Wednesday, April 17, 2024

ದ.ಕ ಜಿಲ್ಲೆಯಿಂದ ಮೂರು ಹೊಸ ಮುಖಗಳು : ಅಂಗಾರ, ಸಂಜೀವ ಮಠಂದೂರು ಇಲ್ಲ ಟಿಕೆಟ್

ಮಂಗಳೂರು: ಬಿಜೆಪಿಯ 189 ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರು ಹೊಸ ಮುಖಗಳಿಗೆ ಟಿಕೆಟ್ ನೀಡಲಾಗಿದೆ.

ಸುಳ್ಯದಿಂದ ಸಚಿವ ಅಂಗಾರ ಅವರನ್ನು ಕೈ ಬಿಟ್ಟು ಭಾಗೀರಥಿ ಮುರುಳ್ಯ ಅವರಿಗೆ ಟಿಕೆಟ್ ನೀಡಲಾಗಿದೆ. ಮಂಗಳೂರು ಟಿಕೆಟ್ ಮಾಜಿ ಜಿ.ಪಂ. ಸದಸ್ಯ ಸತೀಶ್ ಕುಂಪಲ ಅವರಿಗೆ ಸಿಕ್ಕಿದೆ. ಪುತ್ತೂರು ಹಾಲಿ ಶಾಸಕ ಸಂಜೀವ ಮಠಂದೂರು ಅವರನ್ನು ಬಿಟ್ಟು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ಅವರಿಗೆ ಟಿಕೆಟ್ ನೀಡಲಾಗಿದೆ.

ಉಳಿದಂತೆ ಮಂಗಳೂರು ದಕ್ಷಿಣದಿಂದ ವೇದವ್ಯಾಸ ಕಾಮತ್, ಮಂಗಳೂರು ಉತ್ತರದಿಂದ ಡಾ. ಭರತ್ ಶೆಟ್ಟಿ, ಬಂಟ್ವಾಳದಿಂದ ರಾಜೇಶ್ ನಾಯ್ಕ್, ಮೂಡುಬಿದಿರೆಯಿಂದ ಉಮಾನಾಥ್ ಕೋಟ್ಯಾನ್, ಬೆಳ್ತಂಗಡಿಯಿಂದ ಹರೀಶ್ ಪೂಂಜಾ ಮತ್ತೆ  ಅಭ್ಯರ್ಥಿಗಳಾಗಲಿದ್ದಾರೆ.

More from the blog

ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು‌ ನಡೆದಿದೆ. ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ...

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.