Friday, April 5, 2024

ರಸ್ತೆ ಬದಿ ಮಲಗಿದ್ದ ವೃದ್ಧನ ಮೇಲೆ ಹರಿದ ಲಾರಿ

ನೆಲ್ಯಾಡಿ: ರಸ್ತೆ ಬದಿ ಮಲಗಿದ್ದ ವೃದ್ಧರೋರ್ವರ ಮೇಲೆ ಲಾರಿ ಹರಿದು ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಮುಂಜಾನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಗುಂಡ್ಯದಲ್ಲಿ ನಡೆದಿದೆ.

ಮೂಲತ: ಕೇರಳ ನಿವಾಸಿ ಪೊನ್ನಪ್ಪನ್ ಮೃತಪಟ್ಟ ದುರ್ದೈವಿ.

ಇವರು ಕಳೆದ ಹಲವು ವರ್ಷಗಳಿಂದ ಗುಂಡ್ಯ ಪರಿಸರದ ಅಂಗಡಿಗಳಲ್ಲಿ ಕ್ಲೀನಿಂಗ್ ಸೇರಿದಂತೆ ಸಣ್ಣಪುಟ್ಟ ಕೆಲಸ ನಿರ್ವಹಿಸಿಕೊಂಡು ಅಂಗಡಿ ಮುಂದೆ, ರಸ್ತೆ ಫುಟ್‌ಪಾತ್‌ಗಳಲ್ಲಿ ಮಲಗುತ್ತಿದ್ದರು. ಎ.1ರಂದು ರಾತ್ರಿ ಗುಂಡ್ಯ ಚೆಕ್‌ಪೋಸ್ಟ್ ಬಳಿ ರಸ್ತೆ ಪಕ್ಕ ಮಲಗಿದ್ದ ಪೊನ್ನಪ್ಪನ್‌ರವರ ಕಾಲಿನ ಮೇಲೆ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿಯೊಂದು ಹಾದುಹೋಗಿ ಪರಾರಿಯಾಗಿದೆ.

ಇನ್ನು ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ಪೊನ್ನಪ್ಪನ್‌ರನ್ನು ಸ್ಥಳೀಯರು ಆಸ್ಪತ್ರೆಗೆ ಕರೆತಂದರಾದರೂ ಆ ವೇಳೆಗೆ ಆತ ಮೃತಪಟ್ಟಿದ್ದ ಎಂದು ವರದಿಯಾಗಿದೆ.

ಕೂಡಲೇ ಸ್ಥಳೀಯರು ಈ ಬಗ್ಗೆ ನೆಲ್ಯಾಡಿ ಹೊರಠಾಣೆ ಪೊಲೀಸರಿಗೆ ಮಾಹಿತಿ ನೀಡಿದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಲಾರಿಯನ್ನು ಉಪ್ಪಿನಂಗಡಿಯಲ್ಲಿ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...