Saturday, April 13, 2024

ಕೆರೆಗೆ ಬಿದ್ದ ಕಾಡಾನೆಗಳು ; ಸೆರೆ ಹಿಡಿದು ಸ್ಥಳಾಂತರಕ್ಕೆ ಸ್ಥಳೀಯರ ಆಗ್ರಹ

ಅರಂತೋಡು : ತೋಟಕ್ಕೆ ನುಗ್ಗಿದ್ದ ಕಾಡಾನೆಗಳ ಹಿಂಡು ತೋಟದಲ್ಲಿನ ಕೆರೆಗೆ ಬಿದ್ದಿರುವ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದಲ್ಲಿ ನಡೆದಿದೆ.

ಆಹಾರ ಅರಸುತ್ತಾ ಬಂದಿದ್ದ ಕಾಡಾನೆಗಳು ತೋಟದಲ್ಲಿ ಕೆಲ ಕೃಷಿ ಪುಡಿಗೈದಿದ್ದು, ಬಳಿಕ ಆಯತಪ್ಪಿ ಅಜ್ಜಾವರ ಗ್ರಾಮದ ತುದಿಯಡ್ಕ ಎಂಬಲ್ಲಿ ತೋಟವೊಂದರ ಕೆರೆಗೆ ರಾತ್ರಿ ಮೂರು ಕಾಡಾನೆಗಳು ಬಿದ್ದಿವೆ. ಕೆರೆಗೆ ಬಿದ್ದ ಆನೆಗಳಿಗೆ ಮೇಲೆ ಬರಲು ಸಾಧ್ಯವಾಗದೆ ಪರಿತಪಿಸುತ್ತಿದ್ದು, ಅರಣ್ಯ ಇಲಾಖಾ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಲು ಸಿದ್ಧತೆ ನಡೆಸಿದ್ದಾರೆ.

ಇನ್ನು ಕೆರೆಗೆ ಬಿದ್ದಿರುವ ಕಾಡಾನೆಗಳನ್ನು ಸೆರೆ ಹಿಡಿದು ಬೇರೆಡೆಗೆ ಸ್ಥಳಾಂತರಿಸುವಂತೆ ಸ್ಥಳೀಯರು ಪಟ್ಟು ಹಿಡಿದು ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ಅಧಿಕಾರಿಗಳು ಯಾವ ಕ್ರಮಕೈಗೊಳ್ಳಲಿದ್ದಾರೆ ಎಂಬುದು ತಿಳಿದು ಬರಬೇಕಿದೆ.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...