Tuesday, April 9, 2024

ವಿಧಾನಸಭೆ ಚುನಾವಣೆ ಹಿನ್ನಲೆ : ಕಡಬ ಠಾಣಾ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಪಥ ಸಂಚಲನ

ಕಡಬ: ಮುಂಬರುವ ವಿಧಾನಸಭಾ ಚುನಾವಣೆಯ ಮತದಾನವನ್ನು ಶಾಂತಿ ಸುವ್ಯವಸ್ಥೆ ನಡೆಸಲು ಜಿಲ್ಲಾಡಳಿತ ಮತ್ತು ರಾಜ್ಯ ಚುನಾವಣಾ ಅಯೋಗದ ನಿರ್ದೇಶನದಂತೆ ಕಡಬ ಠಾಣಾ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಪಥ ಸಂಚಲನ ನಡೆಯಿತು.

ಕಡಬ ಪಟ್ಟಣ ಸೇರಿದಂತೆ ಕೋಡಿಂಬಾಳ,ಕಲ್ಲುಗುಡ್ಡೆ ಗ್ರಾಮೀಣ ಭಾಗದ ಸೂಕ್ಷ್ಮ ಮತ್ತು ಅಥಿಸೂಕ್ಷ್ಮ ಪ್ರದೇಶಗಳ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ಸಾಗಿತು. ಕಡಬ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಹರೀಶ್ ನೇತೃತ್ವದಲ್ಲಿ ನಡೆದ ಪಥಸಂಚಲನದಲ್ಲಿ ಠಾಣಾ ಸಿಬ್ಬಂದಿಗಳು, ಕೇಂದ್ರ ಪ್ಯಾರಾ ಮಿಲಿಟರಿ ಪಡೆಯ ಸಿಬ್ಬಂದಿಗಳು ಭಾಗವಹಿಸಿದ್ದರು. ಇದೇ ವೇಳೆ ಸೈನಿಕರ ಪರವಾಗಿ ಜೈಯ ಘೋಷಗಳನ್ನು ಕೂಗಿದರು.

2023ರ ವಿಧಾನಸಭಾ ಚುನಾವಣೆ ಪ್ರಕ್ರಿಯೆನ್ನು ಶಾಂತಿ ಮತ್ತು ಸೌಹಾರ್ದತೆ ಮತ್ತು ನ್ಯಾಯ ನಿರ್ಬಿತಿಯಿಂದ ನಡೆಸುವ ಉದ್ದೇಶದಿಂದ ರಾಜ್ಯ ಚುನಾವಣಾ ಆಯೋಗದ ಸೂಚನೆಯಂತೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಸಾರ್ವಜನಿಕರು ಶಾಂತಿ ಧೈರ್ಯ, ನಿರ್ಬಿತಿಯಿಂದ ಯಿಂದ ಮತದಾನ ಮಾಡಬೇಕು. ಜೊತೆಗೆ ಯಾವುದೇ ಚುನಾವಣಾ ನೀತಿ ಸಹಿತ ಉಲ್ಲಂಘನೆಯ ಪ್ರಕರಣಗಳು ನಡೆದಂತೆ ಎಚ್ಚರಿಕೆ ವಹಿಸಬೇಕು.ಒಂದುವೇಳೆ ನೀತಿ ಸಹಿತ ಉಲ್ಲಂಘನೆ ಪ್ರಕರಣ ನಡೆದರೆ ಕೂಡಲೇ ಚುನಾವಣಾಧಿಕಾರಿಗಳ ಗಮನಕ್ಕೆ ತಂದು ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿ ಕೊಡುವಂತೆ ಮನವಿ ಎಸ್.ಐ ಹರೀಶ್ ಮಾಡಿದರು.

More from the blog

ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷವದಿ ಜಾತ್ರೆಯು ಊರ ಪರವೂರ ಭಕ್ತದಿಗಳ ಸೇರಿಗೆಯಲ್ಲಿ ವಿಜೃಂಭಣೆಯಿಂದ ಜರಗಿತು. ದಿನಾಂಕ 7-4-2024 ರ ರಾತ್ರಿ ಗಿಳಿಕಿಂಜ ಬಂಡಾರ ಮನೆಯಿಂದ ದೈವದ ಬಂಡಾರ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

ದಕ್ಷಿಣ ಕನ್ನಡ: ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಸ್‌ : 9 ಅಭ್ಯರ್ಥಿಗಳು ಕಣದಲ್ಲಿ

ಮಂಗಳೂರು: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದು, ಒಟ್ಟು ಒಂಬತ್ತು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ 11 ಮಂದಿಯ ಪೈಕಿ 10 ಅಭ್ಯರ್ಥಿಗಳ...

ಪ್ರಕೃತಿಯಲ್ಲಿ ಒಂದಿಲ್ಲೊಂದು ವಿಸ್ಮಯ : ಈ ರೀತಿಯ ಕಿತ್ತಾಳೆ ಹಣ್ಣು ನೋಡಿದ್ದೀರಾ…

ಬಂಟ್ವಾಳ: ಪಕೃತಿಯಲ್ಲಿ ಆಗೊಮ್ಮೆ ಈಗೊಮ್ಮೆ ವಿಚಿತ್ರ ಸಂಗತಿಗಳು ಕಾಣಸಿಗುತ್ತವೆ. ಹಾಗೇಯೆ ಇಲ್ಲೊಂದು ಕಿತ್ತಾಳೆ ಹಣ್ಣು ತನ್ನ ರೂಪದಲ್ಲಿ ಸ್ವಲ್ಪ ಮಟ್ಟಿಗೆ ವಿಚಿತ್ರ ಕಂಡಿದೆ. ಮಾಮೂಲಿಯಾಗಿ ಕಿತ್ತಾಳೆ ಬಣ್ಣ ಮತ್ತು ಆಕಾರದಲ್ಲಿ ಒಂದೇ ಆಗಿರುತ್ತದೆ. ಆದರೆ...