Saturday, April 6, 2024

ಫಾರೆಸ್ಟ್ ಡಿಪಾರ್ಟ್​ಮೆಂಟ್​​ನಲ್ಲಿ ಕೆಲಸ ಸಿಗಬೇಕಾ…? ಇಂದೇ ಅರ್ಜಿ ಸಲ್ಲಿಸಿ

ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಅನೇಕ ಹುದ್ದೆಗಳು ಖಾಲಿ ಇವೆ. ಕೊಡಗು, ಚಾಮರಾಜನಗರ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಟ್ಟು 19 ಆನೆ ಕಾವಾಡಿಗ ಹುದ್ದೆಗಳು ಖಾಲಿ ಇವೆ. ಅಭ್ಯರ್ಥಿಗಳು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಬೇಕು. ಈ ಕುರಿತಾಗಿ ಇಲ್ಲಿದೆ ಮಾಹಿತಿ.

ಹುದ್ದೆಯ ಮಾಹಿತಿ:
ಕೊಡಗು- 4
ಚಾಮರಾಜನಗರ- 6
ಮೈಸೂರು – 5
ಶಿವಮೊಗ್ಗ- 4

  • ಸಂಸ್ಥೆ                             —-ಕರ್ನಾಟಕ ಅರಣ್ಯ ಇಲಾಖೆ
  • ಹುದ್ದೆ                              —-ಆನೆ ಕಾವಾಡಿಗ
  • ಒಟ್ಟು ಹುದ್ದೆ                        — 19
  • ವಿದ್ಯಾರ್ಹತೆ                       —-ಕನ್ನಡ ಭಾಷೆ ಮಾತನಾಡಲು ಬರಬೇಕು
  • ವೇತನಮಾಸಿಕ                    —-18,600-32,600
  • ಉದ್ಯೋಗದ ಸ್ಥಳ                  —-ಕರ್ನಾಟಕ
ವಿದ್ಯಾರ್ಹತೆ:
ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಮತ್ತು ಅರ್ಥ ಮಾಡಿಕೊಳ್ಳಲು ಬಂದರೆ ಸಾಕು. ಅಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು.
ಅರ್ಹತೆಗಳು
– ಕನ್ನಡ ಭಾಷೆ ಮಾತನಾಡಲು ಮತ್ತು ಅರ್ಥೈಸಿಕೊಳ್ಳಲು ಶಕ್ತನಾಗಿರಬೇಕು.
– ಆನೆ ನಿರ್ವಹಣೆಯಲ್ಲಿ ಅನುಭವ ಹೊಂದಿರುವುದು ಕಡ್ಡಾಯವಾಗಿರುತ್ತದೆ.

ವಯೋಮಿತಿ:

ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. 2ಎ, 2ಬಿ, 3ಎ, 3ಬಿ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ, SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವೇತನ:
ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 18,600-32,600 ಸಂಬಳ ಕೊಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ
ಕೆಳಗೆ ನೀಡಲಾದ ಅರ್ಜಿ ನಮೂನೆಯನ್ನು ಪಡೆದು ಬೆರಳಚ್ಚು /ಕಂಪ್ಯೂಟರ್ ಪ್ರಿಂಟ್ ಮಾಡಿಸಿ, ಭರ್ತಿ ಮಾಡಿದ ಅರ್ಜಿಯನ್ನು ಕೆಳಗಿನ ವಿಳಾಸಕ್ಕೆ ಸಲ್ಲಿಸುವುದು.

ಅರ್ಜಿಗಳನ್ನು ಸಲ್ಲಿಸಬೇಕಾದ ವಿಳಾಸ
ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ, ಕೊಡಗು/ ಚಾಮರಾಜನಗರ/ ಮೈಸೂರು/ ಶಿವಮೊಗ್ಗ ಅರಣ್ಯ ವೃತ್ತ (ಆಯಾ ಅರಣ್ಯ ವೃತ್ತಕ್ಕೆ ಅರ್ಜಿ) ಕ್ಕೆ ಅರ್ಜಿ ಸಲ್ಲಿಸುವುದು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 29-04-2023
ಅಭ್ಯರ್ಥಿಗಳ ಸಂದರ್ಶನ ದಿನಾಂಕ : ಮೇ 16, 17, 2023
ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ದಿನಾಂಕ : 29-05-2023
ಅಂತಿಮ ಆಯ್ಕೆಪಟ್ಟಿ ಪ್ರಕಟಣೆ ದಿನಾಂಕ : 01-06-2023
ನೇಮಕಾತಿ ಆದೇಶ ನೀಡುವುದು : 01-07-2023

More from the blog

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ಮಿತಿ ಮೀರಿದ ತಾಪಮಾನ : ಖಡಕ್​ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲು ಹೆಚ್ಚಳವಾಗುತ್ತಿದ್ದು ಮುಂದಿನ 14 ದಿನಗಳ ಕಾಲ ಬಿಸಿಗಾಳಿ ಬೀಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್​...

ಮನೆಯ ಮಹಡಿಯಿಂದ ಬಿದ್ದು ಬಾಲಕ ಸಾವು

ಬಂಟ್ವಾಳ: ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಎ.‌ ೧ರ ಮುಂಜಾನೆ ನಡೆದಿದೆ. ಬಂಟ್ವಾಳ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್(೧೫) ಮೃತಪಟ್ಟ ಬಾಲಕ. ಆತ ಮನೆಯಲ್ಲಿ ದೊಡ್ಡಮ್ಮನ...

ಮಾಂಸ ಪ್ರಿಯರಿಗೆ ಬೆಲೆ ಏರಿಕೆ ಶಾಕ್.. ಕೋಳಿ ಮಾಂಸದ ದರ ಏರಿಕೆ

ಮಂಗಳೂರು: ಕೋಳಿಮಾಂಸ, ಮೀನಿನ ದರ ಏರುಗತಿ ಯಲ್ಲಿ ಸಾಗುತ್ತಿದ್ದು ಮಾಂಸಾಹಾರ ಪ್ರಿಯರ ಜೇಬಿಗೂ ಕತ್ತರಿ ಬೀಳುವಂತಾಗಿದೆ. ಪ್ರಸ್ತುತ ಕೋಳಿಮಾಂಸಕ್ಕೆ (ವಿದ್‌ ಸ್ಕಿನ್‌) ಕೆ.ಜಿ.ಗೆ ಬ್ರಾಯ್ಲರ್‌ ಕೆಲವು ಕಡೆ 235-240 ರೂ., ಟೈಸನ್‌ 270 ರೂ....