Friday, April 19, 2024

ಕರಿಯಂಗಳ ಗ್ರಾಮದ ಬೂತ್ ಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ‌ ರಾಜೇಶ್ ನಾಯ್ಕ್

ನಿಮ್ಮ‌ನಿಮ್ಮ ಬೂತ್ ಗಳಲ್ಲಿ ಮತದಾರರನ್ನು ಬೇಟಿ ಮಾಡಿ, ಪ್ರತಿ ಮತಗಳನ್ನು ಬಿಜೆಪಿ ಪಕ್ಷಕ್ಕೆ ಸಿಗುವಂತೆ ಮಾಡಿ ಹಾಗಾದರೆ ಗೆಲುವು ನಿಶ್ಚಿತ ಎಂದು ಶಾಸಕ‌ ರಾಜೇಶ್ ನಾಯ್ಕ್ ಅವರು ಕಾರ್ಯಕರ್ತರಿಗೆ ತಿಳಿಸಿದರು.

ಅವರು ಕರಿಯಂಗಳ ಗ್ರಾಮದಲ್ಲಿ ಬೂತ್ ಗಳಿಗೆ ಬೇಟಿ ನೀಡಿ ಮತಯಾಚನೆ ನಡೆಸಿದ ಬಳಿಕ ಕಾರ್ಯಕರ್ತರ ಜೊತೆಗೆ ಮಾತನಾಡಿದರು.

ಚುನಾವಣೆ ನಡೆಯವವರೆಗೆ ಪ್ರತಿ ಕ್ಷಣವನ್ನು ಬಿಜೆಪಿಯ ಗೆಲುವಿಗಾಗಿ ಮೀಸಲಿಡಿ, ಮುಂದಿನ ಐದು ವರ್ಷಗಳ ಕಾಲ ಬಿಜೆಪಿ ಪಕ್ಷ ಕಾರ್ಯಕರ್ತರಿಗಾಗಿ ಶ್ರಮಿಸುತ್ತದೆ ಎಂದು ಭರವಸೆ ನೀಡಿದರು.

ಭ್ರಷ್ಟಾಚಾರದಲ್ಲಿ ಜನರ ಹಣವನ್ನು ಸುಳಿಗೆ ಮಾಡಿದ ಕಾಂಗ್ರೆಸ್ ಗೆ ಸೋಲಿನ‌ ಭೀತಿಯಿಂದ ಇಲ್ಲಸಲ್ಲದ ಆರೋಪದಲ್ಲಿ ತೊಡಗಿದೆ.

ಬಿಜೆಪಿಯ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು ಪಾರದರ್ಶಕವಾಗಿದ್ದು, ಕಾರ್ಯಕರ್ತರು ಮನೆಮನೆಗೆ ಹೋಗಿ ನೆನಪಿಸುವ ಕಾರ್ಯ ನಡೆಯಬೇಕು ಎಂದು ತಿಳಿಸಿದರು.

ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದ್ದು,ಕಾರ್ಯಕರ್ತರು ಗೌರವದಿಂದ ಮತಕೇಳುಬಹುದು.

ಕಾರ್ಯಕರ್ತರು ಜೊತೆಯಾಗಿ ಅಭಿವೃದ್ಧಿಯನ್ನು ಮುಂದಿಟ್ಟಕೊಂಡು ಮತಯಾಚನೆ ಮಾಡಿ ಎಂದು ಅವರು ಕಾರ್ಯಕರ್ತರಿಗೆ ಬಿಜೆಪಿ ಜಿಲ್ಲಾ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ ಮಾತನಾಡಿ, ಹಿಂದೂ ಯುವಕರ‌ ಮೇಲೆ ಸುಳ್ಳು ಕೇಸು ದಾಖಲಿಸಿ ,ಅಶಾಂತಿ ವಾತವರಣ ಸೃಷ್ಟಿಸಿದ ಕಾಂಗ್ರೆಸ್ ಅಭ್ಯರ್ಥಿ ಮತ್ತೆ ಈ ಬಾರಿ ನನ್ನ ಕಡೆಯ ಚುನಾವಣೆ ಎಂದು ಕಣ್ಣೀರು ಸುರಿಸಿ ,ಮತ ನೀಡಿ ಎಂದು ಕೈ ಕಾಲು ಹಿಡಿಯುವ ಕೆಲಸ ಮಾಡುತ್ತಿದ್ದು, ಮತದಾರರು ಎಚ್ಚರಿಕೆಯಿಂದ ಇರಬೇಕು.

ಅವರ ಮೊಸಲೆ ಕಣ್ಣೀರಿಗೆ ಮರುಳಾಗಿ ಕಾಂಗ್ರೇಸ್ ಗೆ ಮತನೀಡಿದರೆ ಮತ್ತೆ ಬಂಟ್ವಾಳದಲ್ಲಿ ಕೋಮುಗಲಭೆಗೆ ನಾವು ಸಹಕಾರ ನೀಡಿದಂತಾಗುತ್ತದೆ ಎಂದು ತಿಳಿಸಿದರು.

ಹಾಗಾಗಿ ಶಾಂತಿಯ ಬಂಟ್ವಾಳವನ್ನು ಮುಂದುವರಿಸಿಕೊಂಡು ಹೋಗುವುದರ ಜೊತೆಗೆ ಅಭಿವೃದ್ಧಿಗಾಗಿ ರಾಜೇಶ್ ನಾಯ್ಕ್ ಅವರನ್ನು ಈ ಬಾರಿ ಅತ್ಯಂತ ಹೆಚ್ಚಿನ ಮತಗಳಿಂದ ಗೆಲ್ಲಿಸಿ ವಿಧಾನಸಭೆಗೆ ಕಳುಹಿಸಬೇಕು ಎಂದು ಅವರು ಮನವಿ ಮಾಡಿದರು.

ಜಿಲ್ಲಾ ಸಮಿತಿ ಕಾರ್ಯಕಾರಿಣಿ ಸದಸ್ಯ ವೆಂಕಟೇಶ್ ನಾವಡ , ಗ್ರಾ.ಪಂ.ಸದಸ್ಯ ಲೋಕೇಶ್ ಭರಣಿ,ಚಂದ್ರಾವತಿ ಪೊಳಲಿ, ಪ್ರಮುಖರಾದ ಸುಕೇಶ್ ಚೌಟ, ಬಂಟ್ವಾಳ ಯುವಮೋರ್ಚಾದ ಅದ್ಯಕ್ಷ ಕಿಶೋರ್ ಪಲ್ಲಿಪಾಡಿ, ತಾ.ಪಂ.ಮಾಜಿ ಸದಸ್ಯ ಯಶವಂತ ಪೊಳಲಿ ಮತ್ತಿತರರು ಉಪಸ್ಥಿತರಿದ್ದರು.

More from the blog

ಬಿಸಿರೋಡಿನ ವಾಣಿಜ್ಯ ಕಟ್ಟಡದ ಜಗುಲಿಯಲ್ಲಿ ಚೆಲ್ಲಿರುವ ರಕ್ತ : ಹಲವು ಅನುಮಾನ

ಬಂಟ್ವಾಳ: ಬಿಸಿರೋಡಿನ ವಾಣಿಜ್ಯ ಮಳಿಗೆಯ ಮುಂಭಾಗವೊಂದರಲ್ಲಿ ರಕ್ತ ಚೆಲ್ಲಿರುವುದು ಕಂಡು ಬಂದಿದ್ದು, ಅಂಗಡಿ ಮಾಲಕರಲ್ಲಿ ಒಂದಷ್ಟು ಗೊಂದಲ ಉಂಟಾದ ಘಟನೆ ನಡೆದಿದೆ. ಎ.18 ರಂದು ಬೆಳಿಗ್ಗೆ ತಾ.ಪಂ. ನ ವಾಣಿಜ್ಯ ಕಟ್ಟಡವೊಂದರ ಜಗುಲಿಯಲ್ಲಿ ರಕ್ತ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಹಿಮ್ಮುಖವಾಗಿ ಚಲಿಸಿದ ಪಿಕಪ್‌… ವ್ಯಕ್ತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಪಿಕಪ್‌ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ರುಕ್ಮ ಮುಗೇರ ಹಾಗೂ ನಾಗೇಶ್‌ ಅವರು ಪಿಕಪ್‌ ವಾಹನದಲ್ಲಿ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...