Saturday, April 6, 2024

ದಾಖಲೆಯಿಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ 10 ಲಕ್ಷ ರೂ. ವಶ

ಪುಂಜಾಲಕಟ್ಟೆ: ದಾಖಲೆ ಇಲ್ಲದೆ 10 ಲಕ್ಷ ರೂ. ಸಾಗಾಟ ಮಾಡುತ್ತಿದ್ದ ಎಟಿಎಂ ವಾಹನವನ್ನು ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎ.10 ರಂದು ವಶಕ್ಕೆ ಪಡೆದಿದ್ದಾರೆ.

ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ತವ್ಯ ನಿರತರಾಗಿದ್ದ ಫ್ಲೈಯಿಂಗ್ ಸ್ಕ್ವಾಡ್ ಕಾರ್ತಿ ಮಧುಬಾಬು ಅವರ ತಂಡ ಕುಕ್ಕಳ ಗ್ರಾಮದ ಬಸವೇಶ್ವರ ದೇವಸ್ಥಾನದ ಬಳಿ ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಎಟಿಎಂ ವಾಹನದಲ್ಲಿ ಸಮರ್ಪಕ ದಾಖಲೆಗಳಿಲ್ಲದೆ ಅವಧಿ ಮೀರಿ 10 ಲಕ್ಷ ರೂ. ಮೊತ್ತವನ್ನು ರಾತ್ರಿ 10 ಗಂಟೆ ಸುಮಾರಿಗೆ ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ಈ ಕುರಿತು ತಕ್ಷಣವೇ ಹಣ ಹಾಗೂ ವಾಹನವನ್ನು ವಶಕ್ಕೆ ಪಡೆದು ಮುಂದಿನ ಕ್ರಮಕ್ಕೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ..

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...