Saturday, April 6, 2024

ಸೋಮಾವತಿ ನದಿಯಲ್ಲಿ ಸಾವಿರಾರು ಮೀನುಗಳ ಮಾರಣಹೋಮ

ಬೆಳ್ತಂಗಡಿ: ನಗರಕ್ಕೆ ಕುಡಿಯುವ ನೀರಿನ ಪ್ರಮುಖ ಆಶ್ರಯವಾಗಿದ್ದ ಸೋಮಾವತಿ ನದಿಯಲ್ಲಿ ಸಾವಿರಾರು ಮೀನುಗಳ ಮಾರಹೋಮ ನಡೆದಿದ್ದು, ನೀರಿಗೆ ಕಿಡಿಕೇಡಿಗಳು ವಿಷ ಪದಾರ್ಥ ಹಾಕಿರುವ ಪರಿಣಾಮ ಮೀನುಗಳು ಸತ್ತಿರಬಹುದೆಂದು ಶಂಕಿಸಲಾಗಿದೆ.

ಈ ವರ್ಷದ ಬಿಸಿಲಿನ ತಾಪಕ್ಕೆ ಎಲ್ಲ ನದಿಗಳೂ ಬತ್ತಿ ಹೋಗಿ ಕೃಷಿ ಮಾತ್ರವಲ್ಲ ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿದೆ. ಇಂತಹ ಸಂದರ್ಭದಲ್ಲಿ ನಗರಕ್ಕೆ ಕುಡಿಯುವ ನೀರು ಪೂರೈಸುವ ನದಿ ನೀರಿನ ಘಟಕ ಈ ರೀತಿ ಆಗಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ

ನಗರಕ್ಕೆ ಪ್ರಸಕ್ತ ಪ್ರತಿ ದಿನ 10 ಲಕ್ಷ ಲೀಟರ್ ನೀರಿನ ಅವಶ್ಯಕತೆಯಿದ್ದು ಇದೇ ನೀರನ್ನು ಅವಲಂಬಿಸಲಾಗಿತ್ತು.  ಆದರೆ ವಿಷ ಪ್ರಾಶನವಾಗಿರುವ ಪರಿಣಾಮ ನೀರು ಸರಬರಾಜನ್ನು ಸ್ಥಗಿತಗೊಳಿಸಲಾಗಿದೆ. ಟ್ಯಾಂಕ್ ನೀರು ಖಾಲಿ ಮಾಡಿ ಸ್ವಚ್ಛಗೊಳಿಸಿ ಬೋರ್ ವೆಲ್ ಮೂಲಕ ನೀರು ಸರಬರಾಜು ಮಾಡಲಾಗುವುದು ಎಂದು ನಗರ ಪಂಚಾಯಿತಿ ಉಪಾಧ್ಯಕ್ಷ ಜಯಾನಂದ ಗೌಡ ತಿಳಿಸಿದ್ದಾರೆ

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...