Thursday, April 11, 2024

ಕರ್ತವ್ಯದ ವೇಳೆ ಮಹಡಿ ಮೇಲಿನಿಂದ ಬಿದ್ದು ವ್ಯಕ್ತಿ ಸಾವು

ಬಂಟ್ವಾಳ: ಕರ್ತವ್ಯದ ವೇಳೆ ವ್ಯಕ್ತಿಯೋರ್ವ ಮಹಡಿ ಮೇಲಿನಿಂದ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಾಡಮೆ ಎಂಬಲ್ಲಿ ನಡೆದಿದೆ.

ಸಿದ್ದಕಟ್ಟೆ ದೇವಸ ನಿವಾಸಿ ದುರ್ಗಾಪ್ರಸಾದ್ ಎಂಬವರು ಮೃತಪಟ್ಟ ವ್ಯಕ್ತಿ.

ಮಾಡಮೆಯಲ್ಲಿ ಮನೆಯೊಂದರಲ್ಲಿ ಪ್ಲಬಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಮೇಲಿನಿಂದ ಕೆಳಕ್ಕೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ‌ದೂರು ದಾಖಲಾಗಿದೆ.

More from the blog

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಎಳನೀರು ಕುಡಿದು ಅಸ್ವಸ್ಥ ಪ್ರಕರಣ : ಫ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ

ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...