Tuesday, April 16, 2024

5000 ಕೋಟಿ ರೂ. ಅನುದಾನದಲ್ಲಿ ಬಂಟ್ವಾಳ ಅಭಿವೃದ್ಧಿ ಪಡಿಸಿದ ತೃಪ್ತಿಯಿದೆ : ರಮಾನಾಥ ರೈ

ಬಂಟ್ವಾಳ : 2013-18ರ ಅವಧಿಯಲ್ಲಿ ಸಿದ್ದರಾಮಯ್ಯ ಸರಕಾರದಲ್ಲಿ ಸಚಿವನಾಗಿದ್ದಾಗ ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಸುಮಾರು ರೂ. 5,000 ಕೋಟಿ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಕಾರ್ಯ ನಿರ್ವಹಿಸಿದ ತೃಪ್ತಿಯಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ. ರಮಾನಾಥ ರೈ ತಿಳಿಸಿದರು.

ಅವರು ಕನ್ಯಾನದಲ್ಲಿ ಮನೆಭೇಟಿ ಕಾರ್ಯಕ್ರಮದ ವೇಳೆ ಮಾತನಾಡಿದರು. ವಿವಿಧ ಪ್ರಗತಿಪರ ಯೋಜನೆಗಳನ್ನು ತಂದು ಬಂಟ್ವಾಳದ ಸಮಗ್ರ ಅಭಿವೃದ್ಧಿ ಕಾರ್ಯಗಳನ್ನು ನನ್ನ ಅವಧಿಯಲ್ಲಿ ಮಾಡಲಾಗಿತ್ತು. ಆದರೂ, ಕಳೆದ ಬಾರಿ ಅಪಪ್ರಚಾರಗಳ ಮೂಲಕ ನನ್ನನ್ನು ಸೋಲಿಸಲಾಯಿತು. ಆದರೆ ಈ ಬಾರಿ ಬಿಜೆಪಿಯ ಇಂತಹ ಅಪಪ್ರಚಾರಗಳಿಗೆ ಜನತೆ ಕಿವಿಗೊಡುತ್ತಿಲ್ಲ. ಹೀಗಾಗಿ ಬಿಜೆಪಿಗರು ಇನ್ನಷ್ಟು ಅಪಪ್ರಚಾರ, ಸುಳ್ಳು ವದಂತಿಗಳನ್ನು ಹಬ್ಬಿಸಲು ಯತ್ನಿಸುತ್ತಿದ್ದಾರೆ. ಅಂತಹ ಯತ್ನಗಳನ್ನು ವಿಫಲಗೊಳಿಸಲು ನಾವೂ ಸಜ್ಜಾಗಿದ್ದೇವೆ. ಆ ಮೂಲಕ ಚುನಾವಣೆಯಲ್ಲಿ ದಾಖಲೆಯ ಗೆಲುವಿಗೆ ಸಿದ್ಧತೆ ಭರದಿಂದ ನಡೆದಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ನಿಕಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ ಎಸ್ ಮೊಹಮ್ಮದ್,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ,ಪಂಚಾಯತ್ ರಾಜ್ ಜಿಲ್ಲಾ ಅಧ್ಯಕ್ಷರು ಸುಭಶ್ಚಂದ್ರ ಶೆಟ್ಟಿ ಕೊಲ್ನಾಡು,ಕನ್ಯಾನ ವಲಯ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಮಜೀದ್ ಕನ್ಯಾನ, ಪಂಚಾಯತ್ ಅಧ್ಯಕ್ಷ ಅಬ್ದುಲ್ ರಹ್ಮಾನ್, ಸದಸ್ಯ ಕೃಷ್ಣ ನಾಯ್ಕ್, ಪ್ರಮುಖರುಗಳಾದ ಮೊಯಿದಿನ್ ಮಂಡ್ಯೂರು, ಮೊಯಿದಿನ್ ಹಾಜಿ ಬೈರಿಕಟ್ಟೆ, ಗಂಗಾಧರ್ ಕನ್ಯಾನ, ಖಾಸಿಂ ಮಂಡ್ಯೂರು, ಖಾದರ್ ಡಿ.ಕೆ., ವಸಂತ ಬೆಲ್ಚಾಡ ಪಂಜಾಜೆ, ಉಸ್ಮಾನ್ ಸೆಟ್ಟಿಬೆಟ್ಟು, ಇಬ್ರಾಹಿಂ ಕೊಣಾಲೆ, ಅಬೂಬಕ್ಕರ್ ಅಂಗ್ರಿ, ಗಣೇಶ್ ಕುಮಾರ್ ಅರ್ಪಿಣಿ ಮತ್ತಿತರರು ಉಪಸ್ಥಿತರಿದ್ದರು.

More from the blog

ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ಸಾವು

ಮೂಡುಬಿದಿರೆ: ಮೆದುಳು ಜ್ವರ ಉಲ್ಪಣಗೊಂಡ ಪರಿಣಾಮ ವಿದ್ಯಾರ್ಥಿನಿಯೋರ್ವಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೂಡುಬಿದಿರೆ ನಿವಾಸಿ ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ ಮೃತ್ಯು. ಸ್ವಸ್ತಿ ಶೆಟ್ಟಿ ಅವರು ಶಿರ್ತಾಡಿ ಮೌಂಟ್‌ ಕಾರ್ಮೆಲ್‌ ಹೈಸ್ಕೂಲ್ ನಲ್ಲಿ ನ...

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ

ವಿಟ್ಲ - ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ ನೀರುಮಜಲು ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಕಳೆದ...

ಕೆನರಾ ರೊಬೆಕೋ ಸಂಸ್ಥೆಯಿಂದ ಕೊಯಿಲ ಶಾಲಾ ವಿದ್ಯಾರ್ಥಿಗಳಿಗೆ ಬೈಸಿಕಲ್ ಕೊಡುಗೆ

ಬಂಟ್ವಾಳ: ತಾಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಕೆನರಾ ರೊಬೆಕೋ ಸಂಸ್ಥೆಯ ವತಿಯಿಂದ 45 ಬೈಸಿಕಲ್ ಗಳನ್ನು ವಿತರಿಸಲಾಯಿತು. ಕೆನರಾ ರೊಬೆಕೋ ಸಂಸ್ಥೆಯ ಮಂಗಳೂರು ವಿಭಾಗದ ವ್ಯವಸ್ಥಾಪಕರಾದ ಮುರಳೀಧರ ಶೆಣೈ, ಅಧಿಕಾರಿ ರಾಜೇಶ್...