Saturday, April 6, 2024

ಮೋದಿ ಟೈಗರ್ ಸಫಾರಿ : ತಮಿಳನಾಡು ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ, ಕಬ್ಬು ತಿನ್ನಿಸಿ ಸಂತಸ ಪಟ್ಟ ಮೋದಿ

ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಅವರು ಹುಲಿ ಯೋಜನೆಯ 50ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಬಂಡೀಪುರಕ್ಕೆ ಆಗಮಿಸಿದ್ದಾರೆ.

1973ರಲ್ಲಿ ಹುಲಿಗಳ ಸಂತತಿಯ ಸಂರಕ್ಷಣೆಗಾಗಿ ಪ್ರಾಜೆಕ್ಟ್ ಟೈಗರ್ ಘೋಷಣೆ ಮಾಡಲಾಗಿತ್ತು. ಇದೀಗ ಪ್ರಾಜೆಕ್ಟ್ ಟೈಗರ್​​​​​ಗೆ 50 ವರ್ಷ ತುಂಬಿದೆ. ಇದರ ಸವಿನೆನಪಿಗಾಗಿ ಪ್ರಧಾನಿ ಮೋದಿ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಿದ್ದಾರೆ.

ಬಂಡೀಪುರ ಕ್ಯಾಂಪಸ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಸಫಾರಿ ನಡೆಸಿದ್ದಾರೆ. ವಿಶೇಷ ಬಟ್ಟೆಯನ್ನು ಧರಿಸಿ ಸಫಾರಿ ನಡೆಸುತ್ತಿರುವ ನರೇಂದ್ರ ಮೋದಿ ಬಂಡೀಪುರ ಅರಣ್ಯದಲ್ಲಿ ಫೋಟೋಶೂಟ್ ಕೂಡ ನಡೆಸಿದ್ದಾರೆ.

ಬಂಡೀಪುರದ ಬಳಿಕ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ ಮದುಮಲೈ ಫಾರೆಸ್ಟ್‌ಗೆ ಪ್ರಯಾಣ ಬೆಳೆಸಿದ್ದಾರೆ. ಏಷ್ಯಾದ ಪ್ರಥಮ ಆನೆ ಕ್ಯಾಂಪ್ ತೆಪ್ಪಕಾಡುಗೆ ಭೇಟಿ ನೀಡಲಿದ್ದಾರೆ. ತೆಪ್ಪಕಾಡುವಿನಲ್ಲಿ ಎಲಿಫ್ಯಾಂಟ್ ವಿಸ್ಪರರ್ಸ್ ಖ್ಯಾತಿಯ ಬೊಮ್ಮ ಮತ್ತು ಬೆಳ್ಳಿ ದಂಪತಿಯನ್ನು ಭೇಟಿ ಮಾಡಿ ಬೆಳ್ಳಿ-ಬೊಮ್ಮ​ ದಂಪತಿಯನ್ನು ಸನ್ಮಾನಿಸಿದರು. ಈ ವೇಳೆ ಪ್ರಧಾನಿ ಮೋದಿ ಆನೆಗಳಿಗೆ ಕಬ್ಬು ತಿನ್ನಿಸಿ ಸಂತಸ ಪಟ್ಟರು, ಹಾಗೇ ಫೋಟೋ ಕ್ಲಿಕ್ಕಿಸಿಕೊಂಡರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...