Tuesday, April 16, 2024

ಅಲ್ಯುಮಿನಿಯಂ ದೋಟಿ ಕೊಂಡೊಯ್ಯುತ್ತಿದ್ದ ವೇಳೆ ವಿದ್ಯುತ್‌ ತಂತಿಗೆ ಸ್ಪರ್ಶ : ಮೂವರು ಮಕ್ಕಳಿಗೆ ಗಾಯ

ಬೆಳ್ತಂಗಡಿ: ಅಲ್ಯುಮಿನಿಯಂ ದೋಟಿ ಕೊಂಡೊಯ್ಯು ತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್‌ ಲೈನ್‌ಗೆ ಸಂಪರ್ಕಿಸಿ ಮೂವರು ಮಕ್ಕಳು ಗಾಯಗೊಂಡ ಘಟನೆ ಚಾರ್ಮಾಡಿಯಲ್ಲಿ ಸಂಭವಿಸಿದೆ.

ಇಮ್ತಿಯಾಜ್ ಅವರ ಮಕ್ಕಳಾದ ಮಹಮ್ಮದ್‌ ಆಲಿ, ಮಹಮ್ಮದ್‌ ಇನಾಜ್‌ ಹಾಗೂ ಹನೀಫ್‌ ಅವರ ಪುತ್ರ ಅಯ್ನಾನ್‌ ವಿದ್ಯುತ್‌ ಆಘಾತಕ್ಕೊಳಗಾದವರು ಎಂದು ತಿಳಿದುಬಂದಿದೆ.

ಸ್ಥಳೀಯರು ಕೂಡಲೇ ಅವರನ್ನು ಕಕ್ಕಿಂಜೆ ಹಾಗೂ ಉಜಿರೆಯ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದು ಪ್ರಾಥಮಿಕ ಚಿಕಿತ್ಸೆ ಒದಗಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದಾರೆೆ. ಮಕ್ಕಳು ಸುಟ್ಟ ಗಾಯಗಳಿಗೆ ಒಳಗಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

More from the blog

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ

ವಿಟ್ಲ - ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ ನೀರುಮಜಲು ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಕಳೆದ...

ಕೆನರಾ ರೊಬೆಕೋ ಸಂಸ್ಥೆಯಿಂದ ಕೊಯಿಲ ಶಾಲಾ ವಿದ್ಯಾರ್ಥಿಗಳಿಗೆ ಬೈಸಿಕಲ್ ಕೊಡುಗೆ

ಬಂಟ್ವಾಳ: ತಾಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಕೆನರಾ ರೊಬೆಕೋ ಸಂಸ್ಥೆಯ ವತಿಯಿಂದ 45 ಬೈಸಿಕಲ್ ಗಳನ್ನು ವಿತರಿಸಲಾಯಿತು. ಕೆನರಾ ರೊಬೆಕೋ ಸಂಸ್ಥೆಯ ಮಂಗಳೂರು ವಿಭಾಗದ ವ್ಯವಸ್ಥಾಪಕರಾದ ಮುರಳೀಧರ ಶೆಣೈ, ಅಧಿಕಾರಿ ರಾಜೇಶ್...

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ- ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ...