Thursday, April 11, 2024

ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಸಲ್ಲಿಕೆಯಾಗಿದ್ದ 8 ನಾಮಪತ್ರಗಳ ಪೈಕಿ ಎರಡು ನಾಮಪತ್ರಗಳು ತಿರಸ್ಕೃತ

ಬಂಟ್ವಾಳ: 2023 ರ ವಿಧಾನ ಸಭಾ ಚುನಾವಣಾ ನಾಮಪತ್ರ ಪರಿಶೀಲನೆ ವೇಳೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರದಿಂದ ಸಲ್ಲಿಸಲಾಗಿದ್ದ ಒಟ್ಟು 8 ನಾಮಪತ್ರಗಳ ಪೈಕಿ ಎರಡು ನಾಮಪತ್ರಗಳು ಕೆಲವೊಂದು ಬಲವಾದ ಕಾರಣಗಳಿಗಾಗಿ ತಿರಸ್ಕೃತಗೊಂಡಿದ್ದು,ನಿಯಮ ಪ್ರಕಾರ ಸರಿ ಇರುವ 6 ನಾಮಪತ್ರಗಳು ಅಂಗೀಕೃತವಾಗಿದೆ ಎಂದು ಚುನಾವಣಾ ಕಚೇರಿ ಮಾಹಿತಿ ನೀಡಿದೆ.

ಭಾರತೀಯ ಜನತಾ ಪಾರ್ಟಿಯ ರಾಜೇಶ್ ನಾಯ್ಕ್ ಯು, ಸೋಶಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಎಂ ಇಲಿಯಾಸ್, ಸೋಶಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಯುವ (ಪಕ್ಷೇತರ ಅಭ್ಯರ್ಥಿ) ಅಬ್ದುಲ್ ಮಜೀದ್ ಖಾನ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಬಿ. ರಮಾನಾಥ ರೈ, ಜಾತ್ಯಾತೀತ ಜನತಾ ದಳದ ಪ್ರಕಾಶ್ ರಫಾಯಲ್ ಗೋಮ್ಸ್, ಆಮ್ ಆದ್ಮಿ ಪಕ್ಷದ ಪುರುಷೋತ್ತಮ ರವರ ನಾಮಪತ್ರ ಅಂಗೀಕೃತವಾಗಿರುತ್ತದೆ.

ಉಳಿದಂತೆ ಉತ್ತಮ ಪ್ರಜಾಕೀಯ ಪಕ್ಷದ ಅನೀಶ್ ಶೆಟ್ಟಿಯವರು 10 ಸೂಚಕರ ಬದಲಾಗಿ ಕೇವಲ 7 ಸೂಚಕರನ್ನು ನೀಡಿರುತ್ತಾರೆ. ಪಕ್ಷೇತರ ಅಭ್ಯರ್ಥಿ ಬಿ ಟಿ ಕುಮಾರ್ ರವರು ನಾಮಪತ್ರ ಪೂರ್ಣವಾಗಿ ತುಂಬಿಸಿಲ್ಲ, ಠೇವಣಿ ಪಾವತಿಸಿಲ್ಲ, ಸೂಚಕರನ್ನು ನೀಡಿಲ್ಲ, ನಮೂನೆ 26 ತುಂಬಿಲ್ಲ. ಆದ್ದರಿಂದ ಈ ಎರಡು ನಾಮಪತ್ರಗಳು ತಿರಸ್ಕೃತಗೊಂಡಿವೆ ಎಂದು ಬಂಟ್ವಾಳ ಚುನಾವಣಾ ಕಚೇರಿ ಅಧಿಕೃತವಾಗಿ ತಿಳಿಸಿದೆ.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...