Saturday, April 6, 2024

ಕಾಡಾನೆ ಪ್ರತ್ಯಕ್ಷ ; ಅಸ್ವಸ್ಥಗೊಂಡಿರುವ ಬಗ್ಗೆ ಸಾರ್ವಜನಿಕರಿಂದ ಮಾಹಿತಿ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿ ಬದಿಯಲ್ಲಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಅದು ಅಸ್ವಸ್ಥಗೊಂಡಿರುವ ಶಂಕೆ ವ್ಯಕ್ತವಾಗಿದೆ.

ರವಿವಾರ ಸಂಜೆಯಿಂದ ರಾತ್ರಿ ವರೆಗೆ ಬಿಳಿನೆಲೆ ಭಾಗದ ಚೇರು ಪರಿಸರದಲ್ಲಿ ಕಾಡಾನೆ ಸಂಚಾರ ಮಾಡಿದ್ದು, ಸೋಮವಾರ ಬೆಳಗ್ಗೆ ಮತ್ತೆ ಎರ್ಮಾಯಿಲ್ ಭಾಗದಲ್ಲಿ ಕಾಣಿಸಿಕೊಂಡಿದೆ. ತೀರಾ ಅಸ್ವಸ್ಥಗೊಂಡು ಬಳಲಿದಂತೇ ಕಾಣುವ ಕಾಡಾನೆ, ನಡೆಯಲು ಅಸಾಧ್ಯವಾಗಿ ಕಷ್ಟಪಡುತ್ತಿದೆ ಎನ್ನಲಾಗುತ್ತಿದೆ. ಸಾರ್ವಜನಿಕರ ಮಾಹಿತಿ ಪ್ರಕಾರ, ಎಡಗಾಲಿಗೆ ಏನೋ ಬಲವಾದ ಗಾಯ ಆದಂತೆ ಕಾಣುತ್ತಿದ್ದು, ನಿಧಾನಗತಿಯಲ್ಲಿ ನಡೆಯುತ್ತಿದೆ. ತಿಂದ ಆಹಾರವನ್ನು ಜಗಿದು ಅಲ್ಲಲ್ಲೆ ಉಗಿದು ಹೋಗುತ್ತಿದೆ ಎಂಬುದಾಗಿ ಹೇಳಿದ್ದಾರೆ.

 

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...