Wednesday, April 10, 2024

ದೇವರಗದ್ದೆ ಕೊರಗಜ್ಜ ಸಾನಿಧ್ಯಕ್ಕೆ ಚಂದನ್ ಶೆಟ್ಟಿ ಭೇಟಿ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ದೇವರಗದ್ದೆ ಶ್ರೀ ಆದಿಮೊಗೇರ್ಕಳ ಮತ್ತು ಶ್ರೀ ಸ್ವಾಮಿ ಕೊರಗಜ್ಜ ದೇವಸ್ಥಾನ ಕ್ಕೆ ಶುಕ್ರವಾರ ಖ್ಯಾತ ರಾಫರ್ ಚಂದನ್ ಶೆಟ್ಟಿ ಮತ್ತು ಗಿಚ್ಚಿ ಗಿಲಿ ಗಿಲಿ ನಿರೂಪಕ ನಿರಂಜನ್ ದೇಶಪಾಂಡೆ ಮತ್ತು ಯಶಸ್ವಿನಿ ದೇಶಪಾಂಡೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಕ್ರಿಸ್ ಗೈಲ್ ಒಟ್ಟಿಗಿನ ಸಾಂಗ್ ಹಿಟ್ ಆಗಲಿ:

ತಾನು ಮತ್ತು ಖ್ಯಾತ ಕ್ರಿಕೇಟಿಗ ಕ್ರಿಸ್ ಗೈಲ್ ಜೊತೆಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಆಲ್ಬಂ ಸಾಂಗ್ ಅಂತರಾಷ್ಟ್ರೀಯ ಮಟ್ಟದಲ್ಲಿ ಯಶಸ್ವಿಯಾಗಿ ಮೂಡಿ ಬರಬೇಕು ಎಂದು ಕೊರಗಜ್ಜನಲ್ಲಿ ಮದ್ಯಸ್ಥ ಬಾಬು ಎಂ ಮೊಗ್ರರ ಮೂಲಕ ಪ್ರಾರ್ಥಿಸಿದರು. ಅಲ್ಲದೆ ಪ್ರಪ್ರಥಮ ವಾಗಿ ತಾನು ನಾಯಕ ನಟನಾಗಿ ಅಭಿನಯಿಸಿದ ಚಲನಚಿತ್ರವು ಇನ್ನೇನು ಬಿಡುಗಡೆಯಾಗಲಿದ್ದು ಯಶಸ್ವಿ ಯಾಗಬೇಕು ಎಂದು ಪ್ರಾರ್ಥನೆ ಮಾಡಿದರು.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...