Tuesday, April 16, 2024

ಪುತ್ತೂರು ಮಾಯಿ ದೆ ದೇವುಸ್ ಚರ್ಚಿನಲ್ಲಿ ಯೇಸುವಿನ ಕೊನೆಯ ಭೋಜನದ ನೆನಪಿನ ಪವಿತ್ರ ಗುರುವಾರ ಆಚರಣೆ

ಪ್ರಪಂಚದಾದ್ಯಂತದ ಕ್ರಿಶ್ಚಿಯನ್ನರು ಈ ವಾರವನ್ನು ಪವಿತ್ರ ವಾರವನ್ನಾಗಿ ಆಚರಿಸುತ್ತಿದ್ದಾರೆ, ಏಪ್ರಿಲ್ 2 ರಂದು ಈಸ್ಟರ್ ಮೊದಲು ಗರಿಗಳ ಭಾನುವಾರದಿಂದ ಪ್ರಾರಂಭವಾಗುತ್ತದೆ. ಏಪ್ರಿಲ್ 6 ರಂದು ಅವರು ಶುಭ ಶುಕ್ರವಾರ ಮತ್ತು ಈಸ್ಟರ್ ಮೊದಲು ಬರುವ ಪವಿತ್ರ ಗುರುವಾರವನ್ನು ಆಚರಿಸುತ್ತಾರೆ.

ಯೇಸು ಕ್ರಿಸ್ತನು ತನ್ನ ಶಿಷ್ಯರೊಂದಿಗೆ ಕೊನೆಯ ಭೋಜನವನ್ನು ಮಾಡಿದ ನೆನಪಿಗಾಗಿ ಈ ದಿನವನ್ನು ಆಚರಿಸಲಾಗುತ್ತದೆ.

ಯೇಸು ತನ್ನ ಶಿಷ್ಯರೊಂದಿಗೆ ಊಟ ಮಾಡಿದ ಕೊನೆಯ ಭೋಜನವನ್ನು ಈ ದಿನವು ಗುರುತಿಸುತ್ತದೆ. ನಾವೆಲ್ಲರೂ ಸಮಾನರು ಎಂಬುದರ ಸಂಕೇತವಾಗಿ ನಾವು ವಿನಮ್ರರಾಗಿರಬೇಕು ಮತ್ತು ಪರಸ್ಪರರ ಪಾದಗಳನ್ನು ತೊಳೆಯುದರ ಮೂಲಕ ಸೇವಾ ಮನೋಭಾವನೆಗೆ ಸಿದ್ಧರಾಗಿರಬೇಕು ಎಂದು ಯೇಸು ತನ್ನ ಶಿಷ್ಯರಿಗೆ ಕಲಿಸಿದ ಪಾಠವನ್ನು ಸಹ ಇದು ನೆನಪಿಸುತ್ತದೆ.

ಈ ಸಂಪ್ರದಾಯವನ್ನು ಮುಂದುವರೆಸುತ್ತಾ, ಪ್ರಪಂಚಾದ್ಯಂತ ಎಲ್ಲಾ ಚರ್ಚುಗಳಲ್ಲಿ ಪಶ್ಚಾತ್ತಾಪದ ವಿಧಿ, ಪಾದ ಸ್ನಾನದ ವಿಧಿ, ಪರಮ ಪ್ರಸಾದ ವಿಧಿ ಹಾಗೂ ಪರಮ ಪ್ರಸಾದ ಪ್ರತಿಷ್ಠಾಪನೆ ಮತ್ತು ಆರಾಧನೆ ವಿಧಿಗಳನ್ನು ಆಚರಿಸಲಾಗುತ್ತದೆ.

ಹಾಗೇನೇ ಪುತ್ತೂರಿನ ಹೃದಯ ಭಾಗದಲ್ಲಿ ಇರುವ ಮಾಯಿ ದೆ ದೇವುಸ್ ಚರ್ಚಿನಲ್ಲಿ ಪವಿತ್ರ ಗುರುವಾರವನ್ನು ಆಚರಿಸಲಾಯಿತು. ಪ್ರದಾನ ಧರ್ಮಗುರುಗಳಾಗಿ ವಂದನೀಯ ಸ್ಟ್ಯಾನಿ ಪಿಂಟೊರವರು ಬಲಿ ಪೂಜೆಯನ್ನು ನೆರವೇರಿಸಿದರು. ಪ್ರಭು ಕ್ರಿಸ್ತರ ಪ್ರತಿನಿಧಿಯಾಗಿ, ಅತೀ ವಂದನೀಯ ಲಾರೆನ್ಸ್ ಮಸ್ಕರೇನ್ಹಸ್ ರವರು ಧರ್ಮ ಕೇಂದ್ರದ ವಿವಿಧ ವರ್ಗಗಳಿಂದ ಆರಿಸಲ್ಪಟ್ಟ ಹನ್ನೆರಡು ಮಂದಿಯ ಪಾದಗಳನ್ನು ತೊಳೆಯುದರ ಮೂಲಕ ಪರಸೇವೆ, ಪರಸ್ನೇಹ, ದೀನತೆಯ ಮಹತ್ವವನ್ನು ತಿಳಿಸಿದರು. ತಮ್ಮ ಪ್ರವಚನದಲ್ಲಿ ಬಲಿಪೂಜೆಯ ಮಹತ್ವವನ್ನು ಹಾಗೂ ಯಾಜಕಿ ದೀಕ್ಷೆಯ ದಿನವಾದ ಇಂದು ಅದರ ಮಹತ್ವವನ್ನು ಸಾರಿ ಹೇಳಿದರು,

ಸಹಾಯಕ ಧರ್ಮಗುರುಗಳಾದ ವಂದನೀಯ ಕೆವಿನ್ ಲಾರೆನ್ಸ್ ಡಿಸೋಜಾ ರವರು ಪರಮ ಪ್ರಸಾದದ ಪ್ರತಿಷ್ಠಾಪನೆ ಮತ್ತು ಆರಾಧನೆಯನ್ನು ನಡೆಸಿಕೊಟ್ಟರು. ವಂದನಿಯ ಅಶೋಕ್ ರಾಯನ್ ಕ್ರಾಸ್ತಾ ರವರು ವಿವಿಧ ವಿಧಿವಿಧಾನಗಳಲ್ಲಿ ಪಾಲ್ಗೊಂಡರು.

ಯೇಸುವಿನ ಕೊನೆಯ ಭೋಜನದ ಸಂಕೇತವಾಗಿ ನೆರೆದಿದ್ದ ಎಲ್ಲಾ ಭಕ್ತಾದಿಗಳಿಗೆ ರೊಟ್ಟಿಯನ್ನು ವಿತರಿಸಲಾಯಿತು.

More from the blog

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ

ವಿಟ್ಲ - ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ ನೀರುಮಜಲು ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಕಳೆದ...

ಕೆನರಾ ರೊಬೆಕೋ ಸಂಸ್ಥೆಯಿಂದ ಕೊಯಿಲ ಶಾಲಾ ವಿದ್ಯಾರ್ಥಿಗಳಿಗೆ ಬೈಸಿಕಲ್ ಕೊಡುಗೆ

ಬಂಟ್ವಾಳ: ತಾಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಕೆನರಾ ರೊಬೆಕೋ ಸಂಸ್ಥೆಯ ವತಿಯಿಂದ 45 ಬೈಸಿಕಲ್ ಗಳನ್ನು ವಿತರಿಸಲಾಯಿತು. ಕೆನರಾ ರೊಬೆಕೋ ಸಂಸ್ಥೆಯ ಮಂಗಳೂರು ವಿಭಾಗದ ವ್ಯವಸ್ಥಾಪಕರಾದ ಮುರಳೀಧರ ಶೆಣೈ, ಅಧಿಕಾರಿ ರಾಜೇಶ್...

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ- ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ...