Friday, April 5, 2024

ನೂರಾರು ಕಾರ್ಯಕರ್ತರ ಜೊತೆ ನರೇಂದ್ರ ಮೋದಿಯವರ ಭಾಷಣ ವೀಕ್ಷಿಸಿದ ರಾಜೇಶ್ ನಾಯ್ಕ್

ಉಳಿ ಗ್ರಾಮದ ಬೂತ್ ಸಂಖ್ಯೆ 90 ಇದರ ಕಾರ್ಯಕರ್ತ ವಸಂತ ಪೂಜಾರಿ ಮಜಲು ಅವರ ಮನೆಯಲ್ಲಿ ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರು ನೂರಾರು ಕಾರ್ಯಕರ್ತರ ಜೊತೆಯಲ್ಲಿ ನರೇಂದ್ರ ಮೋದಿಯವರ ಭಾಷಣ ವೀಕ್ಷಿಸಿದರು.

ಮುಂಬರುವ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ 150+ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವ ಸಲುವಾಗಿ ಬೂತು ಕಾರ್ಯಕರ್ತರಿಂದ ರಾಷ್ಟ್ರೀಯ ನಾಯಕರವರೆಗೆ ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದು, ಇದರ ಅಂಗವಾಗಿ ರಾಜ್ಯದಾದ್ಯಂತ ಎ.27 ರಂದು ಗುರುವಾರ ಬೆಳಿಗ್ಗೆ 9.30 ಗಂಟೆಗೆ 224 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದು ವಿಶೇಷ ಕಾರ್ಯಕ್ರಮ ರಾಜ್ಯದಾದ್ಯಂತ ಏಕಕಾಲದಲ್ಲಿ ಹಮ್ಮಿಕೊಳ್ಳಲಾಗಿತ್ತು‌‌.

ರಾಜ್ಯದ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಾತನಾಡಿದ್ದಾರೆ.ಬಂಟ್ವಾಳ ಮಂಡಲದ 8 ಮಹಾಶಕ್ತಿ ಕೇಂದ್ರದ ಪ್ರಮುಖ ಸ್ಥಳಗಳಲ್ಲಿ ಎಲ್ಇಡಿ ಪರದೆಗಳ ವ್ಯವಸ್ಥೆ ಮಾಡಿ ಕಾರ್ಯಕ್ರಮದ ಆಯೋಜನೆ ಮಾಡಲಾಗಿತ್ತು.

.ಎಲ್ಲಾ ಶಕ್ತಿ ಕೇಂದ್ರ ಬೂತುಗಳಲ್ಲಿಯೂ ಕಾರ್ಯಕರ್ತರು ನಮೋ ಆ್ಯಪ್ , ಸರಳ ಆ್ಯಪ್ , ಬಿಜೆಪಿ ಆನ್‌ಲೈನ್ , ಯೂಟ್ಯೂಬ್ ಬಳಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...