Saturday, April 6, 2024

ವಿಧಾನ ಸಭಾ ಚುನಾವಣೆಗೆ ರಾಜಕೀಯ ಪಕ್ಷಗಳ ಅಬ್ಬರದ ಪ್ರಚಾರಕ್ಕೆ ಸಿದ್ದತೆ

ಬಂಟ್ವಾಳ: 2023ರ ಮೇ.10 ರಂದು ನಡೆಯಲಿರುವ ವಿಧಾನ ಸಭಾ ಚುನಾವಣೆಗೆ ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆಗೆ ವೇಗ ದೊರೆತಿದೆ.

ಬಾರಿ ಕುತೂಹಲ ಕೆರಳಿಸುವ ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಮತ್ತೆ ಈ ಬಾರಿ ಯಾವ ಪಕ್ಷಕ್ಕೆ ಗೆಲುವು ಸಿಗುತ್ತದೆ ಎಂಬ ಲೆಕ್ಕಾಚಾರಗಳು ನಡೆಯುತ್ತಿದೆ. ಗೆಲುವಿಗಾಗಿ ಯಾವ ತಂತ್ರಗಳು ಮಾಡಬೇಕಾಗಿದೆ ಎಂಬ ಯೋಜನೆ, ಯೋಚನೆಗಳನ್ನು ಕಾಂಗ್ರೆಸ್ ಬಿಜೆಪಿ ನಡುವೆ ಶುರು ವಾಗಿದೆ.

‌‌ ಕದನದಲ್ಲಿ ಗೆಲುವು ಸಾಧಿಸಲು ಪ್ರಚಾರ ಕಾರ್ಯ ನಡೆಯುತ್ತಿದೆ. ಮನೆಮನೆಗೆ ತೆರಳಿ ಕೈಕಾಲು ಹಿಡಿದು ಮತಕೇಳುವ ಕಾಯಕ್ಕೆ ಇಂದಿನಿಂದ ವೇಗ ದೊರೆತಿವೆ.

ಅಬ್ಬರದ ಪ್ರಚಾರಕ್ಕೆ ಸಿದ್ದತೆ

ಮನೆಮನೆಗೆ ಬೇಟಿ ನೀಡಿ ಮತಕೇಳುವ ಕೆಲಸ ಒಂದು ಕಡೆಯಾದರೆ ಜನರನ್ನು ರಾಜಕೀಯವಾಗಿ ಮರುಳು ಮಾಡಿ ಮತಪಡೆಯುವುದು ಕೂಡ ಒಂದು ಗಿಮಿಕ್..ಅದಕ್ಕಾಗಿ ಸ್ಟಾರ್ ಪ್ರಚಾರಕರುಳನ್ನು ಬಂಟ್ವಾಳಕ್ಕೆ ಕರೆತರುವ ಪ್ರಯತ್ನ ಎರಡು ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಮತ್ತು ‌ಬಿಜೆಪಿಯಿಂದ ನಡೆಯುತ್ತಿದೆ ಎನ್ನಲಾಗಿದೆ.

ಬಿಜೆಯಿಂದ ಯುವಕರ ಮಾಸ್ ಲೀಡರ್ ಆಗಿರುವ ಯೋಗಿ ಆದಿತ್ಯನಾಥ್ ಅವರ ಹೆಸರು ಕೇಳಿಬರುತ್ತಿದ್ದು,ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿ ಪ್ರಚಾರಕ್ಕೆ ಹುರುಪು ತುಂಬುವ ಕೆಲಸ ಮಾಡಲಿದ್ದು, ರೋಡ್ ಶೋ ಮೂಲಕ ಮತವಾಗಿ ಮಾರ್ಪಾಡು ಮಾಡಲು ಯೋಜನೆ ಸಿದ್ದವಾಗಿದೆ ಎನ್ನಲಾಗಿದೆ.

ಇದೇ ರೀತಿ ಕಾಂಗ್ರೆಸ್ ಕೂಡ ಸ್ಟಾರ್ ಪ್ರಚಾರಕ್ಕೆ ಮುಂದಾಗಿದೆ ಕಾಂಗ್ರೆಸ್ ನಾಯಕರಾದ , ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಕೇಳಿಬಂದಿದೆ.

ಇವರ ಜೊತೆಯಲ್ಲಿ ಇನ್ನಿಬ್ಬರು ಜಗದೀಶ್ ಶೆಟ್ಟರ್ ಹಾಗೂ ಲಕ್ಷಣ್ ಸವದಿ ಅವರು ಹೆಸರು ಕೇಳಿಬರುತ್ತಿದೆ.

ಇತ್ತೀಚಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಲಕ್ಷಣ್ ಸವದಿ ಅವರು ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ತರುವ ಸ್ಟಾರ್ ಆಗಿದ್ದು, ಅವರನ್ನು ಪ್ರಚಾರಕ್ಕೆ ಬಳಸಿಕೊಳ್ಳುವ ಬಹುತೇಕ ಲಕ್ಷಣಗಳು ಇವೆ ಎನ್ನಲಾಗಿದೆ.

More from the blog

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ಮಿತಿ ಮೀರಿದ ತಾಪಮಾನ : ಖಡಕ್​ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲು ಹೆಚ್ಚಳವಾಗುತ್ತಿದ್ದು ಮುಂದಿನ 14 ದಿನಗಳ ಕಾಲ ಬಿಸಿಗಾಳಿ ಬೀಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್​...

ಮನೆಯ ಮಹಡಿಯಿಂದ ಬಿದ್ದು ಬಾಲಕ ಸಾವು

ಬಂಟ್ವಾಳ: ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಎ.‌ ೧ರ ಮುಂಜಾನೆ ನಡೆದಿದೆ. ಬಂಟ್ವಾಳ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್(೧೫) ಮೃತಪಟ್ಟ ಬಾಲಕ. ಆತ ಮನೆಯಲ್ಲಿ ದೊಡ್ಡಮ್ಮನ...

ಮಾಂಸ ಪ್ರಿಯರಿಗೆ ಬೆಲೆ ಏರಿಕೆ ಶಾಕ್.. ಕೋಳಿ ಮಾಂಸದ ದರ ಏರಿಕೆ

ಮಂಗಳೂರು: ಕೋಳಿಮಾಂಸ, ಮೀನಿನ ದರ ಏರುಗತಿ ಯಲ್ಲಿ ಸಾಗುತ್ತಿದ್ದು ಮಾಂಸಾಹಾರ ಪ್ರಿಯರ ಜೇಬಿಗೂ ಕತ್ತರಿ ಬೀಳುವಂತಾಗಿದೆ. ಪ್ರಸ್ತುತ ಕೋಳಿಮಾಂಸಕ್ಕೆ (ವಿದ್‌ ಸ್ಕಿನ್‌) ಕೆ.ಜಿ.ಗೆ ಬ್ರಾಯ್ಲರ್‌ ಕೆಲವು ಕಡೆ 235-240 ರೂ., ಟೈಸನ್‌ 270 ರೂ....