Saturday, April 6, 2024

ಚಾರ್ಮಾಡಿ ಚೆಕ್‌ಪೋಸ್ಟ್‌ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಾರು ಪರಿಶೀಲನೆ

ಬೆಳ್ತಂಗಡಿ: ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಕಟ್ಟು ನಿಟ್ಟಿನ ವಾಹನ ತಪಾಸಣೆ ನಡೆಸುತ್ತಿದ್ದು, ಗುರುವಾರ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಜಿಲ್ಲಾಧ್ಯಕ್ಷ ಸುದರ್ಶನ ಅವರ ಕಾರನ್ನು ಅಧಿಕಾರಿಗಳು ತಡೆದು ತಪಾಸಣೆ ನಡೆಸಿದ್ದಾರೆ‌.

ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರಿರುವ ಇನೋವಾ ಕಾರು ಹಾಗೂ ಐದು ಪೊಲೀಸ್ ಭದ್ರತಾ ವಾಹನದೊಂದಿಗೆ ಬೆಂಗಳೂರಿನಿಂದ ಮಂಗಳೂರಿಗೆ ಚಾರ್ಮಾಡಿ ಘಾಟ್ ರಸ್ತೆ ಮೂಲಕ ಬರುತ್ತಿದ್ದಾಗ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿ ಜಯಕೀರ್ತಿ ಹೆಚ್.ಬಿ. ಅವರಿದ್ದ ತಂಡವು ತಡೆದು ನಿಲ್ಲಿಸಿ ಕಾರು ಪರಿಶೀಲನೆ ನಡೆಸಿ ನಂತರ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಚಾರ್ಮಾಡಿ ಚೆಕ್ ಪೋಸ್ಟ್ ಮೂಲಕ ಚಿಕ್ಕಮಗಳೂರು ಜಿಲ್ಲೆಯ ವಾಹನಗಳು ದ.ಕ ಜಿಲ್ಲೆಗೆ ಪ್ರವೇಶಿಸುತ್ತಿದ್ದು, ಅಂತರ್ ಜಿಲ್ಲಾ ಚೆಕ್ ಪೋಸ್ಟ್ ಆಗಿರುವ ಇಲ್ಲಿ ಕಟ್ಟು ನಿಟ್ಟಿನ ವಾಹನ ತಪಾಸಣೆ ನಡೆಸಲಾಗುತ್ತಿದೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...