Friday, April 5, 2024

ಶ್ರೀ ಕ್ಷೇತ್ರ ಒಡಿಯೂರಿನಲ್ಲಿ ಶ್ರೀಮದ್ರಾಮಾಯಣ ಮಹಾಯಜ್ಞ ಮತ್ತು ಅಖಂಡ ಭಗವನ್ನಾಮ ಸಂಕೀರ್ತನೆ ಸಮಾರೋಪ

ವಿಟ್ಲ: ಕೆಟ್ಟವರನ್ನು ಹೊರಗೆ ಹುಡುಕುವ ಬದಲು, ನಮ್ಮ ಒಳಗಿನಲ್ಲಿ ಹುಡುಕುವ ಕಾರ್ಯವಾಗಬೇಕಾಗಿದೆ.ರಾಮಾಣಯದ ಒಳತಿರುಳನ್ನು ತಿಳಿದು ಸಂಸ್ಕಾರದ ಪಾಠವನ್ನು ಕಲಿಯುವ ಪ್ರಯತ್ನ ಮಾಡಬೇಕು. ಜ್ಞಾನ ತುಂಬಿದ ಭಜನೆ ಬದುಕಿನ ಪಾಠವನ್ನು ನೀಡುವ ಜತೆಗೆ ಸಂಸ್ಕಾರ ತುಂಬುವ ಕೆಲಸವನ್ನು ಮಾಡುತ್ತದೆ. ಆನಂದದ ಸೆಲೆ ಅಡಗಿರುವ ರಾಮನಾಮದ ಪಠನೆಯಿಂದ ಪರಿಶುದ್ಧತೆಯನ್ನು ಕಾಣಲು ಸಾಧ್ಯ ಎಂದು ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.

ಅವರು ಗುರುವಾರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಹನುಮೋತ್ಸವ ಮತ್ತು ಶ್ರೀರಾಮನವಮಿಯಿಂದ ಮೊದಲ್ಗೊಂಡು ಶ್ರೀ ಹನುಮಜ್ಜಯಂತಿವರೆಗೆ ನಡೆದ ಶ್ರೀಮದ್ರಾಮಾಯಣ ಮಹಾಯಜ್ಞ ಮತ್ತು ಅಖಂಡ ಭಗವನ್ನಾಮ ಸಂಕೀರ್ತನೆ ಸಮಾರೋಪದಲ್ಲಿ ಆಶೀರ್ವಚನ ನೀಡಿದರು.

ನಮ್ಮಲ್ಲಿ ಪರಿವರ್ತನೆಯಾದಾಗ ಸಮಾಜದಲ್ಲಿ ಬದಲಾವಣೆ ಮಾಡುವ ಶಕ್ತಿ ತುಂಬುತ್ತದೆ. ದೇವರು ನೋಡುವ ನೋಟದಲ್ಲಿ ತುಂಬಿಕೊಂಡಿದ್ದು, ಭಗವನ್ನಾಮಸಂಕೀರ್ತನೆಯ ಮೂಲಕ ಭಗವಂತನನ್ನು ಕಾಣಲು ಸಾಧ್ಯವಿದೆ. ದೇವಾಲಯಗಳ ಅಭಿವೃದ್ಧಿಯ ಮೂಲಕ ಸನಾತನ ಹಿಂದೂ ಧರ್ಮ ಬಲ ಲಭಿಸಿದೆ ಎಂದು ತಿಳಿಸಿದರು.

ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ ಭಕ್ತಿ ಮಾರ್ಗದ ಸಾರವನ್ನು ಯುವ ಪೀಳಿಗೆಗೆ ನೀಡುವ ಕೆಲಸ ನಡೆಯಬೇಕಾಗಿದೆ. ಆತ್ಮೋನ್ನತಿಯ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕಾರ್ಯ ಕ್ಷೇತ್ರದಲ್ಲಿ ನಡೆಯುತ್ತಿದೆ. ಸಾಧಕರಿಗೆ ಶಕ್ತಿ ತುಂಬುವ ಕೆಲಸ ಒಡಿಯೂರು ಕ್ಷೇತ್ರದ ಮೂಲಕ ನಡೆದುಕೊಂಡು ಬಂದಿದೆ ಎಂದು ತಿಳಿಸಿದರು.

ಭಗನ್ನಾಮ ಸಂಕೀರ್ತನೆಯಲ್ಲಿ ಭಾಗವಹಿಸಿದ ವಿವಿಧ ಭಜನಾ ಮಂಡಳಿಯವರನ್ನು ಗೌರವಿಸಲಾಯಿತು. ಸ್ವಸಹಾಯ ಸಂಘಗಳ ಲಾಭಾಂಶ ವಿತರಣೆ ಮಾಡಲಾಯಿತು. ಕ್ಷೇತ್ರದ ವಿವಿಧ ಕಾರ್ಯಕ್ರಗಳಿಗೆ ಸಹಕಾರ ನೀಡಿದ ದಾನಿಗಳನ್ನು ಗೌರವಿಸಲಾಯಿತು. ಸಾಧ್ವಿ ಮಾತಾನಂದಮಯಿ ದಿವ್ಯ ಸಾನಿಧ್ಯ ವಹಿಸಿದ್ದರು.

ಉದ್ಯಮಿಗಳಾದ ವಾಮಯ್ಯ ಬಿ. ಶೆಟ್ಟಿ, ದಾಮೋದರ ಶೆಟ್ಟಿ ನಮೀನ್ ಮುಂಬಯಿ, ಡಾ. ಅಧೀಪ್ ಶೆಟ್ಟಿ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ರೈ, ಒಡಿಯೂರು ಗ್ರಾಮ ವಿಕಾಸ ಯೋಜನೆಯ ನಿರ್ದೇಶಕ ಕಿರಣ್ ಯು. ಉಪಸ್ಥಿತರಿದ್ದರು. ಯಶವಂತ ವಿಟ್ಲ ಸ್ವಾಗತಿಸಿದರು. ಸಂತೋಷ್ ಭಂಡಾರಿ ವಂದಿಸಿದರು.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...