Saturday, April 13, 2024

ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ದೇವಾಲಯಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಭೇಟಿ

ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ದೇವಾಲಯಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಬೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದರು.

ಈ ಬಾರಿಯ ಚುನಾವಣೆಯಲ್ಲಿ ಜಯಭೇರಿಯಾಗಿ ಕ್ಷೇತ್ರದ ಜನರ ಸೇವೆ ಮಾಡುವ ಭಾಗ್ಯ ಸಿಗಲಿ, ಮತ್ತೊಮ್ಮೆ ಬಂಟ್ವಾಳ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಮಾಡುವ ಅವಕಾಶವನ್ನು ವೆಂಕಟರಮಣ ದೇವರು ಒದಗಿಸಿಕೊಡಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಅ ಬಳಿಕ ಬಂಟ್ವಾಳ ಕಾಶಿ ಮಠ, ಮಹಾಲಿಂಗೇಶ್ವರ ದೇವಸ್ಥಾನ, ಸೀತಾರಾಮ ದೇವಸ್ಥಾನಗಳಿಗೆ ಬೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಎ.ಗೋವಿಂದ ಪ್ರಭು, ಉದಯಕುಮಾರ್ ರಾವ್,ರವೀಶ್ ಶೆಟ್ಟಿ ಕರ್ಕಳ,ಮಾದವ ಮಾವೆ, ಶ್ರೀಧರ್ ಶೆಟ್ಟಿ ಪುಳಿಂಚ, ಬಾಮಿ ನಾಗೇಂದ್ರನಾಥ್ ಶೆಣೈ,ಬಸ್ತಿ ಸದಾಶಿವ ಶೆಣೈ,ಅಜಯ್ ಕೊಂಬ್ರಬೈಲು, ರಾಮ್ ಪ್ರಸಾದ್ ಪ್ರಭು, ವಸಂತ ಮಲ್ಯ, ಪ್ರಮೋದ್ ,ಸುರೇಶ್ ಕುಲಾಲ್, ಹರಿಪ್ರಸಾದ್ , ಶಶಿಕಲಾ , ಪುರುಷೋತ್ತಮ ಶೆಟ್ಟಿ ವಾಮದಪದವು,ಚರಣ್ ಜುಮಾದಿಗುಡ್ಡೆ ,ನಾಗೇಂದ್ರ ಬಾಳಿಗಾ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

More from the blog

ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್‌ ಗೆ ಆದೇಶ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ...

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಚಿನ್ನದ ದರ ಮತ್ತೆ ಏರಿಕೆ : ಇಂದು ಗೋಲ್ಡ್​ ರೇಟ್​ ಎಷ್ಟಿದೆ ಗೊತ್ತಾ..?

ಚಿನ್ನ ದಿನದಿಂದ ದಿನಕ್ಕೆ ಶಾಕ್​ ನೀಡುತ್ತಾ ಬರುತ್ತಿದೆ. ಕಳೆದ ತಿಂಗಳು ಮಾರ್ಚ್ ನಲ್ಲಿ ಅರವತ್ತು ಸಾವಿರದ ಗಡಿಯಲ್ಲಿದ್ದ ಬಂಗಾರ ಏಪ್ರಿಲ್ ನಲ್ಲಿ ಇದೀಗ ಎಪ್ಪತ್ತು ಸಾವಿರದ ಗಡಿ ದಾಟಿದೆ. ಕೇವಲ ಒಂದು ತಿಂಗಳ...