Saturday, April 13, 2024

ಕಾರಾಗೃಹದಲ್ಲಿ ಬೀಡಿ, ಸಿಗರೇಟ್, ತಂಬಾಕು ಮಾತ್ರ ಸಿಕ್ಕಿದೆ- ಕಮಿಷನರ್

ಮಂಗಳೂರು: ಮಂಗಳೂರಿನಲ್ಲಿ ಜಿಲ್ಲಾ ಕಾರಾಗೃಹದಲ್ಲಿ ಪೊಲೀಸರು ನಡೆಸಿದ ತಪಾಸಣೆ ವೇಳೆ ಬೀಡಿ, ಸಿಗರೇಟು, ತಂಬಾಕು ಮಾತ್ರ ಸಿಕ್ಕಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ತಿಳಿಸಿದ್ದಾರೆ.

ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ರವಿವಾರ ಭಾರೀ ಸಂಖ್ಯೆಯ ಪೊಲೀಸರು ದಿಢೀರ್ ತಪಾಸಣೆ ನಡೆಸಲಾಗಿದೆ.

ತಪಾಸಣೆಯ ಅನಂತರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಇದೊಂದು ಮಾಮೂಲಿ ತಪಾಸಣೆ. ಅಧಿಕಾರಿ, ಸಿಬಂದಿ ಸೇರಿದಂತೆ ಸುಮಾರು 300 ಮಂದಿ ಪೊಲೀಸರು ಪಾಲ್ಗೊಂಡಿದ್ದರು. ಮಾದಕ ದ್ರವ್ಯ, ಮೊಬೈಲ್ ಗಳು ಸಿಕ್ಕಿಲ್ಲ. ಸುಮಾರು ಒಂದೂವರೆ ತಾಸು ತಪಾಸಣೆ ನಡೆಸಲಾಗಿದೆ. ಗಾಂಜಾ ಮತ್ತಿತರ ವಸ್ತುಗಳ ಸಾಗಾಟದ ಬಗ್ಗೆ ಕಾರಾಗೃಹದಲ್ಲಿ ನಿರಂತರವಾಗಿ ಸಮರ್ಪಕವಾಗಿ ನಡೆಯುತ್ತಿದೆ. ಈ ಬಗ್ಗೆ ಕಾರಾಗೃಹ ಅಧೀಕ್ಷಕರೊಂದಿಗೂ ಮಾತನಾಡಿದ್ದೇನೆ. ವಿಚಾರಣಾಧೀನ ಕೈದಿಗಳು ಮೊಬೈಲ್ ಕರೆ ಮಾಡುತ್ತಿದ್ದಾರೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಆ ರೀತಿಯ ಚಟುವಟಿಕೆ ಗೊತ್ತಾಗಿಲ್ಲ ಎಂದು ತಿಳಿಸಿದರು.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...