Saturday, April 6, 2024

ಮೆಚ್ಚಿನ ನಾಯಕನಿಗಾಗಿ 35 ಕಿ.ಮಿ.‌ನಡೆದು ಬಂದ ದಂಪತಿ

ಬಂಟ್ವಾಳ: ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ನಾಮ‌ಪತ್ರ ಸಲ್ಲಿಸಲು ಪೊಳಲಿ ಕ್ಷೇತ್ರದಿಂದ‌ ಪಾದಾಯಾತ್ರೆಯ ಮೂಲಕ ಆಗಮಿಸುವ ಸುದ್ದಿ ತಿಳಿದ ದಂಪತಿ ತಮ್ಮ ಮನೆಯಿಂದ ಸುಮಾರು 35 ಕಿ.ಮಿ.ದೂರದವರೆಗೆ ಕಾಲ್ನಡಿಗೆಯಲ್ಲಿ ಆಗಮಿಸಿ ಪಕ್ಷದ ಅಭ್ಯರ್ಥಿಗೆ ಶುಭಾಶಯ ಕೋರಿದ ಘಟನೆ ಬಂಟ್ವಾಳದಲ್ಲಿ ನಡೆಯಿತು.

ಬಡಗಕಜೆಕಾರು ಗ್ರಾ.ಪಂ.ಮಾಜಿ ಸದಸ್ಯ ಗಂಗಾಧರ ಪೂಜಾರಿ ತನ್ನ ಪತ್ನಿ ಚಂದ್ರಾವತಿ ಅವರ ಜೊತೆಗೂಡಿ ಕಜೆಕಾರಿನ ಮಹಾದೇಶ್ವರ‌ ದೇವಸ್ಥಾನದಿಂದ‌ ಪಾದಯಾತ್ರೆ ಆರಂಭಿಸಿದರು.

ಪುಂಜಾಲಕಟ್ಟೆಯಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಬಂದು ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರನ್ನು ಭೇಟಿಯಾದರು. ರಾಜೇಶ್ ನಾಯ್ಕ್ ಅವರು ಭ್ರಷ್ಟಾಚಾರ ರಹಿತ ಆಡಳಿತವನ್ನು ತನ್ನ ಶಾಸಕತ್ವದ ಸಮಯದಲ್ಲಿ ನೀಡಿದ್ದು, ಹಲವು ಬಾರಿ ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳನ್ನು ಅರಿತು ಪರಿಹರಿಸುವ ಪ್ರಯತ್ನ ಮಾಡಿದ್ದಾರೆ. ಅವರನ್ನು ಬೆಂಬಲಿಸುವ ಸಲುವಾಗಿ ಕಾಲ್ನಡಿಗೆಯ ಮೂಲಕ ಆಗಮಿಸಿದ್ದೇವೆ ಎಂದು ತಿಳಿಸಿದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...