Sunday, April 14, 2024

ಕಾಂಗ್ರೇಸ್ ಸುಳ್ಳು ಭರವಸೆಗಳಿಗೆ ಮೈಮರೆಯದೆ ಬಿಜೆಪಿಗೆ ಮತನೀಡಿ-ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್

ಮಣಿನಾಲ್ಕೂರು ಗ್ರಾ.ಪಂ.ಗೆ ಸುಮಾರು 21 ಕೋಟಿ ರೂ.ಗಳಿಗಿಂತಲೂ ಅಧಿಕ ಅನುದಾನದ ಮೂಲಕ ಸರ್ವರಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಇದರ ಜೊತೆಗೆ ಬಂಟ್ವಾಳದಲ್ಲಿ ಶಾಂತಿಯನ್ನು ನೆಲೆಸುವ ಕೆಲಸ ಮಾಡಿದ್ದೇನೆ, ಇದಕ್ಕೆ ಕ್ಷೇತ್ರದ ಜನರ ಸಹಕಾರವೇ ಕಾರಣ ಎಂದು ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ತಿಳಿಸಿದರು.

ಮಣಿನಾಲ್ಕೂರು ಗ್ರಾ.ಪಂ.ನ ವಿವಿಧ ಕಡೆಗಳಲ್ಲಿ ಮತಯಾಚನೆ ನಡೆಸಿದ ಬಳಿಕ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಮತ ನೀಡಿದ ಮತದಾರರಿಗೆ ನೋವಾಗದಂತೆ ಪ್ರಾಮಾಣಿಕ ಕರ್ತವ್ಯ ಮಾಡಿದ್ದೇನೆ, ಕಳೆದ 10 ವರ್ಷಗಳಲ್ಲಿ ನಿಮ್ಮ ಮನೆಯ ಸದಸ್ಯನಂತೆ ಪ್ರತಿ ಕಾರ್ಯಕ್ರಮದಲ್ಲಿ ನಿಮ್ಮ ಜೊತೆ ಯಾಗಿದ್ದೇನೆ. ನೀವು ಮೇ. 10 ರಂದು ನಡೆಯುವ ಮತದಾನದಲ್ಲಿ ಬಿಜೆಪಿಗೆ ಮತ ನೀಡಿ ಬಂಟ್ವಾಳದಲ್ಲಿ ನನ್ನನ್ನು ಗೆಲ್ಲಿಸಿಕೊಡಿ, ಮತ್ತೆ 5 ವರ್ಷಗಳ ಕಾಲ ನಿಮ್ಮ ಸೇವೆ ಮಾಡಲು ಅವಕಾಶ ನೀಡಿ ಎಂದು ಮನವಿ ಮಾಡಿದರು.

ಕಾಂಗ್ರೇಸ್ ಸುಳ್ಳು ಭರವಸೆಗಳಿಗೆ ಮೈಮರೆಯದೆ ಬಿಜೆಪಿಗೆ ಮತನೀಡಿ ಎಂದು ಮನವಿ ಮಾಡಿದರು.
ಕೋವಿಡ್ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಜೀವ ,ಜೀವನಕ್ಕಾಗಿ ಕೈಗೊಂಡ ನಿರ್ಣಾಯ ಹಾಗೂ ನಿರ್ವಹಿಸಿದ ರೀತಿ ಅಂತರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಪಡೆಯಿತು. ಅರ್ಥಿಕ ವ್ಯವಸ್ಥೆಯಲ್ಲಿ ಸಮತೋಲನ ಸಾಧಿಸಿ, ಅಭಿವೃದ್ಧಿ ಜೊತೆಗೆ ಸ್ವ ಉದ್ಯೋಗ ಹಾಗೂ ಕೃಷಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ನೂರಾರು ಯೋಜನೆಗಳನ್ನು ಜಾರಿ ಮಾಡಿ,ಸ್ವಾವಲಂಬಿ ಜೀವನಕ್ಕೆ ದಾರಿ ಮಾಡಿದ ಬಿಜೆಪಿ ನಿರಂತರವಾಗಿ ಅಧಿಕಾರಕ್ಕೆ ಬರಬೇಕು ಎಂದು ಕಾರ್ಯಕರ್ತರಿಗೆ ತಿಳಿಸಿದರು.

ಈ ಎಲ್ಲಾ ವಿಚಾರಗಳನ್ನು ಹಾಗೂ ಸರಕಾರದ ಸಾಧನೆಗಳನ್ನು ಪ್ರತಿ ಮನೆಗೆ ತಲುಪಿಸಿ ಬಿಜೆಪಿಗೆ ಮತನೀಡುವಂತೆ ಮನವಿ ಮಾಡಿ ಎಂದು ಅವರು ತಿಳಿಸಿದರು. ಸಾಂಸ್ಕ್ರತಿಕ ಪ್ರಕೋಷ್ಠದ ಸಂಚಾಲಕ ಅಶೋಕ್ ಶೆಟ್ಟಿ ಸರಪಾಡಿ ಮಾತನಾಡಿ, ಬಿಜೆಪಿ ಮತದಾರರು ಎಂಬ ಕಾರಣಕ್ಕಾಗಿ ಈ ಭಾಗವನ್ನು ಕಾಂಗ್ರೆಸ್ ಕಳೆದ 30 ವರ್ಷಗಳಿಂದ ಕಡೆಗಣಿಸಲಾಗಿತ್ತು. ರಾಜೇಶ್ ನಾಯ್ಕ್ ಅವರು ಶಾಸಕರಾದ ಬಳಿಕ ಗ್ರಾಮದ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ,ಅ ಕಾರಣಕ್ಕಾಗಿ ಈ ಬಾರಿಯ ಚುನಾವಣೆಯಲ್ಲಿ ರಾಜೇಶ್ ನಾಯ್ಕ್ ಅವರನ್ನು ಬಹುಮತದ ಮೂಲಕ ಗೆಲ್ಲಲು ನಾವು ಕೊಡುಗೆ ನೀಡುತ್ತೇವೆ ಎಂದು ಭರವಸೆ ನೀಡಿದರು.
ರಾಜಧರ್ಮದ ರಾಜಕಾರಣದ ಮೂಲಕ ರಾಜ್ಯದಲ್ಲಿ ಹೆಸರುಪಡೆದ ರಾಜೇಶ್ ನಾಯ್ಕ್ ಅವರ ಗೆಲುವಿಗಾಗಿ ಸಿ.ವೋಟರ್ಸ್ ಗಳಿಗೆ ಪ್ರಾಮುಖ್ಯತೆ ನೀಡಿ ಅಂತಹ ಮನೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.

ಬಿಜೆಪಿಗೆ ಸೇರ್ಪಡೆಯಾದ ಕಾಂಗ್ರೆಸ್ ಕಾರ್ಯಕರ್ತ

ಕಾಂಗ್ರೆಸ್ ಕಾರ್ಯಕರ್ತ ರಮೇಶ್ ಪೂಜಾರಿ ಅವರು ಬಿಜೆಪಿಗೆ ಸೇರ್ಪಡೆ ಗೊಂಡರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಅಭಿವೃದ್ಧಿ ಮತ್ತು ಅವರ ಗುಣಗಳನ್ನು ಮೆಚ್ಚಿ ಹಟ್ಟದಡ್ಕ ಶಾಂತಪ್ಪ ಪೂಜಾರಿ ಅವರ ಮನೆಯಲ್ಲಿ ನಡೆದ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ಕಾರ್ಯಕ್ರಮದಲ್ಲಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ಪಕ್ಷದ ಧ್ವಜ ಹಾಗೂ ಶಾಲು ಹಾಕಿ ಸ್ವಾಗತಿಸಲಾಯಿತು.

ಈ ಸಂದರ್ಭ ಜಿಲ್ಲಾ ಯುವಮೋರ್ಚಾದ ಕಾರ್ಯದರ್ಶಿ ಸುದರ್ಶನ ಬಜ, ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ರಮನಾಥ ರಾಯಿ, ಚುನಾವಣಾ ಪ್ರಭಾರಿ ಪ್ರಕಾಶ್ ಅಂಚನ್, ಪ್ರಮುಖರಾದ ,ರವೀಂದ್ರ ಶೆಟ್ಟಿ, ವಿಶ್ವನಾಥ ಗುರುಸ್ವಾಮಿ, ಪೂವಪ್ಪ ಪೂಜಾರಿ, ಪುರುಷೋತ್ತಮ ಪೂಜಾರಿ ಮಜಲು, ಕೆ.ಟಿ.ಪೂಜಾರಿ, ಪ್ರಶಾಂತ್ ಶೆಟ್ಟಿ ಬೆಂಗಳೂರು, ವಿಶ್ವನಾಥ ನಾಯಕ್, ಕರುಣಾಕರ ಪೂಜಾರಿ, ಕೇಶವ,ಶಾಂತಪ್ಪ ಪೂಜಾರಿ, ಮತ್ತಿತರರು ಉಪಸ್ಥಿತರಿದ್ದರು.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...