ವಿಟ್ಲ: ಕಲ್ಲಕಟ್ಟ ಸೇತುವೆ ಬಳಿ ಗುಡ್ಡೆಯೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

ಸ್ಥಳೀಯರು ಆಗಮಿಸಿ ಅಗ್ನಿಶಾಮಕದಳದವರಿಗೆ ಮಾಹಿತಿ ನೀಡಿದರು. ಬಳಿಕ ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ವಿಟ್ಲ ಪಟ್ಟಣ ಪಂಚಾಯತ್ ಸಿಬ್ಬಂದಿಗಳು ವಾಹನದಲ್ಲಿ ನೀರು ಹಾಯಿಸುವ ಕಾರ್ಯಾಚರಣೆ ಕೂಡಾ ನಡೆಸಿದ್ದಾರೆ. ಸ್ಥಳಕ್ಕೆ ಸ್ಥಳೀಯರು ಆಗಮಿಸಿ ಬೆಂಕಿ ಆರಿಸುವ ಕಾರ್ಯ ಮಾಡಿದ್ದಾರೆ.
