Monday, April 8, 2024

ಕಾಂಗ್ರೆಸ್ ಅವಧಿಯಲ್ಲಿ ಬಂಟ್ವಾಳದಲ್ಲಿ ಶಾಂತಿ ಕದಡಿದವರು ಬಿಜೆಪಿಗರು : ರಮಾನಾಥ ರೈ

ಬಂಟ್ವಾಳ: ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಂಟ್ವಾಳದಲ್ಲಿ ಶಾಂತಿ ಕದಡಿದವರು ಬಿಜೆಪಿಗರು. ಆದರೆ, ಈಗ ಬಂಟ್ವಾಳದಲ್ಲಿ ಶಾಂತಿಯಿದೆ, ಕಾಂಗ್ರೆಸ್ ಬಂದರೆ ಮತ್ತೆ ಶಾಂತಿ ಕದಡುತ್ತದೆ ಎಂದು ಸುಳ್ಳು ಹಬ್ಬಿಸುತ್ತಿದ್ದಾರೆ. ಕಾಂಗ್ರೆಸ್ ಅವಧಿಯಲ್ಲಿ ಶಾಂತಿ ಕದಡಿದವರು ಯಾರು ಎಂಬುದು ಜನತೆಗೆ ಸ್ಪಷ್ಟವಾಗಿ ತಿಳಿದಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.

ಬಂಟ್ವಾಳ ಕಸಬಾದ ನೇರಂಬೋಳ್, ಕೊಂಗ್ರಬೆಟ್ಟು, ಕೆಳಗಿನ ಪೇಟೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಗಳಲ್ಲಿ ಅವರು ಮಾತನಾಡಿದರು. ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಸಾಕಷ್ಟು ಅನುದಾನ ತಂದು ಅಭಿವೃದ್ಧಿ ಪಡಿಸಿರುವುದು ನಿಮಗೆ ತಿಳಿದಿದೆ. ನಾನು ಅಭಿವೃದ್ಧಿ ರಾಜಕಾರಣದಲ್ಲಿ ಆಸಕ್ತಿ ಹೊಂದಿದ್ದೇನೆಯೇ ಹೊರತು, ದ್ವೇಷದ ರಾಜಕಾರಣದಲ್ಲಿ ಆಸಕ್ತಿ ಹೊಂದಿಲ್ಲ ಎಂದು ಅವರು ತಿಳಿಸಿದರು.
ಬಂಟ್ವಾಳದಲ್ಲಿ ಮಿನಿ ವಿಧಾನ ಸೌಧ, ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ, ಅಂಬೇಡ್ಕರ್ ಭವನ, ನಿರೀಕ್ಷಣ ಮಂದಿರ, ಉದ್ಯಾನವನ ಮುಂತಾದ ಹಲವು ಅಭಿವೃದ್ಧಿ ಕಾರ್ಯ ನನ್ನ ಅವಧಿಯಲಾಗಿದೆ. ಬಂಟ್ವಾಳದಿಂದ ಪುಂಜಾಲಕಟ್ಟೆ ವರೆಗೆ ರಸ್ತೆ ಅಭಿವೃದ್ಧಿ ಆಗಿದೆ. ಅದನ್ನು ದಾಟಿ ಒಂದಿಂಚು ಹೆಚ್ಚು ಕಾಮಗಾರಿ ಮಾಡಲು ಬಿಜೆಪಿಗರಿಗೆ ಆಗಿಲ್ಲ. ನನ್ನ ಅಭಿವೃದ್ಧಿಗೆ ಸಾಕ್ಷಿಯಾಗಿ ವಾಮದಪದವು ಕಾಲೇಜು, ಅರೋಗ್ಯ ಕೇಂದ್ರ ನೋಡಬೇಕು. ಹೀಗೆ ಒಂದಲ್ಲ ಎರಡಲ್ಲ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನನ್ನ ಅವಧಿಯಲ್ಲಿ ಆಗಿದೆ. ಆದರೆ ಕಳೆದ ಅಪಪ್ರಚಾರ ಮಾಡಿ ನನ್ನನ್ನು ಸೋಲಿಸಲಾಗಿದೆ. ಸೋತ ಬಗ್ಗೆ ಬೇಸರವಿಲ್ಲ, ಆದರೆ ಸೋಲಿಸಿದ ವಿಧಾನದ ಬಗ್ಗೆ ಬೇಸರವಿದೆ ಎಂದು ತಿಳಿಸಿದರು.

ಬಡವರು ಇವತ್ತು ಕಣ್ಣೀರು ಹಾಕುತ್ತಿದ್ದಾರೆ. ಅವರೆಲ್ಲರ ಕಣ್ಣೀರು ಒರೆಸಲು ರಮಾನಾಥ ರೈ ಮತ್ತೊಮ್ಮೆ ಶಾಸಕರಾಗಿ ಗೆದ್ದು ಬರಬೇಕು ಎಂದು ಇದೇ ವೇಳೆ ಮಾತನಾಡಿದ ಕೆಪಿಸಿಸಿ ಸದಸ್ಯ ಪಿಯೂಸ್ ಎಲ್. ರೊಡ್ರಿಗಸ್ ಹೇಳಿದರು.

ಬಂಟ್ವಾಳದಲ್ಲಿ ಮತ್ತೆ ಕಾಂಗ್ರೆಸ್ ಗೆದ್ದರೆ ಮಾತ್ರ ಅಭಿವೃದ್ಧಿ ಸಾಧ್ಯ. ಯಾವುದೇ ಸ್ವಲಾಭ ಇಲ್ಲದೆ ಜನ ಸೇವೆ ಮಾಡಿದ ಜನ ನಾಯಕನಿದ್ದರೆ ರಮಾನಾಥ ರೈಗಳು ಮಾತ್ರ. ಇದು ಅವರ ಕೊನೆಯ ಚುನಾವಣೆ ಎಂದು ಅವರು ಹೇಳುತ್ತಿದ್ದಾರೆ. ಅವರನ್ನು ಈ ಚುನಾವಣೆಯಲ್ಲಿ ಗೆಲ್ಲಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ತಿಳಿಸಿದರು.

ಕೆಪಿಸಿಸಿ ಮುಖಂಡರುಗಳಾದ ಅಶ್ವನಿ ಕುಮಾರ್ ರೈ, ಚಂದ್ರಪ್ರಕಾಶ್ ಶೆಟ್ಟಿ, ಪ್ರಮುಖರುಗಳಾದ ಬಿ. ಎಚ್. ಖಾದರ್, ವಾಸು ಪೂಜಾರಿ, ಸದಾಶಿವ ಬಂಗೇರ, ಜನಾರ್ಧನ ಚೆಂಡ್ತಿಮಾರ್, ಚಂದ್ರಶೇಖರ್ ಪೂಜಾರಿ, ಅಬ್ಬಾಸ್ ಅಲಿ, ಪ್ರವೀಣ್ ಬಂಟ್ವಾಳ್, ಪ್ರವೀಣ್ ಜಕ್ರಿಬೆಟ್ಟು, ವಿಶ್ವನಾಥ ಗೌಡ, ರಿಯಾಜ್ ಬಂಟ್ವಾಳ, ಮಹಾಬಲ ಬಂಗೇರ, ನಡುಮನೆ ಪರಮೇಶ್ವರ್ ಸಾಲ್ಯಾನ್, ರಾಜೇಶ್ ರೊಡ್ರಿಗಸ್, ಮನೋಹರ್, ಲಿಂಗಪ್ಪ ಕುಲಾಲ್, ನಿತಿನ್, ದಯಾನಂದ, ನಾರಾಯಣ ನೇರಂಬೋಳ್, ಗಣೇಶ್ ಪೂಜಾರಿ, ವೆಂಕಪ್ಪ ಮೂಲ್ಯ, ಶ್ರೀಧರ್ ಗೌಡ, ರಾಜೀವ್ ಸಾಲ್ಯಾನ್, ಮಹಾಬಲ ನೇರಂಬೋಳ್, ಗಂಗಯ್ಯ, ಉದಯ, ಚಂದ್ರ ಪ್ರಕಾಶ್, ರಿಯಾಜ್, ರಿಯಾಜ್ ಹುಸೇನ್, ಬಶೀರ್ ಬಸ್ತಿಪಡ್ಪು, ನಾಸಿರ್ ಮತ್ತಿತರರು ಉಪಸ್ಥಿತರಿದ್ದರು.

ನನ್ನ ಹುಟ್ಟಿನ ಬಗ್ಗೆ ಪ್ರಶ್ನಿಸುತ್ತಾರೆ : ರೈ

ಬಿಜೆಪಿಗರು ನನ್ನ ಡಿಎನ್ ಎ ಬಗ್ಗೆ ಪ್ರಶ್ನಿಸುತ್ತಾರೆ. ಅಂದರೆ ನನ್ನ ತಂದೆಗೆ ನಾನು ಹುಟ್ಟಿರುವ ಕುರಿತು ಸಂಶಯದ ಮಾತುಗಳನ್ನು ಆಡುತ್ತಾರೆ. ಈ ಬಗ್ಗೆ ಕೇಳುವಾಗ ಮನಸಿಗೆ ತುಂಬಾ ಬೇಸರವಾಗುತ್ತದೆ ಎಂದು ರೈ ಭಾವುಕರಾದರು. ಕೊಂಗ್ರಬೆಟ್ಟುವಿನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ರೈಗಳು ಭಾವುಕರಾಗುತ್ತಿದ್ದಂತೆ ಅಲ್ಲಿ ಸೇರಿದ್ದವರ ಕಣ್ಣುಗಳಲ್ಲಿ ಕಣ್ಣೀರು ಹರಿದು ಬರುತ್ತಿದ್ದುದು ಗಮನಕ್ಕೆ ಬಂತು.

More from the blog

ಬಿಳಿನೆಲೆಗೆ ಬಂದ ನಕ್ಸಲರಿಗೆ ಶೋಧ : 6 ಮೊಬೈಲ್‌, 1 ಲ್ಯಾಪ್‌ಟಾಪ್‌ ಚಾರ್ಜ್‌ ಮಾಡಿಸಿಕೊಂಡ ನಕ್ಸಲರು

ಸುಬ್ರಹ್ಮಣ್ಯ: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಚೇರು ಎಂಬಲ್ಲಿನ ಅರಣ್ಯದಂಚಿನ ಮನೆಗೆ ಗುರುವಾರ ರಾತ್ರಿ ಭೇಟಿ ನೀಡಿದ್ದ ಮುಸುಕುಧಾರಿ, ಶಸ್ತ್ರಧಾರಿ ನಕ್ಸಲರ ತಂಡದಲ್ಲಿ 6 ಮಂದಿ ಇದ್ದರು ಎನ್ನುವುದು ದೃಢಪಟ್ಟಿದೆ. ಬಂದವರೆಲ್ಲರೂ ಒಂದೇ ರೀತಿಯ...

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...