Wednesday, April 10, 2024

ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ : ರಮಾನಾಥ ರೈ  

ಬಂಟ್ವಾಳ: ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಹೀಗಾಗಿ ಕಾಂಗ್ರೆಸ್ ಈಗಾಗಲೇ ಘೋಷಣೆ ಮಾಡಿರುವ ಗ್ಯಾರಂಟಿ ಕೊಡುಗೆಗಳು ಜನತೆಗೆ ಲಭಿಸುವುದು ನಿಶ್ಚಿತ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಭರವಸೆ ನೀಡಿದರು.

ಬಡಗಕಜೆಕಾರು ಗ್ರಾಮದ ಪಾಂಡವರಕಲ್ಲು ಜಂಕ್ಷನ್ ನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಕೆ.ಪಿ.ಸಿ.ಸಿ. ಸದಸ್ಯ ಪಿಯೂಸ್ ರಾಡ್ರಿಗಸ್, ಜಿ. ಪಂ. ಮಾಜಿ ಸದಸ್ಯ ಪದ್ಮಶೇಖರ್ ಜೈನ್, ಪಕ್ಷದ ಪ್ರಮುಖರುಗಳಾದ ಸುಧಾಕರ್ ಶೆಣೈ, ಮಾಯಿಲಪ್ಪ ಸಾಲ್ಯಾನ್, ಪಿ. ಎ. ರಹೀಮ್, ಮೋನಪ್ಪ ಪೂಜಾರಿ, ಸಂಪತ್ ಕುಮಾರ್ ಶೆಟ್ಟಿ, ಜಾನ್, ಅಸ್ಲಾಂ ಆಜೀಜ್, ರಕ್ಷಿತಾ, ಡೀಕಯ್ಯ ಬಂಗೇರ, ಜಯ ಬಂಗೇರ, ಸದಾಶಿವ ಬಂಗೇರ, ವಸಂತ ಮಿತ್ತೊಟ್ಟು, ರಾಮಚಂದ್ರ ಪೂಜಾರಿ, ಬಾಬು ಪೂಜಾರಿ, ಅಬ್ದುಲ್ಲಾ, ಪುಷ್ಪಲತಾ ಮೋಹನ್, ಸದಾನಂದ ಶೆಟ್ಟಿ, ಬಾಲಕೃಷ್ಣ ಅಂಚನ್, ಆನಂದ ಪೂಜಾರಿ ಕರ್ಲ, ವಿಠಲ ಕರ್ಲ ಉಮೇಶ್ ಬೋಳಂತ್ತೂರು, ಬಾಲಕೃಷ್ಣ ಪ್ರಭು, ಪದ್ಮನಾಭ ಸಾಮಂತ್,ವಿಕ್ಟರ್ ದೈಕಿನಕಟ್ಟೆ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

More from the blog

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

300 ರೂ. ಗಡಿಯತ್ತ ಹಸಿ ಕೊಕ್ಕೊ… 900 ರೂ. ಗಡಿಯತ್ತ ಒಣ ಕೊಕ್ಕೊ

ಪುತ್ತೂರು: ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹಸಿ ಕೊಕ್ಕೊ, ಒಣ ಕೊಕ್ಕೊ ಧಾರಣೆ ಮತ್ತಷ್ಟು ಜಿಗಿದಿದ್ದು, ಹೊರ ಮಾರುಕಟ್ಟೆಯಲ್ಲಿಯೂ ಅತ್ಯಧಿಕ ದರ ದಾಖಲಾಗಿದೆ. ಒಣ ಕೊಕ್ಕೊ 900 ರೂ. ಗಡಿಯತ್ತ, ಹಸಿ ಕೊಕ್ಕೊ 300 ರೂ....

ಬಂಟ್ವಾಳದ ಕುದ್ಕೋಳಿ: ಹೊತ್ತಿ ಉರಿದ ಡಸ್ಟರ್ ಕಾರು

ಬಂಟ್ವಾಳ: ಬಂಟ್ವಾಳ- ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಇಂದು ಬೆಳಗ್ಗೆ (ಸೋಮವಾರ) ನಡೆದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಬಳಿಕ ಸ್ಥಳೀಯರು ಹಾಗೂ ಬಂಟ್ವಾಳ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...