Sunday, April 21, 2024

ಎ.15 ರಂದು ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ನಾಮಪತ್ರ ಸಲ್ಲಿಕೆ.. ಪೊಳಲಿಯಿಂದ ಅಪಾರ ಕಾರ್ಯಕರ್ತರ ಜೊತೆಗೆ ಪಾದಯಾತ್ರೆಯಲ್ಲಿ ಬಂದು ನಾಮಪತ್ರ ಸಲ್ಲಿಕೆ: ರಾಜೇಶ್ ನಾಯ್ಕ್

ಬಂಟ್ವಾಳ: ಎ.15 ರಂದು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿ ಸನ್ನಿಧಾನದಲ್ಲಿ ಪೂಜೆ ಸಲ್ಲಿಸಿ ಬಳಿಕ ಪಾದಯಾತ್ರೆಯ ಮೂಲಕ ಬಿಸಿರೋಡು ವರೆಗೆ ಅಪಾರ ಬೆಂಬಲಿಗ ಕಾರ್ಯಕರ್ತರೊಂದಿಗೆ ಬಂದು ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಬಂಟ್ವಾಳ ಕ್ಷೇತ್ರದ ಅಭ್ಯರ್ಥಿ ಶಾಸಕ ರಾಜೇಶ್ ನಾಯ್ಕ್ ಅವರು ತಿಳಿಸಿದರು.

ಅವರು ಬಿಸಿರೋಡಿನ ಪಕ್ಷದ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ವಿಚಾರ ತಿಳಿಸಿದರು. ಬೆಳಿಗ್ಗೆ 8 ಗಂಟೆಗೆ ದೇವಿಗೆ ಪೂಜೆ ಸಲ್ಲಿಸಿ ಬಳಿಕ 8.30 ಕ್ಕೆ ಕಾರ್ಯಕರ್ತರ ಜೊತೆ ಹೊರಡಲಿದ್ದೇವೆ. ಪಕ್ಷದ ನಿರ್ಧಾರಕ್ಕೆ ನಾನು ಬದ್ದನಾಗಿದ್ದು, ಪಕ್ಷದ ಸೂಚನೆಯಂತೆ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದು, ಎ.15 ರ ವಿಷು ಹಬ್ಬದ ದಿನವಾದ ಶನಿವಾರ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಅವರು ತಿಳಿಸಿದರು.

ಕ್ಷೇತ್ರದ ಜನರಿಗೆ ಶಾಂತಿ ನೆಮ್ಮದಿಯ ಸಮೃದ್ದಿಯ ಬಂಟ್ವಾಳ ಬೇಕಾಗಿದೆ, ಹಾಗಾಗಿ ಕೇಂದ್ರ ,ರಾಜ್ಯದ ಯೋಜನೆಗಳು ಮತ್ತು ಅಭಿವೃದ್ಧಿ ಜೊತೆಗೆ ಶಾಂತಿಯ ಬಂಟ್ವಾಳವನ್ನು ಉಳಿಸಿಕೊಳ್ಳಲು ಮತ್ತೆ ಬಿಜೆಪಿಗೆ ಬೆಂಬಲ ನೀಡುತ್ತಾರೆ, ರಾಜ್ಯದಲ್ಲಿ ಮತ್ತೆ ಬಿಜೆಪಿ ಆಡಳಿತಕ್ಕೆ ಬರುತ್ತದೆ ಎಂದು ಅವರು ತಿಳಿಸಿದರು.

ದೇವಪ್ಪ ಪೂಜಾರಿ ಮಾತನಾಡಿ, ಕಳೆದ ಐದು ವರ್ಷಗಳಲ್ಲಿ 59 ಗ್ರಾಮ ಪಂಚಾಯತ್ ಗಳಿಗೂ ಕ್ಷೇತ್ರದ ಉದ್ದಗಲಕ್ಕೂ ಸಂಚರಿಸಿ ಕ್ಷೇತ್ರದ ಮತದಾರರ ಕಷ್ಟಸುಖಗಳಿಗೆ ಸ್ಪಂದಿಸಿದ್ದಾರೆ. ಈ ಬಾರಿ ರಾಜೇಶ್ ನಾಯ್ಕ್ ಅವರು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡಲಿದ್ದೇವೆ. 2023 ರ ಚುನಾವಣೆಯಲ್ಲಿ ಮತ್ತೆ ಗೆಲುವು ಸಾಧಿಸುವುದು ನಿಶ್ಚಿತ, ಆದರೆ 30 ಸಾವಿರ ಅಂತರಗಳಿಂದ ಗೆಲುವು ಸಾಧಿಸಬೇಕು ಎಂಬುದು ಬಿಜೆಪಿ ಕಾರ್ಯಕರ್ತರ ಯೋಚನೆಯಾಗಿದೆ.

ರವಿಶಂಕರ್ ಮಿಜಾರು, ದೇವದಾಸ್ ಶೆಟ್ಟಿ, ಡೊಂಬಯ್ಯ ಅರಳ ಉಪಸ್ಥಿತರಿದ್ದರು.

More from the blog

ಕಾಡಿನಲ್ಲಿ ಕೊಳೆತ ತಲೆಬುರುಡೆ, ಚೀಲ ಪತ್ತೆ

ಸುಳ್ಯ: ಕಾಡಿನಲ್ಲಿ ಕೊಳೆತ ತಲೆಬುರುಡೆ ಹಾಗೂ ಚೀಲ ಪತ್ತೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಳಿನೆಲೆ ಗ್ರಾಮದ ಚಂದ್ರಶೇಖರ್ ಎಂಬುವರು ದೂರು ದಾಖಲಿಸಿದ್ದಾರೆ. ಚಂದ್ರಶೇಖರ್ ಅವರು ಸ್ಥಳೀಯರೊಂದಿಗೆ ಏ. 19 ರಂದು ಕಾಡಿನಿಂದ...

ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಎಸ್.ಎಂ. ಮುಹಮ್ಮದ್ ಅಲಿ ಯವರಿಗೆ ಅಭಿನಂದನೆ

ಬಂಟ್ವಾಳ : ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕದ ಪೂರ್ವಾದ್ಯಕ್ಷ ಎಸ್.ಎಂ. ಮುಹಮ್ಮದ್ ಅಲಿ ಶಾಂತಿ ಅಂಗಡಿ ಅವರನ್ನು ಘಟಕದ ವತಿಯಿಂದ ಅಭಿನಂದಿಸಲಾಯಿತು. ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕಾದ್ಯಕ್ಷ ರಶೀದ್...

ಎ: 22: ವಿಟ್ಲದಲ್ಲಿ ಶ್ರೀ ವಿಘ್ನೇಶ್ವರ ರೂಫಿಂಗ್ಸ್ & ಎಂಜಿನಿಯರಿಂಗ್ ವರ್ಕ್ಸ್, ಕ್ರೈನ್ ಸರ್ವೀಸ್, ಶ್ರೀ ವಿಘ್ನೇಶ್ವರ ಸ್ಟೀಲ್ಸ್ ಸ್ಥಳಾಂತರಗೊಂಡು ಶುಭಾರಂಭ

ವಿಟ್ಲ: ಕಳೆದ ಹಲವಾರು ವರುಷಗಳಿಂದ ವಿಟ್ಲ - ಪುತ್ತೂರು ರಸ್ತೆಯ ಮೇಗಿನ ಪೇಟೆಯಲ್ಲಿ ವ್ಯವಹಾರ ನಡೆಸುತ್ತಿದ್ದ ಶ್ರೀ ವಿಘ್ನೇಶ್ವರ ರೂಫಿಂಗ್ಸ್ & ಎಂಜಿನಿಯರಿಂಗ್ ವರ್ಕ್ಸ್, ಕ್ರೈನ್ ಸರ್ವೀಸ್ ಹಾಗೂ ಶ್ರೀ ವಿಘ್ನೇಶ್ವರ ಸ್ಟೀಲ್ಸ್...

ನೇತ್ರಾವತಿ ನದಿಗೆ ಈಜಲು ಹೋದ ಬಾಲಕ ನೀರುಪಾಲು

ಬಂಟ್ವಾಳ : ನೇತ್ರಾವತಿ ನದಿಗೆ ಈಜಲು ಹೋದ ಬಾಲಕನೋರ್ವ ನೀರುಪಾಲಾದ ಘಟನೆ ಕಡೇಶ್ವಾಲ್ಯ ಸಮೀಪದ ನೆಚ್ಚಬೆಟ್ಟು ಎಂಬಲ್ಲಿ ಶನಿವಾರ ಸಂಜೆ ವೇಳೆಗೆ ಸಂಭವಿಸಿದೆ. ಸ್ಥಳೀಯ ನಿವಾಸಿ ಸಹೀರ್ ಎಂಬವರ ಪುತ್ರ ಸುಹೈಲ್ (13) ನೀರುಪಾಲಾದ...