Saturday, April 6, 2024

ಮಣ್ಣು ಕುಸಿದು ಬಿದ್ದು ಜೆಸಿಬಿ ಚಾಲಕ ಮೃತ್ಯು

ಮಂಗಳೂರು: ಜೆಸಿಬಿಯಿಂದ ಮಣ್ಣು ಅಗೆತದ ವೇಳೆ ಮಣ್ಣು ಕುಸಿದು ಬಿದ್ದು ಜೆಸಿಬಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗಂಜಿಮಠ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಳಲಿ ನಾಡಾಜೆಯಲ್ಲಿ ಸಂಭವಿಸಿದೆ.

ಜೆಸಿಬಿಯ ಚಾಲಕ ಝಾರ್ಖಂಡ್‌ ಕೊಸಾರ್‌ ಅನ್ಸಾರಿ ಮೃತ ದುರ್ದೈವಿ ಎಂದು ತಿಳಿದುಬಂದಿದೆ.

ಇನ್ನು ಮಣ್ಣು ಅಗೆತದ ವೇಳೆ ನಿಂತಿದ್ದ ಟಿಪ್ಪರ್‌ ಹಿಂಬದಿಗೆ ಹಾಗೂ ಜೆಸಿಬಿಯ ಮೇಲೆ ಮಣ್ಣು ಕುಸಿದು ಬಿದ್ದು ಅದರಲ್ಲಿ ಜೆಸಿಬಿಯ ಚಾಲಕ ಸಿಲುಕಿಕೊಂಡಿದ್ದ ಎನ್ನಲಾಗಿದೆ. ಕೂಡಲೇ ಸ್ಥಳೀಯರು ಹಾಗೂ ಎರಡು ಜೆಸಿಬಿ ಸಹಾಯದಿಂದ ಮಣ್ಣು ತೆಗೆಯಲಾಯಿತಾದರೂ, ಅದಾಗಲೇ ಚಾಲಕ ಮೃತಪಟ್ಟಿದ್ದರು ಎನ್ನಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳ, ಬಜಪೆ ಪೊಲೀಸರು ಭೇಟಿ ನೀಡಿದ್ದಾರೆ.

More from the blog

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ಕಡಬ: ಚೇರು ಪ್ರದೇಶದ ಮನೆಗೆ ಶಂಕಿತರ ಭೇಟಿ : ಊಟ ಮಾಡಿ, ಸಾಮಗ್ರಿ ಪಡೆದು ತೆರಳಿದ ಶಂಕಿತರು

ಸುಬ್ರಹ್ಮಣ್ಯ: ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ಮನೆಯೊಂದಕ್ಕೆ ಗುರುವಾರ ರಾತ್ರಿ ವೇಳೆ ಶಂಕಿತರ ತಂಡ ಆಗಮಿಸಿ ಊಟ, ಮಾಡಿ ದಿನಸಿ ಸಾಮಾಗ್ರಿಗಳನ್ನು ಪಡೆದು ತೆರಳಿರುವ ವಿಷಯ ಶುಕ್ರವಾರ ಸಂಜೆ ವೇಳೆಗೆ ಬೆಳಕಿಗೆ ಬಂದಿದೆ. ತಾಲೂಕಿನ...