Sunday, April 7, 2024

ಕಾಂಗ್ರೆಸ್ ನ ದ್ವೇಷದ ರಾಜಕಾರಣಕ್ಕೆ ಮತದಾರರು ಬಲಿಯಾಗಬಾರದು-ಅಭ್ಯರ್ಥಿ ರಾಜೇಶ್ ನಾಯ್ಕ್

ಕಾಂಗ್ರೆಸ್ ಪಕ್ಷದ ದ್ವೇಷದ ರಾಜಕಾರಣಕ್ಕೆ ಮತದಾರರು ಮತ್ತು ಕಾರ್ಯಕರ್ತರು ಬಲಿಯಾಗಬಾರದು ಎಂದಾದರೆ ಬಂಟ್ವಾಳದಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಬೇಕು ಎಂದು ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರು ತಿಳಿಸಿದರು.

ಮೂಡುಪಡುಕೋಡಿ ಮತ್ತು ಇರ್ವತ್ತೂರು ಗ್ರಾಮದಲ್ಲಿ ಮತಯಾಚನೆ ನಡೆಸಿದ ಸಂದರ್ಭದಲ್ಲಿ ‌ಮಾತನಾಡಿದರು.

ಬಿಜೆಪಿ ಅಧಿಕಾರಕ್ಕೆ ಬರುವ ಮೊದಲ ಅವಧಿಯಲ್ಲಿ ಬಂಟ್ವಾಳದಲ್ಲಿ ಕಾರ್ಯಕರ್ತರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ,ಜೈಲಿಗಟ್ಟಿ ಅವರನ್ನು ಅಪರಾಧದ ಲೋಕಕ್ಕೆ ಕೊಂಡುಹೋದ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ ಅದೇ ಮಾದರಿಯಲ್ಲಿ ದ್ವೇಷಪೂರಿತ ರಾಜಕಾರಣ ಮಾಡುತ್ತದೆ ಎಂದು ಅವರು ಕಾರ್ಯಕರ್ತರನ್ನು ಎಚ್ಚರಿಸಿದರು.

ಬಿಜೆಪಿ ಅಧಿಕಾರದಲ್ಲಿರುವುದರಿಂದ ಜನತೆ ನೆಮ್ಮದಿಯಿಂದ ಇದ್ದರೆ, ಕಾರ್ಯಕರ್ತರು ಗೌರವದಿಂದ ತಲೆ ಎತ್ತಿ ನಡೆಯಲು ಅವಕಾಶ ಸಿಕ್ಕಿದೆ ಎಂದು ಅವರು ತಿಳಿಸಿದರು.

ಪ್ರಥಮ ಶಾಸಕತ್ವದ ಅವಧಿಯಲ್ಲಿ ಕ್ಷೇತ್ರದ ಜನರ ನಿರೀಕ್ಷೆಗೂ ಮೀರಿದ ಕೆಲಸಗಳನ್ನು ಪ್ರಾಮಾಣಿಕತೆಯಿಂದ ಮಾಡಿದ್ದೇನೆ ಎಂದು ಹೇಳಿದ ಅವರು ಮತ್ತೊಮ್ಮೆ ಅವಕಾಶ ನೀಡಿ, ಬಂಟ್ವಾಳ ಕ್ಷೇತ್ರದಲ್ಲಿ ಅದ್ಬುತ ರೀತಿಯಲ್ಲಿ ಅಭಿವೃದ್ಧಿ ಮಾಡುತ್ತೇನೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಕಾರ್ಯದರ್ಶಿ ರಮನಾಥ ರಾಯಿ, ಮಂಡಲದ ಉಪಾಧ್ಯಕ್ಷ ಚಿದಾನಂದ ರೈ ಕಕ್ಯ, ರಾಯಿ ಗ್ರಾ.ಪಂ.ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ, ರಮೇಶ್ ಕುಡುಮೇರು,ಗ್ರಾ.ಪಂ.ಸದಸ್ಯ ಶುಭಕರ ಶೆಟ್ಟಿ, ಬೂತ್ ಅಧ್ಯಕ್ಷ ಸುಂದರ ನಾಯ್ಕ್, ಪ್ರಮುಖರಾದ ಶಂಕರ ಶೆಟ್ಟಿ ಬೆದ್ರಮಾರ್, ಸಂತೋಷ್ ಕುಂಟಜಾಲು, ದೇವಪ್ಪ ಶೆಟ್ಟಿ ಕುಂಟಜಾಲು, ಲೋಕೇಶ್ ನಾಯ್ಕ್ ಎರ್ಮೆನಾಡು, ರವಿಶಂಕರ್ ಹೊಳ್ಳ ಮತ್ತಿತರರು ಉಪಸ್ಥಿತರಿದ್ದರು.

More from the blog

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...