Thursday, April 11, 2024

ಮಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಆಸಕ್ತರಿಗೆ ಸುವರ್ಣಾವಕಾಶ….ಡಿಗ್ರಿ ಪಾಸಾಗಿದ್ರೆ ಸಾಕು, ಇಂದೇ ಅರ್ಜಿ ಸಲ್ಲಿಸಿ

ಮಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಗುಡ್​ ನ್ಯೂಸ್ ಇದೆ. ನವ ಮಂಗಳೂರು ಬಂದರು ಟ್ರಸ್ಟ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಆಸಕ್ತರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅರ್ಜಿ ಹಾಕಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ ಇಲ್ಲಿದೆ…
  • ಸಂಸ್ಥೆ                            –   ನವ ಮಂಗಳೂರು ಬಂದರು ಟ್ರಸ್ಟ್
  • ಹುದ್ದೆ                             –  ಸೀನಿಯರ್ ಡೆಪ್ಯುಟಿ ಟ್ರಾಫಿಕ್ ಮ್ಯಾನೇಜರ್
  • ಒಟ್ಟು ಹುದ್ದೆ                      –  1
  • ವಿದ್ಯಾರ್ಹತೆ                      –  ಪದವಿ
  • ಉದ್ಯೋಗದ ಸ್ಥಳ                –  ಮಂಗಳೂರು
ವಿದ್ಯಾರ್ಹತೆ:
ನವ ಮಂಗಳೂರು ಬಂದರು ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ನವ ಮಂಗಳೂರು ಬಂದರು ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 42 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ 80,000- 2,20,000
ಉದ್ಯೋಗದ ಸ್ಥಳ:
ಮಂಗಳೂರು
ಆಯ್ಕೆ ಪಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ನವ ಮಂಗಳೂರು ಬಂದರು ಪ್ರಾಧಿಕಾರ
ಪಣಂಬೂರು
ಮಂಗಳೂರು
ಕರ್ನಾಟಕ-575010
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02/03/2023
ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 9, 2023
ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 24, 2023

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...