಾಮಗಾರಿ ಮುಗಿದ ಅಗಲೀಕರಣಗೊಂಡ ಬಳಿಕ ಈ ಭಾಗದಲ್ಲಿ ಅನೇಕ ಅಪಘಾತಗಳು ಸಂಭವಿಸಿದ್ದಲ್ಲದೆ ಸಾವುನೋವುಗಳು ಸಂಭವಿಸಿದವು.

ಇತ್ತೀಚಿನ ದಿನಗಳಲ್ಲಿ ಇದೊಂದು ‌ಅಪಘಾತವಲಯವಾಗಿ‌ ಮಾರ್ಪಾಡುಗೊಂಡಿರುವ ಬಗ್ಗೆ ವಾಹನ ಸವಾರರಿಗೆ ನಡುಕ ಉಂಟಾಗಿದೆ.

ಈ ಕಾರಣಕ್ಕಾಗಿ ತಿರುವು ಹಾಗೂ ಅಗತ್ಯ ವಿರುವ ಕಡೆಗಳಲ್ಲಿ ಅಪಘಾತ ತಪ್ಪಿಸಲು ರಸ್ತೆಯಲ್ಲಿ ಸ್ಪೀಡ್ ಕಂಟ್ರೋಲ್ ಗಳನ್ನು ಹಾಕುವಂತೆ ಮತ್ತು ಸೂಚನ ಫಲಕಗಳನ್ನು ಹಾಕುವಂತೆ ಇತ್ತೀಚಿಗೆ ಅಧಿಕಾರಿಗಳ ಜೊತೆ ಸ್ಥಳಕ್ಕೆ ಬೇಟಿ ನೀಡಿದ ಶಾಸಕರು ಸೂಚನೆ ನೀಡಿದ್ದರು.

ಆದರೆ ಇಲಾಖೆಯವರು ಎಲ್ಲಾ ಸೂಚನಾ ಕ್ರಮಗಳನ್ನು ಅಳವಡಿಸಲಾಗಿದೆಯಾದರೂ ಅಪಘಾತ ಸಂಭವಿಸುವುದು ಮಾತ್ರ ಕಡಿಮೆಯಾಗಿಲ್ಲ ಎಂಬ ಕೂಗು ಕೇಳಿ ಬರುತ್ತಿದೆ.

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: 21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿಮರ್ಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಜಿಲ್ಲೆಯಲ್ಲಿ ಜೆ.ಡಿ.ಎಸ್.ಪಕ್ಷ ನಿಷ್ಕ್ರಿಯವಾಗಲು ಕಾರಣರಾದ ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡರು ರಾಜೀನಾಮೆ ನೀಡುವಂತೆ ಒತ್ತಾಯ

ಜೆ.ಡಿ.ಎಸ್.ಪಕ್ಷ ಜಿಲ್ಲೆಯಲ್ಲಿ ನಿಷ್ಕ್ರಿಯವಾಗಲು ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡ ಅವರೇ ಕಾರಣರಾಗಿದ್ದು, ನೈತಿಕ ಹೊಣೆ ಹೊತ್ತು ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಮುಖಂಡ ಅಬುಬಕ್ಕರ್ ಅಮ್ಮಂಜೆ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಅಧ್ಯಕ್ಷ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...