Saturday, April 6, 2024

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆ ಮೃತ್ಯು

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ.

ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ದೇವಕಿಯವರ ಪುತ್ರಿ ಕೌಶಲ್ಯ ಮೃತಪಟ್ಟ ನವವಿವಾಹಿತೆ ಎಂದು ತಿಳಿದುಬಂದಿದೆ.

ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ದೇವಕಿಯವರ ಪುತ್ರಿ ಕೌಶಲ್ಯ ಅವರು ಇತ್ತೀಚೆಗಷ್ಟೇ ನೆರೆಯ ಸೂರ್ಯಬೆಟ್ಟು ನಿವಾಸಿ ಜೊತೆ ಪ್ರೀತಿಸಿ ಮದುವೆಯಾಗಿದ್ದರು. ಎರಡು ದಿನಗಳ ಹಿಂದೆ ವಿಷ ಸೇವಿಸಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಆತ್ಮ ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

More from the blog

ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ

ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ...

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ...

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...