ವೇಣೂರು: ಅಪ್ರಾಪ್ತೆಯನ್ನು ಗರ್ಭವತಿಯನ್ನಾಗಿ ಮಾಡಿದ ನಾರಾವಿಯ ಮಂಜುನಗರ ನಿವಾಸಿ ಸಂದೇಶ್ ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪರಿಚಯಸ್ಥ ದ್ವಿತೀಯ ಪಿಯುಸಿ ವಿದ್ಯಾರ್ಥಿಯ ಜತೆ ಸಲುಗೆ ಬೆಳೆಸಿದ್ದ ಸಂದೇಶ್ ಆಕೆಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ದೈಹಿಕ ಸಂಪರ್ಕ ಬೆಳೆಸಿದ್ದ ಎನ್ನಲಾಗಿದೆ.
ಬಳಿಕ ಬಾಲಕಿಯ ಆರೋಗ್ಯದಲ್ಲಿ ಬದಲಾವಣೆ ಕಂಡಾಗ ಪೋಷಕರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದು, ಈ ವೇಳೆ ಬಾಲಕಿ ಎರಡು ತಿಂಗಳ ಗರ್ಭಿಣಿ ಆಗಿರುವುದು ಬೆಳಕಿಗೆ ಬಂದಿದೆ.
ಇನ್ನು ಈ ಬಗ್ಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ವೇಣೂರು ಠಾಣೆಯ ಪೊಲೀಸರು ಎ.13ರಂದು ಆರೋಪಿಯನ್ನು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.