ಪುತ್ತೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಈಗಾಗಲೇ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಇನ್ನು ಹೆಸರು ಘೋಷಣೆಯಾಗಿಲ್ಲ. ಆದರೆ ಇದೀಗ ಪುತ್ತೂರು ಕ್ಷೇತ್ರದ ಟಿಕೆಟ್ ಹಂಚಿಕೆ ಫೈನಲ್ ಆಗಿದೆ ಎಂದು ವರದಿಯಾಗಿದೆ.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರಿನಿಂದ ಕಾಂಗ್ರೇಸ್‌ನ 13 ಕ್ಕೂ ಹೆಚ್ಚು ಮಂದಿ ಟಿಕೆಟ್ ಆಕಾಂಕ್ಷಿಗಳು ಭಾರೀ ಪೈಪೋಟಿ ನಡೆಸಿದ್ದು, ಪುತ್ತೂರು ಕ್ಷೇತ್ರದಿಂದ ಅಶೋಕ್ ಕುಮಾರ್ ರೈ ಮತ್ತು ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಅವರು ಹೆಸರು ಮುಂಚೂಣಿಯಲ್ಲಿತ್ತು. ಇದೀಗ ತೀವ್ರ ಕುತೂಹಲ ಹೆಚ್ಚಿಸಿದ ಪುತ್ತೂರು ಕ್ಷೇತ್ರದಿಂದ ಕಾಂಗ್ರೇಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಅವರು ಆಯ್ಕೆಯಾಗಿದ್ದಾರೆ.
ಕಳೆದ ಬಾರಿಯ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯಿಂದ ಅಶೋಕ್ ಕುಮಾರ್ ರೈ ಅಂತಿಮ ಹಂತದಲ್ಲಿ ಟಿಕೆಟ್ ಕೈ ತಪ್ಪಿತ್ತು. ಇತ್ತೀಚಿನ ದಿನಗಳಲ್ಲಿ ಅವರು ಬಿಜೆಪಿ ತೊರೆದು ಕೈ ಪಾಳಯ ಸೇರಿದ್ದರು.