Wednesday, April 17, 2024

ದ್ವಿಚಕ್ರ ವಾಹನ ಕಳವು ಪ್ರಕರಣ ; ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, ನಾಲ್ವರ ಬಂಧನ

ಮಂಗಳೂರು: ಮಂಗಳೂರು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರು ಬೈಕ್ ಕಳ್ಳರನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಪಣಂಬೂರು, ಕಸಬಾ ಬೆಂಗರೆ ನಿವಾಸಿಯಾದ ಮೊಹಮ್ಮದ್ ಸಿನಾನ್, ಕಸಬಾ ಬೆಂಗರೆ ನಿವಾಸಿ ಮೊಹಮ್ಮದ್ ಸಾಹಿಲ್, ಉಳ್ಳಾಲ ನಿವಾಸಿಯಾದ ಫೈಜಲ್ ಹಾಗೂ ಪಡುಬಿದ್ರಿ ಕಂಚಿನಡ್ಕ ನಿವಾಸಿ ಮೊಹಮ್ಮದ್ ಸಾಹಿಲ್ ಎನ್ನಲಾಗಿದೆ.

ಆರೋಪಿಗಳು ಮಂಗಳೂರು ನಗರದ ಗೂಡ್ಸ್ ಶೆಡ್ ಪರಿಸರದಲ್ಲಿ ನಂಬರ್ ಪ್ಲೇಟ್ ಇಲ್ಲದ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು ಎನ್ನಲಾಗಿದ್ದು, ಈ ಕುರಿತು ಮಂಗಳೂರು ಸಿಸಿಬಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿಎ ಹೆಗಡೆ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ 2,15,000 ಮೌಲ್ಯದ 6 ಬೈಕ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಆರೋಪಿಗಳು ಹಾಗೂ ವಶಪಡಿಸಿಕೊಂಡ ವಾಹನಗಳನ್ನು ಮುಂದಿನ ಕ್ರಮಕ್ಕೆ ಉಳ್ಳಾಲ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿಯವರಾದ ಪಿ ಎ ಹೆಗ್ಡೆ, ಇನ್ಸ್ ಫೆಕ್ಟರ್ ಶ್ಯಾಮ್ ಸುಂದರ್ ಹೆಚ್. ಎಂ, ಪಿಎಸೈ ಸುದೀಪ್, ಶರಣಪ್ಪ ಭಂಡಾರಿ, ಎಎಸೈ ಮೋಹನ್ ಕೆ.ವಿ ಹಾಗೂ ಸಿಸಿಬಿ ಸಿಬಂದಿಗಳು ಪಾಲ್ಗೊಂಡಿದ್ದರು.

More from the blog

ಜಿಲ್ಲೆಯಲ್ಲಿ ಜೆ.ಡಿ.ಎಸ್.ಪಕ್ಷ ನಿಷ್ಕ್ರಿಯವಾಗಲು ಕಾರಣರಾದ ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡರು ರಾಜೀನಾಮೆ ನೀಡುವಂತೆ ಒತ್ತಾಯ

ಜೆ.ಡಿ.ಎಸ್.ಪಕ್ಷ ಜಿಲ್ಲೆಯಲ್ಲಿ ನಿಷ್ಕ್ರಿಯವಾಗಲು ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡ ಅವರೇ ಕಾರಣರಾಗಿದ್ದು, ನೈತಿಕ ಹೊಣೆ ಹೊತ್ತು ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಮುಖಂಡ ಅಬುಬಕ್ಕರ್ ಅಮ್ಮಂಜೆ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಅಧ್ಯಕ್ಷ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ವೈದ್ಯರ ಎಡವಟ್ಟು : ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...