Friday, April 12, 2024

ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಸಂಗಬೆಟ್ಟು ಗ್ರಾ.ಪಂ.ಬಿಜೆಪಿ ಸದಸ್ಯೆ ಮರಳಿ ಮಾತೃಪಕ್ಷಕ್ಕೆ ವಾಪಾಸ್

ಎ.17 ರಂದು ಸಂಜೆ ಕಾಂಗ್ರೇಸ್ ಗೆ ಸೇರ್ಪಡೆಗೊಂಡಿದ್ದ ಸಂಗಬೆಟ್ಟು ಗ್ರಾ.ಪಂ.ಬಿಜೆಪಿ ಸದಸ್ಯೆ ಶಾಂತ ಹಾಗೂ ಅವರ ಪತಿ ಉದಯ ಅವರು ಮರಳಿ ಮಾತೃಪಕ್ಷಕ್ಕೆ ವಾಪಾಸು ಆಗಿದ್ದಾರೆ.

ಅವರ ಜೊತೆಯಲ್ಲಿ ಇನ್ನಿಬ್ಬರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾದ ಶಾರದ, ಜಯ ಅವರು ಬಿಜೆಪಿಗೆ ಸೇರ್ಪಡೆ ಮಾಡಲಾಗಿದೆ.

ಶಾರದ ಅವರು ಕಳೆದ ಬಾರಿ ಸಂಗಬೆಟ್ಟು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು .ಅವರು ಪ್ರಸ್ತುತ ಬಿಜೆಪಿ ಅಡಳಿತ ವೈಖರಿ, ಪ್ರಧಾನಿ ಮೋದಿಯವರ ಸಂಘಟನೆ ಹಾಗೂ ಶಾಸಕ ರಾಜೇಶ್ ನಾಯ್ಕ್ ಅವರ ಅಭಿವೃದ್ಧಿ ಯನ್ನು ಮೆಚ್ಚಿ ಬಿಜೆಪಿ ಗೆ ಸೇರ್ಪಡೆ ಯಾಗಿದ್ದಾರೆ

ಬಿಜೆಪಿ ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ ಅವರ ಸಮ್ಮುಖದಲ್ಲಿ ಬಿಜೆಪಿ ಧ್ವಜ ಹಾಗೂ ಶಾಲು ನೀಡಿ ಪಕ್ಷಕ್ಕೆ ಬರಮಾಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಕ್ಷೇತ್ರ ಪ್ರಧಾನಕಾರ್ಯದರ್ಶಿ ಡೊಂಬಯ್ಯ ಅರಳ, ಕಾರ್ಯದರ್ಶಿಗಳಾದ ಗಣೇಶ್ ರೈ,ಪುರುಷೋತ್ತಮ ಶೆಟ್ಟಿ ವಾಮದಪದವು, ಸೀತಾರಾಮ ಪೂಜಾರಿ, ಪ್ರಮುಖರಾದ ರತ್ನಕುಮಾರ್ ಚೌಟ, ಸತೀಶ್ ಪೂಜಾರಿ, ಮಂದಾರತಿ ಶೆಟ್ಟಿ, ನವೀನ್ ಹೆಗ್ಡೆ, ಉಮೇಶ್ ಗೌಡ, ಗಣೇಶ್ ಕೋಟ್ಯಾನ್, ಭರತ್,ಸತೀಶ್ ಸಂದೇಶ್ ಶೆಟ್ಟಿ, ಮೊಡಂಕಾಪು, ಸಂತೋಷ್ ರಾಯಿಬೆಟ್ಟು, ದಿನೇಶ್ ರಾಯಿ ಮತ್ತಿತರರು ಉಪಸ್ಥಿತರಿದ್ದರು.

More from the blog

ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್‌ ಗೆ ಆದೇಶ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ...

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಚಿನ್ನದ ದರ ಮತ್ತೆ ಏರಿಕೆ : ಇಂದು ಗೋಲ್ಡ್​ ರೇಟ್​ ಎಷ್ಟಿದೆ ಗೊತ್ತಾ..?

ಚಿನ್ನ ದಿನದಿಂದ ದಿನಕ್ಕೆ ಶಾಕ್​ ನೀಡುತ್ತಾ ಬರುತ್ತಿದೆ. ಕಳೆದ ತಿಂಗಳು ಮಾರ್ಚ್ ನಲ್ಲಿ ಅರವತ್ತು ಸಾವಿರದ ಗಡಿಯಲ್ಲಿದ್ದ ಬಂಗಾರ ಏಪ್ರಿಲ್ ನಲ್ಲಿ ಇದೀಗ ಎಪ್ಪತ್ತು ಸಾವಿರದ ಗಡಿ ದಾಟಿದೆ. ಕೇವಲ ಒಂದು ತಿಂಗಳ...