Friday, April 5, 2024

ಹಲ್ಲೆ ನಡೆಸಿ ಗೂಗಲ್ ಪೇ ಮೂಲಕ ಹಣ ವರ್ಗಾವಣೆ : ಮನೆಯಂಗಳದಲ್ಲಿ ನಿಲ್ಲಿಸಿದ್ದ ವಾಹನ ಕಳವು, ಪ್ರಕರಣ ದಾಖಲು

ಬೆಳ್ತಂಗಡಿ: ಮನೆ ಯಜಮಾನನಿಗೆ ಹಲ್ಲೆ ನಡೆಸಿ ಮೊಬೈಲ್‌ ಫೋನ್‌ನಿಂದ ಗೂಗಲ್‌ ಪೇ ಮೂಲಕ ಬಲತ್ಕಾರವಾಗಿ ಪಿನ್‌ ಪಡೆದು ಹಣ ವರ್ಗಾಯಿಸಿಕೊಂಡಿದ್ದಲ್ಲದೆ ವಾಹನವನ್ನು ಕಳವು ಮಾಡಿದ ಘಟನೆ ಪಡಂಗಡಿ ಗ್ರಾಮದ ಜಾನೆಬೈಲು ಪುತ್ಯೆ ಮನೆ ಎಂಬಲ್ಲಿ ನಡೆದಿದೆ.

ಪಡಂಗಡಿ ಗ್ರಾಮದ ಜಾನೆಬೈಲು ಪುತ್ಯೆ ಮನೆ ಎಂಬಲ್ಲಿ ಮನೆ ಯಜಮಾನ ಜುವಾಮ್‌ ಗೋವಿಯಸ್‌ ಅವರಿಗೆ ಹಲ್ಲೆ ನಡೆಸಿದ ಪರಿಚಿತರಾದ ರಿಯಾಜ್‌ ಮತ್ತು ಫೈಝಲ್‌ ಹಣ ಎಗರಿಸಿದ ಆರೋಪಿತರು.

ಜುವಾಮ್‌ ಗೋವಿಯಸ್‌ ಅವರು ತನ್ನ ಮಗನೊಂದಿಗೆ ಫೋನಿನಲ್ಲಿ ಮಾತನಾಡುತ್ತಿದ್ದ ವೇಳೆ ಮನೆಯಲ್ಲಿ ಈ ಹಿಂದೆ ರಬ್ಬರ್‌ ಟ್ಯಾಪಿಂಗ್‌ ಕೆಲಸ ಮಾಡುತ್ತಿದ್ದ ಪರಿಚಯದ ರಿಯಾಜ್‌ ಮತ್ತು ಫೈಝಲ್‌ ಬಂದು ಕಟ್ಟಿಗೆಯಿಂದ ಹಲ್ಲೆ ನಡೆಸಿದರು. ಬಳಿಕ ಫೋನ್‌ನಲ್ಲಿದ್ದ ಗೂಗಲ್‌ ಪೇ ಪಿನ್‌ ನಂಬರ್‌ ಪಡೆದು 82,000 ರೂ.ಗಳನ್ನು ಆರೋಪಿಗಳ ಪತ್ನಿಯರ ಹೆಸರಿನ ಖಾತೆಗೆ ವರ್ಗಾಯಿಸಿ ಮೊಬೈಲ್‌ ಮತ್ತು ಅಂಗಳದಲ್ಲಿ ನಿಲ್ಲಿಸಿದ್ದ 2,82,000 ರೂ. ಮೌಲ್ಯದ ತ್ರಿಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ಜುವಾಮ್‌ ಗೋವಿಯಸ್‌ ದೂರು ನೀಡಿದಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

More from the blog

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...