Sunday, April 7, 2024

ಪುಟ್ಟ ಬಾಲಕನ ಚಿಕಿತ್ಸೆಗೆ ಭವತಿ ಬಿಕ್ಷಾಂದೇಹಿ ಮೂಲಕ ನೆರವಾದ ಶ್ರೀ ರಾಮ ಭಕ್ತ ಆಂಜನೇಯ ಟ್ರಸ್ಟ್ (ರಿ.)ನ ಮಕ್ಕಳು

ಸದಾ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಶ್ರೀ ರಾಮ ಭಕ್ತ ಆಂಜನೇಯ ಟ್ರಸ್ಟ್ (ರಿ ) ಹನುಮಾನ್ ನಗರ ಪೋಡಿಕಲ ಕಂಬ್ಳ ಇದರ ಮಕ್ಕಳು ಒಟ್ಟು ಸೇರಿ ವಿಶ್ವಹಿಂದೂಪರಿಷದ್ ಭಜರಂಗದಳ ಹನುಮಾನ್ ಶಾಖೆ ಪೋಡಿಕಲ ಬಂಟ್ವಾಳ ಪ್ರಖಂಡ ಇವರ ಮುಂದಾಳತ್ವದಲ್ಲಿ ಕಾರಣಿಕ ಕ್ಷೇತ್ರ ಪೊಳಲಿ ರಾಜರಾಜೇಶ್ವರಿ ದೇವಿಯ ಜಾತ್ರೋತ್ಸವದ ಸಂದರ್ಭದಲ್ಲಿ ಭವತಿ ಬಿಕ್ಷಾಂದೇಹಿ ಸಹಾಯ ಯೋಜನೆಯಂತೆ ಮಂಗಳೂರು ತಾಲೂಕಿನ ಕುಪ್ಪೆಪದವು ಸಮೀಪದ ಕೊಳವೂರು ಗ್ರಾಮದ ಜಯಶೀಲಾ ಸದಾಶಿವ ಆಚಾರ್ಯ ದಂಪತಿಗಳ 2ವರ್ಷದ ಶಮಿತ್ ಎಂಬ ಮಗುವಿನ ಚಿಕಿತ್ಸೆ ಗೆ ಧನಸಹಾಯ ವನ್ನು ಪೊಳಲಿ ರಾಜರಾಜೇಶ್ವರಿ ದೇವಿಯ ಸಮ್ಮುಖದಲ್ಲಿ ಭರತ್ ಕುಮ್ದೇಲ್ ಉಪಸ್ಥಿತಿಯಲ್ಲಿ ಹಸ್ತಾಂತರ ಮಾಡಲಾಯಿತು.

ಹುಟ್ಟುವಾಗಲೇ ಮಲ ವಿಸರ್ಜನೆ ಮಾಡುವ ಅಂಗವಿರಲಿಲ್ಲ ಹಾಗೂ ಮೂತ್ರಕೋಷದ ಸಮಸ್ಯೆಯಿಂದ ಬಳಲುತ್ತಿದ್ದ ಶಮಿತ್ ಮಗುವಿನ ಚಿಕಿತ್ಸೆಗೆ 3ರಿಂದ 4ಲಕ್ಷ ಅವಶ್ಯಕತೆ ಇರುವ ಕಾರಣಕ್ಕಾಗಿ ವಿಶ್ವಹಿಂದೂ ಪರಿಷದ್ ಭಜರಂಗದಳ ಹನುಮಾನ್ ಶಾಖೆ ಪೋಡಿಕಲ ಬಂಟ್ವಾಳ ಪ್ರಖಂಡ ಮುಂದಾಳತ್ವದಲ್ಲಿ ಪೊಳಲಿ ರಥೋತ್ಸವ ದ ಸಂದರ್ಭದಲ್ಲಿ ಭವತಿ ಬಿಕ್ಷಾಂದೇಹಿ ಯೋಜನೆಯಂತೆ 64,377 ರೂ. ಸಂಗ್ರಹವಾಗಿದ್ದು, ಈ ಮೊತ್ತವನ್ನು ಸಂಕಷ್ಟದಲ್ಲಿರುವ ಬಡ ಕುಟುಂಬಕ್ಕೆ ಪೊಳಲಿ ರಾಜರಾಜೇಶ್ವರಿ ದೇವಿಯ ಸಮ್ಮುಖದಲ್ಲಿ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ವೆಂಕಟೇಶ್ ನಾವುಡ ಪೊಳಲಿ ಯಶವಂತ್ ಪೊಳಲಿ ಸಂಘದ ಸದಸ್ಯರು ಭಜರಂಗದಳದ ಸದಸ್ಯರು ಕಾರ್ಯಕರ್ತರು ಉಪಸ್ಥಿತರಿದ್ದರು

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...