Friday, April 12, 2024

ತಾಲೂಕು ಪಂಚಾಯತ್ ಕ್ವಾಟ್ರಸ್‌ನಲ್ಲಿ ಬಾಲಕ ನೇಣುಬಿಗಿದುಆತ್ಮಹತ್ಯೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕು ಪಂಚಾಯತ್ ನ ಪಕ್ಕದಲ್ಲಿರುವ ಸರಕಾರಿ ವಸತಿಗೃಹದಲ್ಲಿ ಬೆಳ್ತಂಗಡಿ ಶಿಕ್ಷಣ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕೆಲಸ ಮಾಡುತ್ತಿರುವ ಮಂಜಳಾ ಅವರ ತಂಗಿ ಭಾಗ್ಯಮ್ಮ ಅವರ ಮಗ ಶಿವಪ್ರಸಾದ್ ವಸತಿಗೃಹದ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಮೃತ ಶಿವಪ್ರಸಾದ್ ಚಿತ್ರದುರ್ಗದಲ್ಲಿ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಶಾಲೆಗೆ ರಜೆ ಇರುವುದರಿಂದ ದೊಡ್ಡಮ್ಮ ಮಂಜುಳಾ ಅವರ ಬೆಳ್ತಂಗಡಿ ವಸತಿಗೃಹಕ್ಕೆ ಬಂದಿದ್ದು ಘಟನೆ ವೇಳೆ ಮಂಜುಳಾ ಕೆಲಸಕ್ಕೆ ಹೋಗಿದ್ದು ,ಮಗಳು ಅಮೃತ ಕಾಲೇಜಿಗೆ ಹೋಗಿದ್ದಳು, ಮಗ ವಿರೇಂದ್ರ ಕೂಡ ಕೆಲಸಕ್ಕೆ ಹೋಗಿದ್ದರು. ಮಧ್ಯಾಹ್ನ ಮಂಜುಳಾ ಕೆಲಸದಿಂದ ವಸತಿಗೃಹಕ್ಕೆ ಬಂದಾಗ ಬಾಲಕ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಬ್ ಇನ್ಸೆಕ್ಟರ್ ಅರ್ಜುನ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

More from the blog

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಚಿನ್ನದ ದರ ಮತ್ತೆ ಏರಿಕೆ : ಇಂದು ಗೋಲ್ಡ್​ ರೇಟ್​ ಎಷ್ಟಿದೆ ಗೊತ್ತಾ..?

ಚಿನ್ನ ದಿನದಿಂದ ದಿನಕ್ಕೆ ಶಾಕ್​ ನೀಡುತ್ತಾ ಬರುತ್ತಿದೆ. ಕಳೆದ ತಿಂಗಳು ಮಾರ್ಚ್ ನಲ್ಲಿ ಅರವತ್ತು ಸಾವಿರದ ಗಡಿಯಲ್ಲಿದ್ದ ಬಂಗಾರ ಏಪ್ರಿಲ್ ನಲ್ಲಿ ಇದೀಗ ಎಪ್ಪತ್ತು ಸಾವಿರದ ಗಡಿ ದಾಟಿದೆ. ಕೇವಲ ಒಂದು ತಿಂಗಳ...

ಪ್ರಧಾನಿ ರೋಡ್ ಶೋ ಹಿನ್ನೆಲೆ : ಜೇನುಗೂಡು ತೆರೆವುಗೊಳಿಸಲು ಮಂಗಳೂರು ಪೊಲೀಸ್ ಆಯುಕ್ತರ ಆದೇಶ

ಮಂಗಳೂರು: ನಗರದಲ್ಲಿ ಏ.14ರಂದು ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ನಡೆಯಲಿರುವ ಮಾರ್ಗದಲ್ಲಿ ಇರುವ ಎಲ್ಲ ಜೇನುಗೂಡುಗಳನ್ನು ತೆರವುಗೊಳಿಸುವಂತೆ ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್‌ ಅವರು ಉಪಅರಣ್ಯ ಸಂರಕ್ಷಣಾಧಿಕಾರಿಗೆ ಪತ್ರ...